ಎತ್ತಿನಹೊಳೆ: ಇಂದು ತೀರ್ಪು

Team Udayavani, Feb 7, 2017, 3:45 AM IST

06-NTI-11.jpg

ಹೊಸದಿಲ್ಲಿ: ಎತ್ತಿನಹೊಳೆ ಯೋಜನೆ ಸಂಬಂಧ ಮಂಗಳವಾರ ತೀರ್ಪು ನೀಡುವುದಾಗಿ ರಾಷ್ಟ್ರೀಯ ಹಸಿರು ನ್ಯಾಯ ಪೀಠ ಹೇಳಿದೆ. ಜತೆಗೆ ನ್ಯಾಯಾಂಗದ ಶಿಸ್ತು ಪಾಲಿಸಿಲ್ಲವೆಂದು ಪ್ರಕರಣದಲ್ಲಿನ ದೂರುದಾರರನ್ನೇ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು. 

ಸೋಮವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿ ಕೊಂಡ ಹಸಿರು ನ್ಯಾಯ ಪೀಠದ ಮುಖ್ಯಸ್ಥ ನ್ಯಾ| ಸ್ವತಂತ್ರ ಕುಮಾರ್‌ ನೇತೃತ್ವದ ಪೀಠ, ದೂರುದಾರರು ಚೆನ್ನೈ ಹಸಿರು ನ್ಯಾಯ ಪೀಠದ ಆದೇಶದಲ್ಲಿ ಉಲ್ಲೇಖೀಸಿದ್ದ ಅಂಶಗಳನ್ನು ನ್ಯಾಯ ಪೀಠದಲ್ಲಿ ಮತ್ತೆ ಪ್ರಶ್ನಿಸಿದ್ದನ್ನು ತರಾಟೆಗೆ ತೆಗೆದುಕೊಂಡು, ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು.

ಎತ್ತಿನಹೊಳೆ ಯೋಜನೆಯನ್ನು ಪ್ರಶ್ನಿಸಿರುವ ದೂರು ದಾರರಾದ ಕೆ. ಎನ್‌. ಸೋಮಶೇಖರ್‌, ಕಿಶೋರ್‌ ಕುಮಾರ್‌ ಪರ ವಕೀಲರಿಗೆ 2013ರ ಮಾರ್ಚ್‌ನಲ್ಲಿ ಪರಿಸರ ಮತ್ತು ಅರಣ್ಯ ಸಚಿವಾಲಯವು ಕುಡಿಯುವ ನೀರಿನ ಯೋಜನೆಯನ್ನು ಪರಿಸರ ಅನುಮತಿಯಿಂದ ಹೊರಗಿಟ್ಟು ಬರೆದಿದ್ದ ದಾಖಲೆಗೆ ಶಾಸನಬದ್ಧ ಮಾನ್ಯತೆ ಇದೆಯೇ, ಇಲ್ಲವೇ ಎಂಬುದನ್ನು ಮಂಗಳವಾರ ಮನವರಿಕೆ ಮಾಡಿಕೊಡಬೇಕೆಂದು ನ್ಯಾಯ ಪೀಠ ತಾಕೀತು ಮಾಡಿದೆ.

ಕುಡಿಯುವ ನೀರಿಗೆ ಆಕ್ಷೇಪವಿಲ್ಲ: ನ್ಯಾ| ಕುಮಾರ್‌, ಕುಡಿಯುವ ನೀರಿನ ಯೋಜನೆಗೆ ನಿಮ್ಮದೇನು ತಕರಾರು ಎಂದು ದೂರುದಾರರ ವಕೀಲರನ್ನು ಪ್ರಶ್ನಿಸಿದರು. ಸೋಮಶೇಖರ್‌ ಪರ ವಕೀಲ ಋತ್ವಿಕ್‌ ದತ್ತಾ ಮತ್ತು ಪ್ರಿನ್ಸ್‌ ಇಸಾಕ್‌ “ಯೋಜನೆಗೆ ನಮ್ಮ ತಕರಾರಿಲ್ಲ. ಆದರೆ ಸರಕಾರ ಕಾನೂನು ಪಾಲಿಸಲಿ. ಕಾನೂನಿನ ಪ್ರಕಾರ ಈ ಯೋಜನೆಗೆ ಅನುಮತಿ ಸಿಗಲು ಸಾಧ್ಯವೇ ಇಲ್ಲ. ಈ ಯೋಜನೆಯ ಕಾಮಗಾರಿ ಅತ್ಯಂತ ಸೂಕ್ಷ್ಮ ಪರಿಸರ ವಲಯದಲ್ಲಿ ನಡೆಯುತ್ತಿದೆ’ ಎಂದು ತಿಳಿಸಿದರು.

