YS Sharmila: ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ
Team Udayavani, Jan 4, 2024, 11:47 AM IST
ಹೈದರಾಬಾದ್: ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಶರ್ಮಿಳಾ ಅವರು ಬುಧವಾರ ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಶರ್ಮಿಳಾ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.
ಹೈದರಾಬಾದ್‌ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿದ ನಂತರ, ಶರ್ಮಿಳಾ ಅವರು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ “ನಿರ್ಣಾಯಕ” ಘೋಷಣೆ ಮಾಡುವುದಾಗಿ ಹೇಳಿದ್ದರು.
ಶರ್ಮಿಳಾ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿಯಾಗಿದ್ದಾರೆ.
ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್‌ನ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಕೊನೆಗೊಳಿಸಲು ಶರ್ಮಿಳಾ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು ಅದರಂತೆ ಇಂದು ಪಕ್ಷದ ಹಿರಿಯರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸುವ ಪಣ ತೊಟ್ಟಿದ್ದಾರೆ.
ಶರ್ಮಿಳಾ ಕಾಂಗ್ರೆಸ್ ಸೇರುವುದರಿಂದ ಆಂಧ್ರಪ್ರದೇಶದಲ್ಲಿ ಪಕ್ಷ ಬಲಗೊಳ್ಳಲಿದೆ. ಕಾಂಗ್ರೆಸ್ ಸೇರಿದ ತಕ್ಷಣ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸುವುದಾಗಿ ಘೋಷಿಸಿದರು. ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ನನ್ನ ತಂದೆಯ ಕನಸಾಗಿತ್ತು, ಅದಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂಬುದು ನನಗೆ ಖುಷಿ ತಂದಿದೆ ಎಂದು ಶರ್ಮಿಳಾ ಹೇಳಿದ್ದಾರೆ.
ಮಣಿಪುರದ ಹಿಂಸಾಚಾರದಿಂದ ನಾನು ತುಂಬಾ ದುಃಖಿತನಾಗಿದ್ದೇನೆ, ಜಾತ್ಯತೀತ ಪಕ್ಷ ಅಧಿಕಾರದಲ್ಲಿರದಿದ್ದರೆ ಹೀಗೇ ಆಗುತ್ತದೆ ಎಂದು ಶರ್ಮಿಳಾ ಹೇಳಿದ್ದಾರೆ.
Back to the roots!
Y S Sharmila, the founder of YSR Telangana Party, embraces Congress and teams up with Shri Mallikarjun Kharge and Shri Rahul Gandhi in Delhi.
A fresh start for Andhra Pradesh Politics. Welcome back, Home! pic.twitter.com/NPMRLKj9aL
— Srinivas BV (@srinivasiyc) January 4, 2024
YS Sharmila said that his father YSR Reddy serve the congress all his life and today he will Happy that his daughter is following his footsteps and joining Congress.
It will give a great joy to YSR.
It was a emotional joining.#YSSharmila #Congress
pic.twitter.com/prgNQO3ykA— Harshvardhan tiwari (@poetvardhan) January 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.