ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ನಿವಾಸದ ಮೇಲೆ ಇಡಿ ದಾಳಿ: ಲುಕ್ ಔಟ್ ನೋಟಿಸ್ ಜಾರಿ
Team Udayavani, Mar 7, 2020, 8:00 AM IST
ಮುಂಬೈ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ನ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಹಾಗೂ ಮಾಜಿ ಸಿಇಓ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ತಡರಾತ್ರಿ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಈಗಾಗಲೇ ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಶನ್ (ಡಿಎಚ್ ಎಫ್ ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಯೆಸ್ ಬ್ಯಾಂಕ್ ಡಿಎಚ್ ಎಫ್ ಎಲ್ ಗೆ ನೂರಾರು ಕೋಟಿ ಮೌಲ್ಯದ ಸಾಲವನ್ನು ಒದಗಿಸಿದೆ ಎಂದು ಇಡಿ ಮೂಲಗಳು ತಿಳಿಸಿವೆ ಎಮದು ವರಿದಿಯಾಗಿದೆ. ಈ ಸಾಲವೇ ಎನ್ ಪಿ ಎಗಳಾಗಿ ಬದಲಾಗಿ ನಂತರ ಬ್ಯಾಂಕಿಗೆ ನಷ್ಟವಾಗಲು ಕಾರಣವಾಯಿತು ಎಂದು ಹೇಳಲಾಗಿದೆ.
ಅಕ್ರಮ ಹಣ ವಹಿವಾಟು ಕಾಯ್ದೆ (ಪಿಎಂಎಲ್ ಎ) ಅಡಿಯಲ್ಲಿ ಕಪೂರ್ ವಿರುದ್ದ ಈಗಾಗಲೇ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ರಾಣಾ ಕಪೂರ್ ದೇಶ ತೊರೆಯದಂತೆ ಲುಕ್ ಔಟ್ ನೋಟಿಸ್ ನೀಡಲಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ತನ್ನ ಆರ್ಥಿಕ ಸ್ಥಿತಿಯಲ್ಲಿ ಗಂಭೀರ ಕುಸಿತದಿಂದಾಗಿ ತೊಂದರೆಗೀಡಾದ ಖಾಸಗಿ ವಲಯದ ಯೆಸ್ ಬ್ಯಾಂಕ್ನ ಮೇಲೆ ಹಿಡಿತ ಸಾಧಿಸಿದ ಕೆಲವೇ ಗಂಟೆಗಳ ನಂತರ ಇಡಿ ರಾಣಾ ಕಪೂರ್ ನಿವಾಸದ ಮೇಲೆ ದಾಳಿ ನಡೆಸಿದೆ.
ಯೆಸ್ ಬ್ಯಾಂಕಿನಲ್ಲಿ ಪ್ರಸ್ತುತ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾದ ಅಂಶಗಳನ್ನು ಪರಿಶೀಲಿಸಲು ಮತ್ತು ವೈಯಕ್ತಿಕ ಜವಾಬ್ದಾರಿಗಳನ್ನು ನಿಯೋಜಿಸಲು ಸರ್ಕಾರ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಮಾಹಿತಿ ಕೇಳಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.