ಪ್ರವಾಹ ಪೀಡಿತರಿಗೆ ಪರಿಹಾರ ಒದಗಿಸಲು ಆಡಳಿತ ಕ್ರಮ

Team Udayavani, Aug 14, 2019, 5:23 PM IST

mumbai-tdy-2

ಕೊಲ್ಲಾಪುರದಲ್ಲಿ ನೆರೆ ಪೀಡಿತರಿಗೆ ಹೆಲಿಕಾಪ್ಟರ್‌ ಮೂಲಕ ಅಗತ್ಯ ಸಾಮಾಗ್ರಿಗಳನ್ನು ಒದಗಿಸಲಾಯಿತು.

ಕೊಲ್ಲಾಪುರ, ಆ. 13: ಕೊಲ್ಲಾಪುರ ಮತ್ತು ಸಾಂಗ್ಲಿಯಲ್ಲಿ ಪ್ರವಾಹ ನೀರು ಕಡಿಮೆಯಾಗುತ್ತಿರುವುದರಿಂದ, ಪಶ್ಚಿಮ ಮಹಾರಾಷ್ಟ್ರದ ಎರಡೂ ಜಿಲ್ಲೆಗಳ ಆಡಳಿತವು ಈಗ ಮಳೆಯ ಪ್ರಕೋಪದಿಂದ ಪೀಡಿತರಾಗಿರುವ ಜನರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸುವತ್ತ ತನ್ನ ಗಮನವನ್ನು ಕೇಂದ್ರೀಕರಿಸಿದೆ.

ಎರಡೂ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಗಳು ಮುಗಿದಿದ್ದು, ಪ್ರವಾಹದಿಂದ ಹಾನಿಗೊಳ ಗಾದವರಿಗೆ ವಿತ್ತೀಯ ನೆರವು ನೀಡಲು ನಷ್ಟ ಮೌಲ್ಯಮಾಪನ ಮಾಡಲು ಪ್ರಾರಂಭಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂಬತ್ತು ದಿನಗಳಲ್ಲಿ ರಾಜ್ಯದ ಕೊಂಕಣ ಮತ್ತು ಪಶ್ಚಿಮ ಭಾಗಗಳಲ್ಲಿ ಭಾರೀ ಮಳೆಯಿಂದ ಉಂಟಾದ ಭೀಕರ ಪ್ರವಾಹವು 43 ಜನರನ್ನು ಬಲಿಪಡೆದುಕೊಂಡಿದ್ದು, ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ವ್ಯಾಪಕ ಹಾನಿ ಉಂಟುಮಾಡಿದೆ.

ಕೊಲ್ಲಾಪುರದಲ್ಲಿ ರಕ್ಷಣಾ ಕಾರ್ಯಗಳು ಪೂರ್ಣಗೊಂಡಿವೆ. ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಪೂರೈಕೆಯನ್ನು ಪುನಃಸ್ಥಾಪಿಸಲಾಗಿದೆ. ವಿದ್ಯುತ್‌ ಮತ್ತು ಫೋನ್‌ ಸಂಪರ್ಕವನ್ನು ಪುನಃಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಶಿಂಧೆ ತಿಳಿಸಿದ್ದಾರೆ.

ಈಗಾಗಲೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರವಾಹ ಪೀಡಿತ ಜನರಿಗೆ ಅಗತ್ಯ ಸಾಮಗ್ರಿಗಳು ತಲುಪುವಂತಹ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದಿ ಶಿಂಧೆ ತಿಳಿಸಿದರು.ಪ್ರವಾಹ ಪೀಡಿತ ಜನರ ರಕ್ಷಣೆ ಮತ್ತು ಸ್ಥಳಾಂತರವನ್ನು ಒಳಗೊಂಡ ಮೊದಲ ಹಂತವು ಈಗ ಮುಗಿದಿದೆ. ಪ್ರಸ್ತುತ ಪರಿಹಾರ ಸಾಮಗ್ರಿಗಳನ್ನು ಒದಗಿಸುವ ಎರಡನೇ ಹಂತವು ನಡೆಯುತ್ತಿದೆ ಎಂದವರು ಹೇಳಿದ್ದಾರೆ. ನಷ್ಟದ ಮೌಲ್ಯಮಾಪನವನ್ನು ನಡೆಸುವ ಮೂರನೇ ಹಂತವನ್ನು ಕೂಡ ಪ್ರಾರಂಭಿಸಲಾಗಿದೆ. ನಾವು ಜನರಿಗೆ ವಿತ್ತೀಯ ಪರಿಹಾರವನ್ನು ವಿತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾಧಿಕಾರಿ ಅಭಿಜಿತ್‌ ಚೌಧರಿ ಅವರು ಕೂಡ ತಮ್ಮ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಮತ್ತು ಜನರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸುವುದರತ್ತ ಮುಖ್ಯ ಗಮನವನ್ನು ಕೇಂದ್ರೀಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 160ಕ್ಕೂ ಹೆಚ್ಚು ಶಿಬಿರಗಳಲ್ಲಿ ಜನರಿಗೆ ಪರಿಹಾರ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ ಮತ್ತು ನಷ್ಟ ಪ್ರಮಾಣವನ್ನು ನಿರ್ಣಯಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದರು. ಸಾಂಗ್ಲಿಯಲ್ಲಿ ಪ್ರವಾಹದ ನೀರು ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.

