ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 300ಕ್ಕೂ ಅಧಿಕ ಸ್ಥಾನ: ಅಮಿತ್ ಶಾ
Team Udayavani, Feb 24, 2017, 11:28 AM IST
ಹೊಸದಿಲ್ಲಿ : ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 300ಕ್ಕೂ ಮಿಕ್ಕಿದ ಸ್ಥಾನಗಳನ್ನು ಗೆದ್ದು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಝೀ ಮೀಡಿಯಾಗೆ ನೀಡಿದ ಸಂದರ್ಶನದಲ್ಲಿ ವ್ಯಕ್ತಪಡಿಸಿದ್ದಾರೆ.
“ಈ ಚುನಾವಣೆಯಲ್ಲಿ ಎಸ್‌ಪಿ – ಕಾಂಗ್ರೆಸ್ ಹಿಂದೆ ಬಿದ್ದಿವೆ. ಅವುಗಳಿಗಿಂತ ಬಿಎಸ್‌ಪಿ ಉತ್ತಮ ನಿರ್ವಹಣೆ ತೋರೀತು; ಆದರೆ ಬಿಜೆಪಿ ಇವೆಲ್ಲಕ್ಕಿಂತ ಉಜ್ವಲವಾದ ನಿರ್ವಹಣೆ ತೋರಿ 300ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಅಮಿತ್ ಶಾ ಹೇಳಿದರು.
ಉತ್ತರ ಪ್ರದೇಶದಲ್ಲಿ ಎಲ್ಲ ಸಮುದಾಯವರಿಗೆ ಸಮಾನ ಪ್ರಮಾಣದಲ್ಲಿ ವಿದ್ಯುತ್ ಸಿಗುತ್ತಿಲ್ಲ; ಇಂತಹ ತಾರತಮ್ಯ ಎಸಗುತ್ತಿರುವ ಅಧಿಕಾರಸ್ಥರೇ ಕೋಮು ರಾಜಕಾರಣ ಮಾಡುತ್ತಿರುವುದು . ಫತೇಪುರದಲ್ಲಿ ನಡೆದ ಈಚಿನ ಚುನಾವಣಾ ರಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ “ಕಬರಸ್ಥಾನ’ ಮತ್ತು “ಶಂಶಾನ್’ ಹೇಳಿಕೆಗಳು ಅತ್ಯಂತ ಪ್ರಸ್ತುತವಾಗಿವೆ ಎಂದು ಅಮಿತ್ ಶಾ ನುಡಿದರು .
ಕಳೆದ 15 ವರ್ಷಗಳಿಂದ ಎಸ್‌ಪಿ ಮತ್ತು ಬಿಎಸ್‌ಪಿ ಆಳ್ವಿಕೆಯಿಂದಾಗಿ ಉತ್ತರ ಪ್ರದೇಶ ಇಂದು ಅಭಿವೃದ್ಧಿಯಲ್ಲಿ ತೀರ ಹಿಂದುಳಿದ ರಾಜ್ಯವಾಗಿದೆ. ಮಾತ್ರವಲ್ಲದೆ ಉತ್ತರ ಪ್ರದೇಶವು ದೇಶದಲ್ಲೇ ನಂಬರ್ ಒನ್ ಅತ್ಯಾಚಾರ, ಕೊಲೆ ಮತ್ತು ಅರಾಜಕತೆಯ ರಾಜ್ಯವಾಗಿದೆ. ಅಂತೆಯೇ ಉತ್ತರ ಪ್ರದೇಶದ ಜನರು ಎಸ್‌ಪಿ ಮತ್ತು ಬಿಎಸ್‌ಪಿಯಿಂದ ಬೇಸತ್ತಿದ್ದು ಈ ಬಾರಿ ಅವರು ಬಿಜೆಪಿಗೆ ಮತ ಹಾಕಲು ತೀರ್ಮಾನಿಸಿದ್ದಾರೆ; ಅದಕ್ಕೆ ಪ್ರತಿಯಾಗಿ ಬಿಜೆಪಿಯು ರಾಜ್ಯದಲ್ಲಿ ಅಭಿವೃದ್ಧಿ ಪರ ಆಡಳಿತೆಯನ್ನು ನೀಡಲಿದೆ ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.