ಬಿಲ್ಲವರ ಅಸೋಸಿಯೇಶನ್‌ ಮಹಾಸಭೆಯಲ್ಲಿ ಸಾಧಕರಿಗೆ ಸಮ್ಮಾನ


Team Udayavani, Jul 11, 2018, 3:22 PM IST

0907mum01.jpg

ಮುಂಬಯಿ: ತಾಯ್ನಾಡಿನಿಂದ ಮುಂಬಯಿ ಮಹಾನಗರಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಅಮ್ಮ ಆಶೀರ್ವದಿಸಿ ನೀಡಿದ ಬೆಳ್ಳಿಯ ನಾಣ್ಯ ಉದ್ದಿಮೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಕ್ಷಯ ಪಾತ್ರೆಯಾಗಿ ಬದುಕಿಗೆ ಹೊಸ ರೂಪ ನೀಡಿತು. ಅಕ್ಷಯ ಪತ್ರಿಕೆಯ ಮೂಲಕ ಸಾರಸ್ವತ ಲೋಕಕ್ಕೆ ಪರಿಚಯಿಸಿದ ಬಿಲ್ಲವರ ಅಸೋಸಿಯೇಶನ್‌ನ ಮಾರ್ಗದರ್ಶಕ ಜಯ ಸಿ. ಸುವರ್ಣರ ಆದರ್ಶಮಯ ಜೀವನಕ್ಕು ಕೃತಜ್ಞನಾಗಿದ್ದೇನೆ. ಸುಮಾರು 23 ವರ್ಷಗಳ ಕಾಲ ಅಕ್ಷಯ ಮಾಸಿಕ ಪತ್ರಿಕೆಯಲ್ಲಿ ಗೌರವ ಸಂಪಾದಕನಾಗಿ ದುಡಿದು ಅಸಂಖ್ಯಾತ ಓದುಗರನ್ನು ಸಂಪಾದಿಸಿದ್ದೇನೆ. ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ  ಆವಶ್ಯಕತೆ ಬದುಕಿನ ಸವಿಗೆ ಬೇಕು ಎಂದು ಸಾಹಿತಿ ಎಂ. ಬಿ. ಕುಕ್ಯಾನ್‌ ಅವರು ಅಭಿಪ್ರಾಯಿಸಿದರು.

ಜು. 8ರಂದು  ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ 86ನೇ ವಾರ್ಷಿಕ ಮಹಾಸಭೆಯಲ್ಲಿ ಜ್ಞಾನ ಭಾಸ್ಕರ ಬಿರುದು ಮತ್ತು ಸಮ್ಮಾನ ಸ್ವೀಕರಿಸಿದ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಇಲ್ಲಿ ಸೇವೆ ಸಲ್ಲಿಸಿದವರು ಯಶಸ್ವಿ ಬದುಕನ್ನು ಸಾಗಿಸುತ್ತಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳ ಅಗರವಾಗಿರುವ ಬಿಲ್ಲವರ ಅಸೋಸಿಯೇಶನ್‌ ಸಾವಿರಾರು ಮಂದಿಗೆ ದಾರಿದೀಪವಾಗಿದೆ. ಬರವಣಿಗೆಗೆ ಪ್ರೋತ್ಸಾಹಿಸಿದ ಬಿಲ್ಲವರ ಅಸೋಸಿಯೇಶನ್‌ನ ಸರ್ವ ಸದಸ್ಯರಿಗೆ, ಅಕ್ಷಯ ಮಂಡಳಿಗೆ, ಲೇಖಕರಿಗೆ, ಪತ್ರಿಕೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

ಇನ್ನೋರ್ವ ಯುವ ಸಮ್ಮಾನಿತ ಆರ್ಮಿಯ ಲೆಫ್ಟಿನೆಂಟ್‌ ಕರ್ನಲ್‌ ಲಕ್ಷ್ಮೀಶ್‌ ಸುವರ್ಣ ಅವರು ಮಾತನಾಡಿ, ಕಾಶ್ಮೀರ, ರಾಜಸ್ಥಾನ್‌, ಮಣಿಪುರ, ಚೈನಾ ಗಡಿಭಾಗಗಳಲ್ಲಿ ಸೇವೆ ಸಲ್ಲಿದ್ದೇನೆ. ನನ್ನ 14 ವರ್ಷಗಳ ಸೇವಾವಧಿಯಲ್ಲಿ ತುಳುನಾಡಿನ ಯುವಕರ ಸಂಖ್ಯೆ ದೇಶದ ರಕ್ಷಣಾ ಕ್ಷೇತ್ರದಲ್ಲಿ ವಿರಳವಾಗಿದೆ. ಪಾಲಕರು ಮಕ್ಕಳನ್ನು ಸೈನ್ಯಕ್ಕೆ ಸೇರಿಸಲು ಪ್ರೇರೇಪಿಸಬೇಕು. ಈ ಬಗ್ಗೆ ಭಯ ಬೇಡ. ದೇಶಭಕ್ತಿಯಿರಲಿ. ಭಯೋತ್ಪಾದಕರ ನಿಗ್ರಹಕ್ಕಾಗಿ ಪದೋನ್ನತಿ ಹಾಗೂ ಹಲವಾರು ಪ್ರಶಸ್ತಿಗಳು, ನನಗೆ ಬಂದಿವೆ. ಇದು ಉದ್ಯೋಗವಲ್ಲ. ಜೀವನ ಹಾದಿ ಎಂದು ತಿಳಿದು ರಾಷ್ಟ್ರ ಸೇವೆಯಲ್ಲಿ ತೊಡಗಿದ್ದೇನೆ ಎಂದು ಹೇಳಿದರು.

