ಸಂತ್ರಸ್ತರಿಗೆ 1,300 ಕೋ. ರೂ. ಪರಿಹಾರ ಪ್ಯಾಕೇಜ್: ವಾಡೆಟ್ಟಿವಾರ್
Team Udayavani, Jun 19, 2020, 9:03 AM IST
ಮುಂಬಯಿ, ಜೂ. 17: ನಿಸರ್ಗ ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸುಮಾರು 1,300 ಕೋಟಿ ರೋ,ಗಳ ಪರಿಹಾರ ಪ್ಯಾಕೇಜ್ ಘೋಷಿಸಲು ಎಂದು ರಾಜ್ಯ ಸರಕಾರ ಅಂದಾಜಿಸಿದೆ ಎಂದು ಪರಿಹಾರ ಮತ್ತು ಪುನರ್ವ ಸತಿ ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.
ಜೂನ್ 4ರಂದು ಚಂಡಮಾರುತದಿಂದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿರುವುದಲ್ಲದೆ, ಪಕ್ಕದ ರತ್ನಾಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಹಾನಿಯನ್ನುಂಟುಮಾಡಿತ್ತು. ಹಾನಿ ಮೌಲ್ಯ ಮಾಪನ ಕುರಿತು ಪರಿಶೀ ಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಅಜಿತ್ ಪವಾರ್ ಅವರೊಂದಿಗೆ ಈ ಪ್ರದೇಶದಲ್ಲಿ ಚಂಡಮಾರುತ ಪೀಡಿತ ಕುಟುಂಬಗಳಿಗೆ ಶೀಘ್ರವಾಗಿ ಹೆಚ್ಚುವರಿ ಪರಿಹಾರ ನೀಡಲಾಗುವುದು ಎಂದರು. ವೀಡಿಯೋ ಕಾನ್ಫರೆನ್ಸ್‌ನಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ವಾಡೆಟ್ಟಿವಾರ್, ರಾಜ್ಯ ಸರಕಾರವು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಒಟ್ಟು ಹಾನಿಯನ್ನು ನಿರ್ಣಯಿಸುತ್ತಿದೆ ಎಂದು ಹೇಳಿದರು.
ಪರಿಹಾರದ ಮೊತ್ತವು 1,200 ಕೋ. ರೂ. ಗಳಿಂದ 1,300 ಕೋ. ರೂ. ಗಳೆಂದು ನಾವು ಅಂದಾಜು ಮಾಡಿದ್ದೇವೆ. ಒಟ್ಟಾರೆ ಹಾನಿ ಮೌಲ್ಯಮಾಪನ ಇನ್ನೂ ನಡೆಯುತ್ತಿದೆ. ಪರಿಹಾರ ಪ್ಯಾಕೇಜ್ ಮೊತ್ತವನ್ನು ಈ ಹಿಂದೆ ಘೋಷಿಸಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿಸಲಾಗಿದೆ ಎಂದರು. ಚಂಡಮಾರುತ ಪೀಡಿತ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡುವ ಸರಕಾರದ ನಿರ್ಣಯವನ್ನು (ಜಿಆರ್) ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು ಎಂದರು. ಪರಿಹಾರದ ವಿತರಣೆಯನ್ನು ಪ್ರಾರಂಭಿಸಲು ಇಲಾಖೆ ಕೊಂಕಣ ವಿಭಾಗೀಯ ಆಯುಕ್ತರಿಗೆ ಹೆಚ್ಚುವರಿ 70,370 ಕೋ. ರೂ. ಗಳನ್ನು ಮಂಜೂರು ಮಾಡಿದೆ ಎಂದು ವಾಡೆಟ್ಟಿವಾರ್ ಹೇಳಿದರು.
ರಾಜ್ಯವು ಈಗಾಗಲೇ ರಾಯಗಢಕ್ಕೆ 100 ಕೋ. ರೂ. ಮತ್ತು ರತ್ನಾಗಿರಿಗೆ 75 ಕೋ. ರೂ. ಮತ್ತು ಸಿಂಧುದುರ್ಗಕ್ಕೆ 25 ಕೋ. ರೂ. ಗಳನ್ನು ಬಿಡುಗಡೆ ಮಾಡಿದೆ. ಚಂಡಮಾರುತದಿಂದ ಹಾನಿಗೊಳಗಾದ 1,470 ಸರಕಾರಿ ಶಾಲೆಗಳಿಗೆ 24 ಕೋ.ರೂ. ಗಳನ್ನು ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು. ಈ ಪ್ರದೇಶದ ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ವಾಡೆಟ್ಟಿವಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.