ಆದರ್ಶ ಕನ್ನಡ ಬಳಗದ ಆದರ್ಶ ನುಡಿಸಿರಿ -2018 ಸಮಾರಂಭಕ್ಕೆ ಚಾಲನೆ

Team Udayavani, Mar 16, 2018, 4:12 PM IST

333.jpg

ಸೊಲ್ಲಾಪುರ: ಸಾಹಿತ್ಯ ಸಮ್ಮೇಳನಗಳಿಂದ ಭಾಷಾ ಬಾಂಧವ್ಯ ಇನ್ನಷ್ಟು ಗಟ್ಟಿಯಾಗುತ್ತದೆ. ಅಂತಃಕರಣದಿಂದ ಸಾಹಿತ್ಯ ಹುಟ್ಟುತ್ತದೆ. ಹೃದಯದ ಭಾಷೆಯನ್ನು ಯಾರೂ ಅಳಿಸಲಾಗದು. ಜಾತಿ, ಧರ್ಮದ ಹಿಂದೆ ಮಾನವ ಜಾತಿ ಒಂದೇ.  ಸರ್ವಧರ್ಮ ಸಮಭಾವ ಹಾಗೂ ಮಾನವ ಜಾತಿ ಕಲ್ಯಾಣಕ್ಕಾಗಿ ಇಂತಹ ಸಮ್ಮೇಳನಗಳು ಗಡಿ ಭಾಗದಲ್ಲಿ ನಡೆಯುತ್ತಿರುವುದು ತುಂಬಾ ಮಹತ್ವದ್ದಾಗಿದೆ ಎಂದು ಕೇಂದ್ರ ಮಾಜಿ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಹೇಳಿದರು.

ಮಾ. 11 ರಂದು  ಅಕ್ಕಲ್‌ಕೋಟೆ ನಗರದ ಟೆನಿಸ್‌ ಕೊರ್ಟ್‌ ಮೈದಾನದಲ್ಲಿ ಆದರ್ಶ ಕನ್ನಡ ಬಳಗ ಮಹಾರಾಷ್ಟ್ರ ಹಾಗೂ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ಆದರ್ಶ ನುಡಿಸಿರಿ 2018  ಸಮಾರಂಭ ಉದ್ಘಾಟಿಸಿ ಮಾತನಾಡಿದ ಇವರು, ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಅಕ್ಕಲ್‌ಕೋಟ ತಾಲೂಕಿನಲ್ಲಿ ಹೆಚ್ಚಾಗಿ ಕನ್ನಡ ಭಾಷಿಕರಿದ್ದಾರೆ. ಇಂತಹ ಸಾಹಿತ್ಯ ಸಮ್ಮೇಳಗಳ ಮೂಲಕ ಕನ್ನಡ ಉಳಿಸಿ ಬೆಳೆಸಲು ಅನುಕೂಲವಾಗುತ್ತದೆ. ಆದರ್ಶ ಕನ್ನಡ ಬಳಗವು ಮರಾಠಿ ಮತ್ತು ಕನ್ನಡ ಭಾಷಿಕರ ಮನಸ್ಸು ಗಟ್ಟಿಗೊಳಿಸುವ ಕಾರ್ಯ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಇಲ್ಲಿ ಯಾವುದೇ ಜಾತಿ, ಭೇದ ಭಾವಗಳಿಲ್ಲ. ಭಾಷಾ ಭೇದ-ಭಾವಗಳನ್ನು ಮರೆತು ನಾವೆಲ್ಲರೂ ಒಂದೇ ಎನ್ನುವ ಮನೋಭಾವ ನಮ್ಮದ್ದಾಗಬೇಕು. ವಿಶಿಷ್ಟ ಧರ್ಮದ ಪ್ರಚಾರಕರಿಂದ ಸಾಹಿತಿಗಳ ಹತ್ಯೆ ಮಾಡಲಾಗುತ್ತಿದೆ. ಆದರೆ ಸಾಹಿತಗಳ ವಿಚಾರ ಎಂದೂ ಸಾಯುವುದಿಲ್ಲ. ಕರ್ನಾಟಕದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಕೂಡಲೇ ಕೇಂದ್ರ ಸರಕಾರ  ಸ್ವತಂತ್ರ ಧರ್ಮ ಮಾನ್ಯತೆಗೆ ಸ್ವಂದಿಸಬೇಕು ಎಂದು ಹೇಳಿದರು.