ಅಕ್ಷಯ ಮಾಸಿಕದ ಉಪ ಸಂಪಾದಕ ಹರೀಶ್‌ ಹೆಜ್ಮಾಡಿ ಸಮ್ಮಾನಿತರನ್ನು ಪರಿಚಯಿಸಿ ಸಮ್ಮಾನ ಪತ್ರ ವಾಚಿಸಿದರು. ಸಮಾರಂಭದಲ್ಲಿ ಸೇವಾದಳದ ಸದಸ್ಯ ದಿನೇಶ್‌ ಅಂಚನ್‌ ಅವರು ನಿರ್ಮಿಸಿದ ಬಿಲ್ಲವರ ಅಸೋಸಿಯೇಶನ್‌ ಸಾಧನೆ ಹಾಗೂ ಸಾಧಕರ ಕಿರು ಸಾಕ್ಷÂಚಿತ್ರವನ್ನು ಪ್ರದರ್ಶಿಸಲಾಯಿತು. ವಿಶೇಷ ಸಹಕಾರ ನೀಡಿದ ಭಾರತ್‌ ಬ್ಯಾಂಕಿನ ಆಡಳಿತ ನಿರ್ದೇಶಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ. ಆರ್‌. ಮೂಲ್ಕಿ, ಲೆಕ್ಕ ಪರಿಶೋಧಕರಾದ ಅಶ್ವಜಿತ್‌ ಹೆಜ್ಮಾಡಿ, ಗುರುನಾರಾಯಣ ರಾತ್ರಿಶಾಲೆಯ ಉಪ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್‌, ಉಮೇಶ್‌ ಕರ್ಕೇರ, ಎಸ್‌ಎಸ್‌ಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ಕಿಶೋರ್‌ ಶಂಕರ್‌ ಪವಾರ್‌, ಅರ್ಜುನ್‌ ಕಾಂಬ್ಳೆ, ಗಂಗಾಧರ ಕ್ಯಾತಿ ಅವರನ್ನು ಗೌರವಿಸಲಾಯಿತು.

ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಅವರು ವಂದಿಸಿದರು. ವೇದಿಕೆಯಲ್ಲಿ ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಬಿಲ್ಲವ ಜಾಗೃತಿ ಬಳಗದ ಮಾಜಿ ಅಧ್ಯಕ್ಷ ಎನ್‌. ಟಿ. ಪೂಜಾರಿ, ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಉಪಾಧ್ಯಕ್ಷರುಗಳಾದ ಡಾ| ಯು. ಧನಂಜಯ ಕುಮಾರ್‌, ಶಂಕರ ಡಿ. ಪೂಜಾರಿ, ರಾಜ ವಿ. ಸಾಲ್ಯಾನ್‌, ಪುರುಷೋತ್ತಮ ಎನ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ಧನಂಜಯ ಎಸ್‌. ಕೋಟ್ಯಾನ್‌, ಹರೀಶ್‌ ಜಿ. ಸಾಲ್ಯಾನ್‌, ಪ್ರೇಮನಾಥ್‌ ಪಿ. ಕೋಟ್ಯಾನ್‌, ಆಶಾಲತಾ ಎಸ್‌. ಕೋಟ್ಯಾನ್‌, ಕೇಶವ ಕೆ. ಕೋಟ್ಯಾನ್‌, ಗೌರವ ಪ್ರಧಾನ ಕೋಶಾಧಿಕಾರಿ ಮಹೇಶ್‌ ಸಿ. ಪೂಜಾರಿ ಕಾರ್ಕಳ, ಜತೆ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಶಿವರಾಮ್‌ ಎಸ್‌. ಪೂಜಾರಿ, ಸದಾಶಿವ ಎ. ಕರ್ಕೇರ, ಮೋಹನ್‌ ಡಿ. ಪೂಜಾರಿ, ದಳಪತಿ ಗಣೇಶ್‌ ಕೆ. ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಸ್ಥಳೀಯ ಸಮಿತಿಗಳ ಕಾರ್ಯಾಧ್ಯಕ್ಷರು ಉಪಸ್ಥಿತರಿದ್ದರು.

 ಚಿತ್ರ-ವರದಿ: ರಮೇಶ್‌ ಅಮೀನ್‌ 

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.