‘ರುಖೋ ಜರಾ’ ಖ್ಯಾತಿಯ ಪ್ರಸಿದ್ದ ಯೂಟ್ಯೂಬರ್ ‘ಹಿಂದೂಸ್ಥಾನಿ ಭಾವು’ ಬಂಧನ!
Team Udayavani, Feb 1, 2022, 8:33 AM IST
ಮುಂಬೈ: ‘ರುಖೋ ಜರಾ, ಸಬರ್ ಕರೋ…” ಖ್ಯಾತಿಯ ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ಥಾನಿ ಭಾವು ಯಾನೆ ವಿಕಾಸ್ ಪಾಠಕ್ ಅವರನ್ನು ಮುಂಬೈನ ಧಾರವಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ 10 ಮತ್ತು 12 ನೇ ತರಗತಿಗಳ ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲು ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಗಾಯಕ್‌ವಾಡ್ ಅವರ ನಿವಾಸದ ಬಳಿ ಜಮಾಯಿಸುವಂತೆ ಅವರು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಕಾರಣದಿಂದ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.
ಕೋವಿಡ್ -19 ದೃಷ್ಟಿಯಿಂದ 10 ಮತ್ತು 12 ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆಗೆ ಒತ್ತಾಯಿಸಿ ನಿನ್ನೆ ಧಾರಾವಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದ ಪ್ರಭಾವಿ ವಿಕಾಸ್ ಪಾಠಕ್ ಅವರನ್ನು ಧಾರಾವಿ ಪೊಲೀಸರು ಬಂಧಿಸಿದ್ದಾರೆ. ಪಾಠಕ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ.
‘ಹಿಂದುಸ್ಥಾನಿ ಭಾವು’ ಎಂಬಾತ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ್ದು, ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದೆ ಎಂದು ಆರೋಪಿಸಲಾಗಿದೆ. ಗಲಭೆ, ಮಹಾರಾಷ್ಟ್ರ ಪೊಲೀಸ್ ಕಾಯಿದೆ, ವಿಪತ್ತು ನಿರ್ವಹಣಾ ಕಾಯಿದೆ ಮತ್ತು ಮಹಾರಾಷ್ಟ್ರದ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವು ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:ಪುನೀತ್ ರಾಜ್‌ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್‌ಗಾಗಿ ಆರ್‌ಆರ್‌ಆರ್ ಮುಂದೂಡಿಕೆ
ಈ ಪ್ರಕರಣದಲ್ಲಿ ಧಾರಾವಿ ಪೊಲೀಸರು ಇಕ್ರಾರ್ ಖಾನ್ ವಖಾರ್ ಖಾನ್ ಎಂಬಾತನನ್ನೂ ಬಂಧಿಸಿದ್ದಾರೆ. ನೂರಾರು ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳಿಗಾಗಿ ಅಶೋಕ್ ಮಿಲ್ ನಾಕಾದಲ್ಲಿ ಸೋಮವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು. ಸಚಿವರ ನಿವಾಸದ ಬಳಿ ತೆರಳದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಹಿಂದುಸ್ಥಾನಿ ಭಾವು ಮತ್ತಿತರರು ವಿದ್ಯಾರ್ಥಿಗಳು ಸೇರಲು ಕಾರಣರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.