ಯಡಿಯೂರಪ್ಪ ಎಲ್ಲ ಪರೀಕ್ಷೆ ಪಾಸಾಗಿದ್ದಾರೆ; ಬಿಜೆಪಿ ಗೆಲುವು ಖಚಿತ: ಶಾ
Team Udayavani, May 9, 2018, 11:05 AM IST
ಹೊಸದಿಲ್ಲಿ : “ಬಿ ಎಸ್ ಯಡಿಯೂರಪ್ಪ ತಮಗೆದುರಾಗಿರುವ ಎಲ್ಲ ಪರೀಕ್ಷೆಗಳಲ್ಲಿ ಪಾಸಾಗಿದ್ದಾರೆ; ಕರ್ನಾಟಕದಲ್ಲಿ ಬಿಜೆಪಿ ಗೆಲ್ಲುವುದು ಖಚಿತ” ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
”ಬಿಜೆಪಿಗೆ ಯಾವುದೇ ರೀತಿಯ ಚುನಾವಣೋತ್ತರ ಹೊಂದಾಣಿಕೆ, ಮೈತ್ರಿಗಳ ಅಗತ್ಯ ಬೀಳುವುದಿಲ್ಲ; ಕರ್ನಾಟಕದಲ್ಲಿ ಮುಂದಿನ ಸರಕಾರವನ್ನು ರಚಿಸುವುದು ಬಿಜೆಪಿಯೇ” ಎಂದು ಅಮಿತ್ ಶಾ ವಿಶ್ವಾಸಭರಿತರಾಗಿ ಝೀ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.
5.6 ಕೋಟಿ ಮತದಾರರು ಇದೇ ಮೇ 12ರಂದು ಮತ ಚಲಾಯಿಸುವ ಕರ್ನಾಟಕ ವಿಧಾನಸಭೆಯ 224 ಸ್ಥಾನಗಳ ಪೈಕಿ 113 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆಲುವುದು ಖಚಿತ; ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿನ ಎಲ್ಲ ಪರೀಕ್ಷೆಗಳಲ್ಲಿ ಪಾಸಾಗಿರುವ ಬಿ ಎಸ್ ಯಡಿಯೂರಪ್ಪ ಅವರೇ ಮುಂದಿನ ಸಿಎಂ ಆಗುವುದು ಖಚಿತ ಎಂದು ಅಮಿತ್ ಶಾ ಹೇಳಿದರು.
ಕರ್ನಾಟಕದಲ್ಲಿ ಹಾಲಿ ಪರಿಸ್ಥಿತಿ ಘನ ಗಂಭೀರವಾಗಿದೆ; ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬಿದ್ದಿದೆ. ಕಳೆದ ನಾಲ್ಕು ವರ್ಷಗಳಿಂದ ಜನರ ಆಶೋತ್ತರಗಳನ್ನು ನಿರ್ಲಕ್ಷಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಂದಿನಿಂದಲೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ; ರೈತರ ಆತ್ಮಹತ್ಯೆಯಲ್ಲಿ ಶೇ.173ರಷ್ಟು ಹೆಚ್ಚಳವಾಗಿದೆ. ಕರ್ನಾಟಕಕ್ಕೆ ಜನರ ಸಮಸ್ಯೆಗಳನ್ನು ಆಲಿಸುವ, ಪರಿಹರಿಸುವ ಸರಕಾರದ ಅಗತ್ಯವಿದೆ ಎಂದು ಅಮಿತ್ ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.