ಪುಣೆ ಕನ್ನಡ ಕಲಿಕಾ ವರ್ಗಕ್ಕೆ ಶೇಕಡಾ 100 ಫಲಿತಾಂಶ
Team Udayavani, Jul 11, 2018, 3:10 PM IST
ಪುಣೆ: ಪುಣೆಯ ಮರಾಠಿ-ಕನ್ನಡ ಸ್ನೇಹ ವರ್ಧನ ಕೇಂದ್ರವು ಕನ್ನಡೇತರರಿಗಾಗಿ ವಿಶೇಷವಾ ಗಿ ಮರಾಠಿಗರ ಸಲುವಾಗಿ ನಡೆಯುತ್ತಿರುವ ಕಲಿಕಾ ವರ್ಗದ 2017-2018 ನೇ ಶೈಕ್ಷಣಿಕ ಸಾಲಿನ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 100 ಫಲಿತಾಂಶ ಲಭಿಸಿದೆ.
ತರಗತಿಯ ವೃಂದಾ ಮಾಧವ ಘಾಟೆ ಅವರು ಶೇ. 96 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿದರೆ, ಶುಭದಾ ಅರವಿಂದ ಮುಳಗುಂದ, ಅಚ್ಯುತ ಗೋಪಾಲ್ ಕುಲಕರ್ಣಿ ಮತ್ತು ಪ್ರಾಧ್ಯಾಪಕ ವಿಜಯ ದಿನಕರ ಸಾಠೆ ಇವರು ಶೇ. 93 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಅನಘಾ ಆನಂದ ಕುಲಕರ್ಣಿ ಇವರು ಶೇ. 92.05 ಅಂಕಗಳೊಂದಿಗೆ ತೃತೀಯ ಸ್ಥಾನಿಯಾಗಿದ್ದಾರೆ.
ಪುಣೆಯ ಮರಾಠಿ-ಕನ್ನಡ ಸ್ನೇಹವರ್ಧನ ಕೇಂದ್ರವು ಕನ್ನಡೇತರರಿಗಾಗಿ ವಿಶೇಷವಾಗಿ ಮರಾಠಿಗರ ಸಲುವಾಗಿ 1992-1993 ನೇ ಸಾಲಿನಲ್ಲಿ ಆರಂಭಿಸಿರುವ ಕನ್ನಡ ಕಲಿಕಾ ವರ್ಗವು ಈ ವರ್ಷದ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು, ಇದೊಂದು ಕನ್ನಡಿಗರು ಮರಾಠಿಗರ ಅನುಬಂಧದ ಐತಿಹಾಸಿಕ ದಾಖಲೆಯಾಗಿದೆ ಎಂದು ಕನ್ನಡ ಕಲಿಕಾ ವರ್ಗದ ಸಂಚಾಲಕ, ಶಿಕ್ಷಕ ಕೃ. ಶಿ. ಹೆಗಡೆ ಇವರು ತಿಳಿಸಿದ್ದಾರೆ.
ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಕನ್ನಡ ಬರೆಯಲು, ಓದಲು, ಮಾತನಾಡಲು ಬಾರದ, ತುಳು, ಕೊಂಕಣಿ ಭಾಷಿಗರು ಅಥವಾ ಇತರ ಮಾಧ್ಯಮ ಗಳಲ್ಲಿ ಶಿಕ್ಷಣ ಪಡೆದವರು ಪ್ರವೇಶನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ 9890391552, 9922780677 ನಂ.ಗೆ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.