ಆಗಸ್ಟಾ ಮಧ್ಯವರ್ತಿ ಮಿಶೆಲ್ ವಕೀಲ ಯೂತ್ ಕಾಂಗ್ರೆಸ್ ಸದಸ್ಯ
Team Udayavani, Dec 5, 2018, 7:06 PM IST
ಹೊಸದಿಲ್ಲಿ : ಆಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವರ್ತಿಯಾಗಿ ಭಾರತಕ್ಕೆ ಗಡೀಪಾರುಗೊಂಡಿರುವ ಕ್ರಿಶ್ಚಿಯನ್ ಮಿಶೆಲ್ ಅವರನ್ನು ಕೋರ್ಟಿನಲ್ಲಿ ಪ್ರತಿನಿಧಿಸುತ್ತಿರುವ ವ್ಯಕ್ತಿ ಇಂಡಿಯನ್ ಯೂತ್ ಕಾಂಗ್ರೆಸ್ನ ಕಾನೂನು ವಿಭಾಗದ ಪ್ರಭಾರಿ ಆಲ್ಜೊ ಕೆ ಜೋಸೆಫ್ ಎನ್ನುವುದೀಗ ಬಹಿರಂಗವಾಗಿದೆ.
ಇದು ಬಹಿರಂಗವಾಗುತ್ತಲೇ ಜೋಸೆಫ್ ಅವರು ‘ನಾನು ನನ್ನ ವೃತ್ತಿಯ ನೆಲೆಯಲ್ಲಿ ಮಿಶೆಲ್ ಅವರನ್ನು ಕೋರ್ಟಿನಲ್ಲಿ ಪ್ರತಿನಿಧಿಸುತ್ತಿದ್ದೇನೆಯೇ ಹೊರತು ದೇಶದ ಅತ್ಯಂತ ಹಳೆಯ ಪಕ್ಷದೊಂದಿಗೆ ನನಗಿರುವ ನಂಟಿನ ಕಾರಣಕ್ಕೆ ಅಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.
“ನಾನೊಬ್ಬ ವೃತ್ತಿ ನಿರತ ವಕೀಲ. ನಾನು ನನ್ನ ವೃತ್ತಿಯ ನೆಲೆಯಲ್ಲಿ ಮಿಶೆಲ್ ಅವರನ್ನು ಕೋರ್ಟಿನಲ್ಲಿ ಪ್ರತಿನಿಧಿಸುತ್ತಿದ್ದೇನೆ. ವಕೀಲನಾಗಿರುವುದರಿಂದ ಯಾವುದೇ ಕಕ್ಷಿದಾರ ನನ್ನ ಬಳಿ ಬಂದರೂ ನಾನು ಕರ್ತವ್ಯ ನಿಮಿತ್ತ ಅವರ ಕೇಸನ್ನು ಕೈಗೆತ್ತಿಕೊಳ್ಳುತ್ತೇನೆ. ನಾನು ಹೀಗೆ ಮಾಡುವುದಕ್ಕೂ ಕಾಂಗ್ರೆಸ್ ಪಕ್ಷದ ಸದಸ್ಯನಾಗಿರುವುದಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಜೋಸೆಫ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.