![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Dec 15, 2018, 3:26 PM IST
ಐಜ್‌ವಾಲ್: ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಝೋರಮ್ ಥಂಗಾ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಐಜ್‌ವಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜಶೇಖರನ್ ಅವರು ಝೋರಮ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಮಿಜೋ ಭಾಷೆಯಲ್ಲೆ ಪ್ರಮಾಣ ವಚನ ಸ್ವೀಕರಿಸಿದರು.
40 ಸದಸ್ಯ ಬಲದ ವಿಧಾನಸಭೆಯಲ್ಲಿ ಝೋರಂ ಥಂಗಾ ನಾಯಕತ್ವದ ಮಿಜೋ ನ್ಯಾಷನಲ್ ಫ್ರಂಟ್ 26 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ 5 ಸ್ಥಾನಗಳಿಗೆ ಮಾತ್ರ ತೃಪ್ತಿ ಪಟ್ಟು ಅಧಿಕಾರ ಕಳೆದುಕೊಂಡಿತ್ತು.
84 ರ ಹರೆಯದ ಥಾಂಗಾ ಅವರು 1998 ರಿಂದ 2008 ರ ವರೆಗೆ 10 ವರ್ಷಗಳ ಕಾಲ ಮಿಜೋರಾಂನ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅನುಭವಿ ರಾಜಕಾರಣಿಯಾಗಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.