ಕ್ಷಮೆ ಕೇಳಿದ ಪ್ರಧಾನಿ ಮೋದಿ; ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದ ಮಮತಾ ಬ್ಯಾನರ್ಜಿ
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ
Team Udayavani, Dec 30, 2022, 2:14 PM IST
ಕೋಲ್ಕತಾ: ಪ್ರಧಾನಿ ಮೋದಿ ಅವರು ತಾಯಿಯ ಅಂತಿಮ ಸಂಸ್ಕಾರದ ಬೆನ್ನಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.
ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೌರಾದಿಂದ ಎನ್ ಜೆಪಿ ಗೆ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಹೌರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.
ಕ್ಷಮೆ ಕೇಳುತ್ತೇನೆ
ನಾನು ಪಶ್ಚಿಮ ಬಂಗಾಳಕ್ಕೆ ಬರಬೇಕಿತ್ತು ಆದರೆ ವೈಯಕ್ತಿಕ ಕಾರಣಗಳಿಂದ ನಾನು ಅಲ್ಲಿಗೆ ಬರಲು ಸಾಧ್ಯವಾಗಲಿಲ್ಲ. ನಾನು ಬಂಗಾಳದ ಜನರಿಂದ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಭಾರತೀಯ ರೈಲ್ವೇಯನ್ನು ಆಧುನೀಕರಿಸಲು ಕೇಂದ್ರ ಸರ್ಕಾರ ದಾಖಲೆಯ ಹೂಡಿಕೆ ಮಾಡುತ್ತಿದೆ. ಈಗ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ತೇಜಸ್ ಎಕ್ಸ್‌ಪ್ರೆಸ್, ಹಮ್ಸಫರ್ ಎಕ್ಸ್‌ಪ್ರೆಸ್‌ನಂತಹ ಆಧುನಿಕ ರೈಲುಗಳನ್ನು ತಯಾರಿಸಲಾಗುತ್ತಿದೆ. ಮುಂದಿನ 8 ವರ್ಷಗಳಲ್ಲಿ, ನಾವು ಆಧುನೀಕರಣದ ಹೊಸ ಪ್ರಯಾಣವನ್ನು ನೋಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ರಾಷ್ಟ್ರೀಯ ಗಂಗಾ ಮಂಡಳಿಯ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದರು.
ವಿಶ್ರಾಂತಿ ತೆಗೆದುಕೊಳ್ಳಿ
ನಮಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ಪಶ್ಚಿಮ ಬಂಗಾಳದ ಜನರ ಪರವಾಗಿ ನಾನು ನಿಮಗೆ ತುಂಬಾ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದು ನಿಮಗೆ ದುಃಖದ ದಿನ. ನಿಮ್ಮ ತಾಯಿ ಎಂದರೆ ನಮ್ಮ ತಾಯಿ ಕೂಡ. ನಿಮ್ಮ ಕೆಲಸವನ್ನು ಮುಂದುವರಿಸಲು ದೇವರು ನಿಮಗೆ ಶಕ್ತಿಯನ್ನು ನೀಡಲಿ, ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.