ಮೊದಲಿಗೆ ನಗರದ ಏ-ವನ್‌ ಚೌಕಿನಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಗೆ ಕನ್ನಡ ಹೋರಾಟಗಾರ ಅ. ಬಾ. ಚಿಕ್ಕಮಣೂರ ಪೂಜೆ ಸಲ್ಲಿಸಿದರು. ನಂತರ ಸಮಾಜ ಸೇವಕ ಲಕ್ಷ್ಮಣ ಸಮಾಣೆ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಮುಖ್ಯ ರಸ್ತೆಗಳ ಮೂಲಕ ತೆರೆದ ವಾಹನದಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ ಕರ್ನಾಟಕದ ವಿವಿಧ ಕಲಾ ತಂಡಗಳಿಂದ ಹಾಗೂ ವಾದ್ಯ, ನೃತ್ಯಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ನಂತರ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯ ಭೋಸಲೆ ಅವರು ಮುಖ್ಯದ್ವಾರದ ಉದ್ಘಾಟನೆ ಮಾಡಿದರು.

ತಾಲೂಕು ಪಂಚಾಯತ್‌ ಅಧ್ಯಕ್ಷೆ ಸುರೇಖಾ ಕಾಟಗಾಂವ್‌ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದರು. ತದನಂತರ ಡಾ| ಜಯ ದೇವಿತಾಯಿ ಲಿಗಾಡೆ ವೇದಿಕೆ ಉದ್ಘಾಟನೆಯನ್ನು  ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್‌ ಕುಮಾರ ಶಿಂಧೆ ನೆರವೇರಿಸಿದರು. ಸರ್ವಾಧ್ಯಕ್ಷತೆ ಡಾ| ಮಧುಮಾಲ ಲಿಗಾಡೆಯವರ ಉಪಸ್ಥಿತಿಯಲ್ಲಿ ನಾಗಣಸೂರದ ಪೂಜ್ಯ ಶ್ರೀಕಂಠ ಶಿವಾಚಾರ್ಯ ಮಹಾ ಸ್ವಾಮೀಜಿಗಳು ಕಾರ್ಯಕ್ರಮ ಸಾನಿಧ್ಯ ವಹಿಸಿದರು. ಶಾಸಕ ಸಿದ್ಧರಾಮ ಮೆØàತ್ರೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸಿದ್ರಾಮಪ್ಪಾ ಪಾಟೀಲ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಳಂದ ಶಾಸಕ ಬಿ. ಆರ್‌. ಪಾಟೀಲ ಅವರು ವಿಶ್ವಮಾನವ ಪ್ರಶಸ್ತಿ ಪ್ರದಾನ ಮಾಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಶಿವಾನಂದ ಪಾಟೀಲ, ವಟವೃಕ್ಷ ಸ್ವಾಮಿ ಸಮರ್ಥ ದೇವಸ್ಥಾನ ಅಧ್ಯಕ್ಷ ಮಹೇಶ ಇಂಗಳೆ, ಮಾಜಿ ನಗರಾಧ್ಯಕ್ಷ ಅಶ್ಪಾಕ್‌  ಬಳೂರಗಿ, ಮಲ್ಲಿಕಾರ್ಜುನ ಕಾಟಗಾಂವ, ವಿಶ್ವನಾಥ ಹಡಲಗಿ, ದಿಲೀಪ್‌ ಶಿದ್ದೆ, ಚೇತನ ನರೂಟೆ, ಡಾ| ಸುವರ್ಣಾ ಮಲಗೊಂಡ, ಸುದೀಪ ಚಾಕೋತೆ, ಮಲ್ಲಿನಾಥ ಭಾಸಗಿ, ರಾಜಕುಮಾರ ಲಕಾಬಶೆಟ್ಟಿ, ಗಟ ವಿಕಾಸ ಅಧಿಕಾರಿ ಮಹಾದೇವ ಬೆಳ್ಳೆ, ವಿಸ್ತಾರ ಅಧಿಕಾರಿ ರತಿಲಾಲ ಭೂಸೆ, ಭೀಮಾಶಂಕರ ಕಾಪಸೆ, ರಾಮಚಂದ್ರ ಸಮಾಣೆ, ಲಕ್ಮಿàಕಾಂತ ತಿಮ್ಮಾಜಿ, ಡಾ| ಎಚ್‌. ಟಿ. ಪೋತೆ ಸೇರಿದಂತೆ ಮೊದಲಾದವರು ಪಾಲ್ಗೊಂಡಿದರು. ಬಳಗದ ಅಧ್ಯಕ್ಷ ಮಲಿಕಜಾನ್‌ ಶೇಖ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಧರ ಗುರವ ಕಾರ್ಯಕ್ರಮ ನಿರೂಪಿಸಿದರು. ಶರಣಪ್ಪ  ಫುಲಾರಿ ವಂದಿಸಿದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.