Yemen; ಕೇರಳದ ನರ್ಸ್ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Team Udayavani, Jan 1, 2025, 6:27 AM IST
ಹೊಸದಿಲ್ಲಿ: ಯೆಮೆನ್ ಪ್ರಜೆಯನ್ನು ಹತ್ಯೆ ಮಾಡಿದ ಆರೋಪಕ್ಕೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ನೀಡಲು ಅಲ್ಲಿನ ಅಧ್ಯಕ್ಷ ರಷದ್- ಅಲ್-ಅಮಿನಿ ಅನುಮೋದನೆ ನೀಡಿದ್ದಾರೆ. ಮೂಲಗಳ ಪ್ರಕಾರ ಇನ್ನು ಒಂದು ತಿಂಗಳಲ್ಲಿ ಶಿಕ್ಷೆ ಜಾರಿಯಾಗಲಿದೆ.
ಯೆಮೆನ್ ಅಧ್ಯಕ್ಷರ ತೀರ್ಮಾನದ ಬಗ್ಗೆ ಅವರ ತಾಯಿ ಪ್ರೇಮಾ ಕುಮಾರಿ ಆಕ್ಷೇಪ ವ್ಯಕ್ತಪಡಿದ್ದಾರೆ. ಜತೆಗೆ ಕೇಂದ್ರ ಸರಕಾರ ಸೂಕ್ತ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಏನಿದು ಪ್ರಕರಣ?: ಕೇರಳದ ಪಾಲಕ್ಕಾಡ್ ಮೂಲದ ನಿಮಿಷ ಪ್ರಿಯಾ 2014ರಲ್ಲಿ ಯೆಮೆನ್ನಲ್ಲಿ ತಮ್ಮದೇ ಆಗಿರುವ ಕ್ಲಿನಿಕ್ ತೆರೆಯಲು ಮುಂದಾಗಿದ್ದರು. ಅದಕ್ಕಾಗಿ ಅಲ್ಲಿನ ನಿಯಮದಂತೆ ಸ್ಥಳೀಯ ತಲಾಲ್ ಅಬೊ ಮಹದಿ ಜತೆಗೆ ಪಾಲುದಾರಿಕೆ ಮಾಡಿಕೊಂಡಿದ್ದರು. ಒಂದು ಹಂತದಲ್ಲಿ ಆತನ ಜತೆಗೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ನಡುವೆ ನರ್ಸ್ ದೇಶ ತೊರೆಯದಂತೆ ಆತ ಪಾಸ್ಪೋರ್ಟ್ ವಶಪಡಿಸಿಕೊಂಡಿದ್ದ. ಅದನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಆತನಿಗೆ ಮತ್ತು ಬರುವ ಇಂಜೆಕ್ಷನ್ ನೀಡಿದ್ದರು. ಅದರ ಓವರ್ ಡೋಸ್ ಆದ ಪರಿಣಾಮ ಆತ ಮೃತಪಟ್ಟಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.