ಇದೊಂದು ಕುಡಿಯುವ ನೀರಿನ ಯೋಜನೆ ಎನ್ನುತ್ತಾರೆ. ಇಡೀ ಪಶ್ಚಿಮ ಘಟ್ಟವೇ ಕುಡಿಯುವ ನೀರಿನ ಮೂಲ. ಈ ಯೋಜನೆ ಜಾರಿಯ ಸಂದರ್ಭದಲ್ಲಿ ಪರಿಸರ ಪರಿಣಾಮ ಅಧ್ಯಯನವೇ ನಡೆದಿಲ್ಲ ಎಂದು ದೂರದಾರರ ಪರ ವಕೀಲರು ವಾದಿಸಿದರು.
ಈ ಯೋಜನೆಯ ವೆಚ್ಚ ಮತ್ತು ಲಾಭದ ವಿಶ್ಲೇಷಣೆಯನ್ನು ನಡೆಸಲಾಗಿಲ್ಲ, ಈ ಯೋಜನೆ ಅತ್ಯಂತ ಸೂಕ್ಷ್ಮ ಜೈವಿಕ ಪರಿಸರದಲ್ಲಿ ನಡೆಯುತ್ತಿದೆ. ರಾಜ್ಯ ಸರಕಾರ ಹೇಳಿದಂತೆ ಆ ಪ್ರದೇಶದಲ್ಲಿ 24 ಟಿಎಂಸಿ ನೀರು ಲಭ್ಯವಿಲ್ಲ. ಕುಡಿಯುವ ನೀರಿನ ನೆಪದಲ್ಲಿ ಕಿರು ನೀರಾವರಿ ಯೋಜನೆಗೆಳಿಗೂ ನೀರು ಎತ್ತುವ ಮತ್ತು ವಿದ್ಯುತ್‌ ಉತ್ಪಾದಿಸುವ ಲೆಕ್ಕಾಚಾರವನ್ನು ರಾಜ್ಯ ಸರಕಾರ ಹಾಕಿಕೊಂಡಿದೆ ಎಂದು ವಾದಿಸಿದರು. ರಾಜ್ಯ ಸರಕಾರ ಮತ್ತು ನೀರಾವರಿ ನಿಗಮದ ವಕೀಲರಾದ ನವೀನ್‌ ನಾಥ್‌ ಮತ್ತು ಅಶೋಕ್‌ ದೇವರಾಜ್‌,  ಕರಡು ವಿಸ್ತೃತ ಯೋಜನಾ ವರದಿಯಲ್ಲಿ ಆ ರೀತಿ ಇತ್ತು. ಆದರೆ ಪರಿಷ್ಕೃತ ಯೋಜನಾ ವರದಿಯಲ್ಲಿ ಕುಡಿಯುವ ನೀರಿಗಾಗಿಯೇ ಯೋಜನೆ ಎಂದು ಉಲ್ಲೇಖೀಸಲಾಗಿದೆ. ಕೆರೆಗಳನ್ನು ಅರ್ಧ ತುಂಬಿಸುವ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ಉದ್ದೇಶವಷ್ಟೆ ನಮ್ಮದು ಎಂದು ಪ್ರತಿವಾದ ಮಂಡಿಸಿದರು. 

ಟಾಪ್ ನ್ಯೂಸ್

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.