“ಲವ್ ಜಿಹಾದ್’ ವಿರುದ್ಧ ಸುಗ್ರೀವಾಜ್ಞೆಗೆ ಯೋಗಿ ಚಿಂತನೆ
Team Udayavani, Sep 19, 2020, 6:05 AM IST
ಲಕ್ನೋ: ಲವ್ ಜಿಹಾದ್ ಹೆಸರಿನಲ್ಲಿ ನಡೆಯುವ ಮತಾಂತರ ತಡೆಯಲು ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ದಿಟ್ಟ ನಿಲುವು ತಳೆದಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ರೂಪಿಸುವುದಲ್ಲದೆ, ಅಗತ್ಯಬಿದ್ದರೆ ಸುಗ್ರೀವಾಜ್ಞೆ ಜಾರಿಗೊಳಿಸಲು ಮುಂದಾಗುವುದಾಗಿ ಎಚ್ಚರಿಸಿದ್ದಾರೆ.
ಲಕ್ನೋದಲ್ಲಿ ಇತ್ತೀಚೆಗಷ್ಟೇ ಒಬ್ಬಳು ಹಿಂದೂ ಮಹಿಳೆ ಲವ್ ಜಿಹಾದ್ಗೆ ಗುರಿಯಾಗಿ ಅನ್ಯಧರ್ಮಕ್ಕೆ ಮತಾಂತರ ವಾಗಿದ್ದಳು. ಕೆಲವೇ ದಿನಗಳಲ್ಲಿ ಆಕೆಯ ಹತ್ಯೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಲವ್ ಜಿಹಾದ್ಗೆ ಪೂರ್ಣವಿರಾಮ ಹಾಕಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಲವ್ ಜಿಹಾದ್ ಒಂದು ಸಂಘಟಿತ ಕೃತ್ಯ. ಇದರ ನಿಯಂ ತ್ರಣಕ್ಕೆ ಅಗತ್ಯಬಿದ್ದರೆ ಸುಗ್ರೀವಾಜ್ಞೆ ತರಲೂ ಚಿಂತಿಸಲಾಗುವುದು’ ಎಂದು ಸಿಎಂ ಹೇಳಿ ರುವ ಬಗ್ಗೆ ಮೂಲಗಳು ಖಚಿತಪಡಿಸಿವೆ.
ಇತ್ತೀಚೆಗಷ್ಟೇ ಕಾನ್ಪುರದಲ್ಲಿ ಲವ್ ಜಿಹಾದ್ ಪ್ರಕರಣ ವೊಂದರ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿತ್ತು. ಇದಕ್ಕೂ ಮೊದಲು ಉ.ಪ್ರ. ಕಾನೂನು ಆಯೋಗ ಬಲವಂತದ ಮತಾಂತರ ನಿಯಂತ್ರಿಸಲು ಕಾನೂನಿನ ಅವಶ್ಯಕತೆ ಇರುವುದಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.