ಸಾಂಗ್ಲಿಯ ಇರ್ವಿನ್‌ ಸೇತುವೆಯಲ್ಲಿರುವ ಕೃಷ್ಣಾ ನದಿಯ ನೀರಿನ ಮಟ್ಟ ಮತ್ತು ಕೊಲ್ಲಾಪುರದ ರಾಜಾರಾಮ್‌ ವೀರ್‌ನಲ್ಲಿರುವ ಪಂಚಗಂಗಾ ನದಿಯ ಮಟ್ಟವು ಮಂಗಳವಾರ 47 ಅಡಿಗಳಷ್ಟು ದಾಖಲಾಗಿದ್ದು, ಇದು ಇನ್ನೂ ಅಪಾಯದ ಗುರುತುಗಿಂತ ಮೇಲೆ ಹರಿಯುತ್ತಿದೆ. ಸಾಂಗ್ಲಿಯಲ್ಲಿ ಕೃಷ್ಣಾ ನದಿಯ ಅಪಾಯದ ಗುರುತು 45 ಅಡಿಗಳಷ್ಟಿದ್ದರೆ,ಕೊಲ್ಲಾಪುರದ ಪಂಚಗಂಗಾ ನದಿಗೆ ಅಪಾಯದ ಗುರುತು 43 ಅಡಿ ಆಗಿದೆ.

ಕಳೆದ ವಾರ ಪ್ರವಾಹದ ನೀರಿನಲ್ಲಿ ಮುಳುಗಡೆಯಾಗಿದ್ದ ಮುಂಬಯಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್ -4) ನೀರು ಕಡಿಮೆಯಾದ ಅನಂತರ ಸೋಮವಾರ ಭಾಗಶಃ ಸಂಚಾರಕ್ಕಾಗಿ ತೆರೆಯಲ್ಪಟ್ಟಿದ್ದು, ನಿಧಾನಗತಿಯ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಕೊಲ್ಲಾಪುರ ಉಪ ಜಿಲ್ಲಾಧಿಕಾರಿ ಸಂಜಯ್‌ ಶಿಂಧೆ ಹೇಳಿದ್ದಾರೆ.

ಸಾಂಗ್ಲಿಯ ಸುಮಾರು 17 ಗ್ರಾಮಗಳು ಜಲಮಯವಾಗಿವೆ. ಆ ಪ್ರದೇಶಗಳಲ್ಲಿನ ರಸ್ತೆಗಳು ಕೆಟ್ಟ ಸ್ಥಿತಿಯಲ್ಲಿರುವುದರಿಂದ ಅಗತ್ಯ ವಸ್ತುಗಳನ್ನು ದೋಣಿಗಳ ಮೂಲಕ ಕಳುಹಿಸಲಾಗುತ್ತಿದೆ.ಆರೋಗ್ಯದ ಅಪಾಯಗಳನ್ನು ತಡೆಗಟ್ಟಲು ಶುದ್ಧೀಕರಣ ಘಟಕಗಳಲ್ಲಿ ಶುದ್ಧೀಕರಿಸಿದ ನೀರನ್ನು ಸಂತ್ರಸ್ತರಿಗೆ ಸರಬರಾಜು ಮಾಡಲಾಗುತ್ತಿದೆ ಮತ್ತು ನೀರಿನ ಟ್ಯಾಂಕರ್‌ಗಳನ್ನು ಕೂಡ ಸರಿಯಾಗಿ ಶುದ್ಧೀಕರಿಸಲಾಗಿದೆ ಎಂದು ಸಾಂಗ್ಲಿ ಜಿಲ್ಲಾಧಿಕಾರಿ ಅಭಿಜಿತ್‌ ಚೌಧರಿ ತಿಳಿಸಿದ್ದಾರೆ. ಸಾಂಗ್ಲಿಯ ವಿವಿಧ ಸ್ಥಳಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದೆ ಮತ್ತು ಸೋಮವಾರದವರೆಗೆ 10,000ಕ್ಕೂ ಹೆಚ್ಚು ಜನರು ತಪಾಸಣೆಗಾಗಿ ಅಲ್ಲಿಗೆ ಹೋಗಿ ಔಷಧಗಳನ್ನು ಪಡೆದುಕೊಂಡಿದ್ದಾರೆ ಎಂದರು. ಪ್ರವಾಹದ ನೀರು ಕಡಿಮೆಯಾಗುತ್ತಿರುವ ಹೊರತಾಗಿಯೂ ಕೊಲ್ಲಾಪುರ ಮತ್ತು ಸಾಂಗ್ಲಿ ಎರಡೂ ಜಿಲ್ಲೆಗಳ ಪ್ರಮುಖ ನದಿಗಳು ಇನ್ನೂ ಅಪಾಯದ ಮಟ್ಟಕ್ಕಿಂತ ಹೆಚ್ಚಳವಾಗಿ ಹರಿಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುದ್ಧೀಕರಿಸಿದ ನೀರು, ಔಷಧ ವಿತರಣೆ:

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.