“ಅಖೀಲ ಭಾರತ ಹೊರನಾಡ ಕನ್ನಡ ಸಂಘಗಳ 8ನೇ ಮಹಾಮೇಳ’

Team Udayavani, Dec 21, 2019, 5:16 PM IST

mumbai-tdy-1

ಸೊಲ್ಲಾಪುರ, ಡಿ. 20: ಅಕ್ಕಲ್‌ಕೋಟೆಯ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಆವರಣದಲ್ಲಿ ನಾಡಿನ ಪ್ರಾತಿನಿಧಿಕ ಸಂಸ್ಥೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘ, ಆದರ್ಶ ಕನ್ನಡ ಬಳಗ ಮಹಾರಾಷ್ಟ್ರ, ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳ, ಅಕ್ಕಲ್‌ ಕೋಟೆ ಮತ್ತು ಅಕ್ಕಲ್‌ಕೋಟೆಯ ಎಲ್ಲ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಡಿ. 21 ಮತ್ತು 22ರಂದು ಎರಡು ದಿನಗಳ ಕಾಲ “”ಅಖೀಲ ಭಾರತ ಹೊರನಾಡ ಕನ್ನಡ ಸಂಘಗಳ 8ನೇ ಮಹಾಮೇಳ” ಹಮ್ಮಿಕೊಳ್ಳಲಾಗಿದ್ದು, ಭರದ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಿಕೇರಿ ತಿಳಿಸಿದ್ದಾರೆ.

ಡಿ. 19ರಂದು ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 21ರಂದು ಬೆಳಗ್ಗೆ 9ಕ್ಕೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಸಕಲ ವಾದ್ಯ ಮೇಳ ಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 10.30 ರಿಂದ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಅಕ್ಕಲ್‌ ಕೋಟೆಯ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯರಾಜೆ ಭೋಸ್ಲೆ ಅವರು ಚಾಲನೆ ನೀಡಲಿದ್ದಾರೆ.

ನಾಡಿನ ಹಿರಿಯ ಚೇತನ, ಸಾಹಿತಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶತಾಯು ನಾಡೋಜ ಡಾ| ಪಾಟೀಲ ಪುಟ್ಟಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು, ರಾಜಕೀಯ ಧುರೀಣರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ನಾಡು-ನುಡಿಗಾಗಿ ಶ್ರಮಿಸಿದ ಮಹಾನೀಯರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಬಳಿಕ ವಿವಿಧ ಗೋಷ್ಠಿಗಳಿಗೆ ಬೈರನಟ್ಟಿಯ ದೊರೆಸ್ವಾಮಿ ಮಠದ ಪೂಜ್ಯ ಶಾಂತಲಿಂಗ ಮಹಾಸ್ವಾಮಿಗಳು ಚಾಲನೆ ನೀಡಲಿದ್ದಾರೆ. ವಿವಿಧ ಸಾಹಿತ್ಯ ಗೋಷ್ಠಿಗಳೊಂದಿಗೆ ಜೊತೆಗೆ ಹೊರನಾಡ ಪ್ರತಿನಿಧಿಗಳ ಅಧಿವೇಶನ, ಹೊರನಾಡು ಕನ್ನಡಿಗರ ಕೃತಿಗಳ ಬಿಡುಗಡೆ, ಕಾವ್ಯ ಬೆಳಗು, ನಗೆಹಬ್ಬ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

ಡಿ. 22ರಂದು ಸಂಜೆ 4.30ರಿಂದ ಇಳಕಲ್ಲಿನ ಚಿತ್ತರಗಿ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಗುರುಮಹಾಂತ ಸ್ವಾಮಿಗಳು ಮತ್ತು ಬಾಲಗಾಂವ್‌ನ ಜ್ಞಾನಯೋಗಾಶ್ರಮದ ಶ್ರೀ ಅಮೃತಾನಂದ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ನಾಡೋಜ ಡಾ| ಪಾಟೀಲ ಪುಟ್ಟಪ್ಪನವರು ವಹಿಸಲಿದ್ದಾರೆ.

ಮೈಸೂರಿನ ಭಾರತೀಯ ಭಾಷಾ ಸಂಸ್ಥೆಯ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಯುವಜನ ನಿರ್ದೇಶಕರಾದ ಡಾ| ಕೆ. ಆರ್‌. ದುರ್ಗಾದಾಸ್‌ ಸಮಾರೋಪ ಭಾಷಣ ಮಾಡಲಿದ್ದಾರೆ. ಸಾಹಿತಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕನ್ನಡಪರ ಹೋರಾಟಗಾರರು, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ಕಾರ್ಯಕಾರಿ ಸಮಿತಿಯ ವಿಶ್ವಸ್ಥ ಅಮೋಲರಾಜೆ ಭೋಸ್ಲೆ ಮತ್ತು ಕರ್ನಾಟಕ

ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಿಕೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.