ನಿಷೇಧ ಆದೇಶ, ಕ್ವಾರೆಂಟೈನ್ ಉಲ್ಲಂಘನೆಯ 35 ಸಾವಿರ ಪ್ರಕರಣ ದಾಖಲು
Team Udayavani, Apr 13, 2020, 12:51 PM IST
ಸಾಂದರ್ಭಿಕ ಚಿತ್ರ
ಮುಂಬಯಿ: ಕಳೆದ ತಿಂಗಳಿನಿಂದ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿ ನಿಷೇಧಿತ ಆದೇಶಗಳು ಮತ್ತು ಕ್ವಾರೆಂಟೈನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಮಹಾರಾಷ್ಟ್ರ ಪೊಲೀಸರು ರಾಜ್ಯಾದ್ಯಂತ 35,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಮತ್ತು ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಮಾ. 22ರಿಂದ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ಅಪರಾಧಿಗಳ ವಿರುದ್ಧ ಪ್ರಕರಣ ಗಳನ್ನು ದಾಖಲಿಸುವ ಮೂಲಕ ಕಠಿನ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿ ¨ªಾರೆ ಎಂದು ಅಧಿಕಾರಿ ನುಡಿದಿದ್ದಾರೆ.
ಈವರೆಗೆ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ರಾಜ್ಯಾದ್ಯಂತ ಕನಿಷ್ಠ 2,525 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ, ಪೊಲೀಸ್ ಸಿಬಂದಿ ಮೇಲೆ ಹಲ್ಲೆಯ 70 ಪ್ರಕರಣಗಳು ದಾಖಲಾಗಿದ್ದು, ಅವುಗಳಿಗೆ ಸಂಬಂಧಿಸಿದಂತೆ 161 ಜನರನ್ನು ಬಂಧಿಸಲಾಗಿದೆ ಎಂದರು. ಅಲ್ಲದೆ, ಸುಮಾರು 475 ಜನರು ಕ್ವಾರೆಂಟೈನ್ ಆದೇಶವನ್ನು ಉಲ್ಲಂ ಸಿರುವುದು ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೊರೊನಾ ವೈರಸ್ ಮತ್ತು ಅದಕ್ಕೆ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸರು ತಮ್ಮ ವಿವಿಧ ನಿಯಂತ್ರಣ ಕೊಠಡಿಗಳಲ್ಲಿ ಈವರೆಗೆ 61,000 ಕ್ಕೂ ಹೆಚ್ಚು ಕರೆಗಳನ್ನು ನಿರ್ವಹಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಅಕ್ರಮ ಸಾರಿಗೆಗಾಗಿ ಪೊಲೀಸರು ಶನಿವಾರದವರೆಗೆ 803 ಪ್ರಕರಣಗಳನ್ನು ದಾಖಲಿಸಿಕೊಂಡು19,675 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ವಾಹನಗಳ ಮಾಲಕರಿಂದ 1.23 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ. ಈವರೆಗೆ, ರಾಜ್ಯದಲ್ಲಿ ಮೂವರು ಪೊಲೀಸರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.