ಬೊರಿವಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ 28ನೇ ವಾರ್ಷಿಕ ಮಹೋತ್ಸವ
Team Udayavani, May 31, 2018, 4:42 PM IST
ಮುಂಬಯಿ: ಬೊರಿವಲಿ ಪಶ್ಚಿಮ, ಜೈರಾಜ್ ನಗರದ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಟ್ರಸ್ಟ್ ಇದರ 28ನೇ ವಾರ್ಷಿಕ ಮಹೋತ್ಸವವು ಮೇ 30ರಂದು ಪ್ರಾರಂಭಗೊಂಡಿದ್ದು, ಜೂ. 3ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬ್ರಹ್ಮಶ್ರೀ ಕೊಯ್ಯೂರು ನಂದ ಕುಮಾರ ತಂತ್ರಿಯವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಸ್ಥಾಪಕ ಮೊಕ್ತೇಸರ, ವಂಶಸ್ಥರಾದ ಜಯರಾಜ ಶ್ರೀಧರ ಶೆಟ್ಟಿ ಕಲ್ಲಮುಂಡ್ಕೂರು ಹರಿಯಾಳಗುತ್ತು, ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ. ಶೆಟ್ಟಿ, ಮೊಕ್ತೇಸರ ಜಯಪಾಲಿ ಅಶೋಕ್ ಶೆಟ್ಟಿ ದಂಪತಿ ಮತ್ತು ಅರ್ಚಕ ವೃಂದ, ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ, ಶ್ರೀ ಮಹಿಷ ಮರ್ದಿನಿ ಭಜನ ಮಂಡಳಿಯವರ ನೇತೃತ್ವದಲ್ಲಿ ಮತ್ತು ಉಪಸ್ಥಿತಿಯಲ್ಲಿ ವಾರ್ಷಿಕ ಮಹೋತ್ಸವವು ಪ್ರಾರಂಭಗೊಂಡಿತು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 8 ರಿಂದ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ನವಕ ಕಲಶ ಹಾಗೂ ಪ್ರಧಾನ ಹೋಮ, ಗಣಹೋಮ, ಸಾರ್ವಜನಿಕ ನವಗ್ರಹ ಹೋಮ, ಸಾರ್ವಜನಿಕ ಅಶ್ಲೇಷಾ ಬಲಿ ನಡೆಯಿತು. ಪರಿಸರದ ನೂರಾರು ತುಳು-ಕನ್ನಡಿಗ ಭಕ್ತಾದಿಗಳು ಸಾರ್ವಜನಿಕ ಆಶ್ಲೇಷಾಬಲಿಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಮಧ್ಯಾಹ್ನ 12ರಿಂದ ಪ್ರಸನ್ನ ಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾದರು. ಸಂಜೆ 6.30 ರಿಂದ ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಮಹಾಪೂಜೆ, ನಿತ್ಯ ಬಲಿ, ರಾತ್ರಿ 10 ರಿಂದ ಶ್ರೀ ಮಹಿಷಮರ್ದಿನಿ ಭಜನ ಮಂಡಳಿ ಮತ್ತು ಆಹ್ವಾನಿತ ವಿವಿಧ ಭಜನ ಮಂಡಳಿಗಳಿಂದ ಏಕಾಹ ಭಜನ ಕಾರ್ಯಕ್ರಮವು ಅದ್ದೂರಿ ಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ರಾಜಕೀಯ ಧುರೀಣರು, ವಿವಿಧ ಕನ್ನಡ ಮತ್ತು ಜಾತೀಯ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಸೇವಕರು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಮತ್ತು ಅರ್ಚಕ ವೃಂದ, ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಡಳಿತ ಮಂಡಳಿ, ಶ್ರೀ ಮಹಿಷ ಮರ್ದಿನಿ ಭಜನ ಮಂಡಳಿಯವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಬೊರಿವಲಿ ಪರಿಸರದಲ್ಲಿ ಹಲವಾರು ವರ್ಷಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಈ ಕ್ಷೇತ್ರವು ಪ್ರಸಿದ್ಧಿಯನ್ನು ಪಡೆಯುವುದರ ಜೊತೆಗೆ ಕಾರಣಿಕ ಕ್ಷೇತ್ರವಾಗಿ ಬಿಂಬಿತಗೊಂಡಿದೆ. ಶ್ರೀ ಕ್ಷೇತ್ರದ ಸ್ಥಾಪಕ ಮೊಕ್ತೇಸರ, ವಂಶಸ್ಥರಾದ ಜಯರಾಜ ಶ್ರೀಧರ ಶೆಟ್ಟಿ ಕಲ್ಲಮುಂಡ್ಕೂರು ಹರಿಯಾಳಗುತ್ತು, ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ. ಶೆಟ್ಟಿ, ಮೊಕ್ತೇಸರ ಜಯಪಾಲಿ ಅಶೋಕ್ ಶೆಟ್ಟಿ ದಂಪತಿಗಳ ಮಾರ್ಗದರ್ಶನದಲ್ಲಿ ಮಂದಿರವು ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಶ್ರೀ ಕ್ಷೇತ್ರದಲ್ಲಿ ಮಹಿಷ ಮರ್ದಿನಿ, ಗಣಪತಿ, ನಾಗದೇವರು, ವಂಶದ ದೈವ ಕೊಡಮಣಿತ್ತಾಯ ಮೊದಲಾದ ದೈವ-ದೇವರುಗಳ ಸೇವೆಗಳು ದಿನಂಪ್ರತಿ ನಡೆಯುತ್ತಿದೆ. ದೇವಸ್ಥಾನದ ಅರ್ಚಕ ವೃಂದ, ಆಡಳಿತ ಮಂಡಳಿ ಮತ್ತು ಮಹಿಷ ಮರ್ದಿನಿ ಭಜನ ಮಂಡಳಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುತ್ತಿದ್ದಾರೆ.
ಚಿತ್ರ-ವರದಿ: ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.