ಯಾವುದೇ ದೇಗುಲಕ್ಕೆ ಸ್ತ್ರೀಯರ ನಿರ್ಬಂಧ ಸಲ್ಲದು
Team Udayavani, Oct 6, 2018, 8:36 AM IST
ಹೊಸದಿಲ್ಲಿ: “”ಸಂವಿಧಾನದ ದೃಷ್ಟಿಯಲ್ಲಿ ಗಂಡು, ಹೆಣ್ಣು ಸಮಾನರು. ಹಾಗಾಗಿ, ಯಾವುದೇ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ನಿರಾಕರಿಸು ವಂತಿಲ್ಲ” ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ತಿಳಿಸಿದ್ದಾರೆ.
ಶುಕ್ರವಾರ ಖಾಸಗಿ ಸಮಾರಂಭವೊಂದರಲ್ಲಿ ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ತಾವು ಸೆ. 28ರಂದು ನೀಡಿದ್ದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, “”ಸಂವಿಧಾನದ ನೈತಿಕತೆಯಿಂದ ಯಾರೊಬ್ಬರೂ ವಂಚಿತರಾಗಬಾರದು. ಭಾರತದಲ್ಲಿ ಸಂವಿಧಾನದ ಸೌರ್ವ ಭೌಮತ್ವವೇ ಸರ್ವೋಚ್ಚವಾದದ್ದು. ನ್ಯಾಯಾಂಗವು ಸಂವಿಧಾನಾಧಾರಿತ ಕಾನೂನುಗಳನ್ನು ಪಾಲಿಸುತ್ತಿರುವ ಸ್ವತಂತ್ರ ಸಂಸ್ಥೆಯಾಗಿದ್ದು, ಶಬರಿಮಲೆ ವಿಚಾರದಲ್ಲಿ ಸಂವಿಧಾನದ ನೈತಿಕತೆ ಯನ್ನು ಪಾಲಿಸಲಾಗಿದೆ” ಎಂದರು.
ಕಾಂಗ್ರೆಸ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರಾಕರಿಸಿರುವ ಕೇರಳ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್, ಶುಕ್ರವಾರ ಪತ್ತನಂತಿಟ್ಟದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಅನೇಕ ಮಹಿಳೆಯರೂ ಭಾಗವಹಿ ಸಿದ್ದರು. ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಕೇರಳದ ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ, ಆರ್‌ಎಸ್‌ಎಸ್-ಬಿಜೆಪಿ ಹಾಗೂ ಆಡಳಿತಾರೂಢ ಎಲ್‌ಡಿಎಫ್ ಪಕ್ಷಗಳು ರಾಜ್ಯದ ಜನತೆಗೆ ಮೋಸ ಮಾಡುತ್ತಿವೆ ಎಂದು ಆಪಾದಿಸಿದರು.
ಮಹಿಳಾ ಪೊಲೀಸ್ ನೇಮಕ: ಸುಪ್ರೀಂ ತೀರ್ಪು ಹಿನ್ನೆಲೆಯಲ್ಲಿ ದೇಗುಲಕ್ಕೆ ಬರುವ ಮಹಿಳಾ ಭಕ್ತಾದಿಗಳ ಸುರಕ್ಷೆಗಾಗಿ ಶಬರಿಮಲೆಯಲ್ಲಿ ಮಹಿಳಾ ಪೊಲೀಸರನ್ನು ಕರ್ತವ್ಯಕ್ಕೆ ನೇಮಿಸ ಲಾಗುತ್ತದೆ ಎಂದು ಕೇರಳದ ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹೆರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.