ಕಿರುಕುಳ ಪ್ರಕರಣ ದಾಖಲಿಗೆ ಕಾಲಮಿತಿ ಬೇಡ: ಮೇನಕಾ
Team Udayavani, Oct 9, 2018, 8:40 AM IST
ಮುಂಬಯಿ: ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿ ವಯೋಮಿತಿ ನಿಗದಿ ಇರಬಾರದು. ಘಟನೆ ನಡೆದು 10-15 ವರ್ಷ ಕಳೆದು, ಅದರ ಬಗ್ಗೆ ಯಾರೇ ದೂರು ಸಲ್ಲಿಸಿದರೂ ಅದನ್ನು ದಾಖಲಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಸೋಮವಾರ ಕೇಂದ್ರ ಕಾನೂನು ಸಚಿವಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಲೈಂಗಿಕ ಕಿರುಕುಳ ಪ್ರಕರಣದ ಆರೋಪ ಮಾಡಿದ ಬಳಿಕ ಹಲವಾರು ಮಂದಿ ಪ್ರಮುಖರು ಅದೇ ಮಾದರಿ ದೂರುಗಳನ್ನು ಹೇಳಿಕೊಂಡ ಬಳಿಕ ಸಚಿವೆ ಮನೇಕಾ ಈ ಮನವಿ ಮಾಡಿದ್ದಾರೆ.
ಭಾರತದಲ್ಲಿಯೂ ‘ಮಿ ಟೂ’ ಆಂದೋಲನ ಶುರುವಾಗಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ. ಸಣ್ಣ ವಯಸ್ಸಿನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೂ ಕೆಲವು ವರ್ಷಗಳ ಬಳಿಕವೂ ಅವರಿಗೆ ದೂರು ದಾಖಲಿಸಲು ಅವಕಾಶ ಇರಬೇಕು ಎಂಬ ಅಂಶವನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದಾಗಿ ಮೇನಕಾ ಹೇಳಿದ್ದಾರೆ. ಹೆಚ್ಚಿನ ಸಂದರ್ಭಗಳಲ್ಲಿ ಕುಟುಂಬದ ಸದಸ್ಯರೇ ಕಿರುಕುಳ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಅಂಥವರ ವಿರುದ್ಧ ದೂರು ನೀಡಲು ಅಥವಾ ಸಾರ್ವಜನಿಕವಾಗಿ ಮಾತನಾಡಲು ಕಷ್ಟವಾಗುತ್ತದೆ ಎಂದಿದ್ದಾರೆ. ಮಿ ಟೂ ಆಂದೋಲನವನ್ನು ನಿಜವಾಗಿಯೂ ಕಿರುಕುಳಕ್ಕೆ ಒಳಗಾಗಿದ್ದರೆ ಬಳಕೆ ಮಾಡಬೇಕೇ ಹೊರತು, ಯಾರನ್ನೂ ಗುರಿಯಾಗಿಸಿಕೊಳ್ಳಬಾರದು ಎಂದಿದ್ದಾರೆ
ಕ್ಷಮೆ ಯಾಚನೆ: ನಟ-ನಿರ್ಮಾಪಕ ರಜತ್ ಕಪೂರ್ ಸೋಮವಾರ ಕ್ಷಮೆ ಯಾಚಿಸಿದ್ದಾರೆ. ಕಪೂರ್ ತಮಗೆ ಕಿರುಕುಳ ನೀಡಿದ್ದರು ಎಂದು ಇಬ್ಬರು ಮಹಿಳೆಯರು ಆರೋಪ ಮಾಡಿದ್ದರಿಂದ ಟ್ವಿಟರ್ ಮೂಲಕ ಕ್ಷಮೆ ಕೋರಿದ್ದಾರೆ. ಇನ್ನೊಂದೆಡೆ ಎಐಬಿ ಕಾಮಿಡಿ ಸಂಘಟನೆಯ ಸಹ ಸಂಸ್ಥಾಪಕ ತನ್ಮಯ್ ಭಟ್ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಸಂಘಟನೆಯಿಂದ ದೂರ ಇರುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಸೇಮವಾರ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.