ಪರವಾನಿಗೆ ಇರುವ ಕಸಾಯಿಖಾನೆಗಳಿಗೆ ತೊಂದರೆ ಇಲ್ಲ: ಯೋಗಿ ಭರವಸೆ 

Team Udayavani, Mar 31, 2017, 9:31 AM IST

yogi.jpg

ಲಕ್ನೋ : ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಾತ್ರವೇ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಹೊರತು ಪರವಾನಿಗೆ ಹೊಂದಿರುವ ಕಸಾಯಿಖಾನೆಗಳಿಗೆ ಯಾವುದೇ ತೊಂದರೆ ಇಲ್ಲ ಮತ್ತು ಮಾಂಸ ವ್ಯಾಪಾರ ಮುಂದುವರಿಯಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭರವಸೆ ನೀಡಿದ್ದಾರೆ. 

ಗುರುವಾರ ಸಂಜೆ ಮಾಂಸ ವ್ಯಾಪಾರಿಗಳು  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಈ ಹೇಳಿಕೆ ನೀಡಿದ್ದಾರೆ.

ನಾವು ಜಾತಿ, ಧರ್ಮವನ್ನು ಗುರಿಯಾಗಿರಿಸಿಕೊಂಡು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ,ಅಕ್ರಮಗಳ ವಿರುದ್ಧ ಮಾತ್ರ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ನಿಯೋಗದ ಬಳಿ ಯೋಗಿ ಹೇಳಿರುವುದಾಗಿ ವರದಿಯಾಗಿದೆ.

ಮಾತುಕತೆಯ ಬಳಿಕ ಸಚಿವ ಸಿದ್ಧಾರ್ಥ್ ನಾಥ್‌ ಸಿಂಗ್‌ ಹೇಳಿಕೆ ನೀಡಿ ಪರವಾನಿಗೆ ಇರುವ ಕಸಾಯಿಖಾನೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಅಂತಹವುಗಳ ಮೇಲೆ ಕ್ರಮ ಕೈಗೊಂಡರೆ ಅಧಿಕಾರಿಗಳ ವಿರುದ್ಧವು ಶಿಸ್ತು ಕ್ರಮ ಜರಗಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಮಾತುಕತೆ ಫ‌ಲಪ್ರದವಾಗಿದ್ದು, ಭಾರತೀಯರಾಗಿ ನಿಮ್ಮ ನಿರ್ಧಾವನ್ನು ಸ್ವಾಗತಿಸುವುದಾಗಿ ಯಾವುದೇ ಅಕ್ರಮಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಮಾಂಸ ವ್ಯಾಪಾರಿಗಳು ಸಿಎಂ ಕ್ರಮಕ್ಕೆ ಬೆಂಬಲ ಸೂಚಿಸಿರುವುದಾಗಿ ಸಿದ್ಧಾರ್ಥ್ ನಾಥ್‌ ತಿಳಿಸಿದ್ದಾರೆ. 

ಮಾಂಸ ರಫ್ತು ಉದ್ಯಮಿ ಸಿರಾಜುದ್ದೀನ್‌ ಖುರೇಷಿ ನಾವು ಸಿಎಂ ಯೋಗಿ ಅವರೊಂದಿಗೆ ಫ‌ಲಪ್ರದ ಮಾತುಕತೆ ನಡೆಸಿದ್ದು , ಸಕ್ರಮ ಕಸಾಯಿಖಾನೆಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ. 

ಪ್ರತಿಭಟನೆ ನಡೆಸುವರು ತಮ್ಮ ಕೆಲಸಕ್ಕೆ ವಾಪಾಸಾಗಬೇಕು. ಪರವಾನಿಗೆ ಪಡೆದು ಮಾಂಸ ವ್ಯಾಪಾರ ಶುರು ಮಾಡಬೇಕು. ಸರ್ಕಾರ ನಿಮಗೆ ಎಲ್ಲಾ ರೀತಿ ನೆರವು ನೀಡಲಿದೆ ಎಂದು ಖುರೇಷಿ ಕರೆ ನೀಡಿದ್ದಾರೆ. 

ಸರ್ಕಾರ ಕಸಾಯಿಖಾನೆಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಕಾರಣ 25 ಲಕ್ಷ ಮಂದಿ ಮಾಂಸ ವ್ಯಾಪಾರಿಗಳು ಕಂಗಾಲಾಗಿ ಹೋಗಿದ್ದರು. ಆ ಬಳಿಕ ವ್ಯಾಪಾರ ಸ್ಥಗಿತ ಗೊಳಿಸಿ ಪ್ರತಿಭಟನೆಯನ್ನೂ ನಡೆಸಿದ್ದರು. 

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.