ಆ. 3: ಮಹಿಳಾ ವಿಭಾಗದಿಂದ ಆಟಿಡೊಂಜಿ ಕೂಟ
Team Udayavani, Aug 2, 2019, 10:55 AM IST
ಮುಂಬಯಿ, ಆ. 1: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಹಿಳಾ ವಿಭಾಗದ ವತಿಯಿಂದ ಆ. 3ರಂದು ಸಂಜೆ 5ರಿಂದ ವಾರ್ಷಿಕ ಆಟಿಡೊಂಜಿ ಕೂಟ ಕಾರ್ಯಕ್ರಮವು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮವನ್ನು ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಇವರು ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಸಂಘ ಪನ್ವೆಲ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಗೋಕುಲ್ ಸಯಾನ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರೇಮಾ ರಾವ್, ಸಮಾಜ ಸೇವಕಿ ವಿಜಯಲಕ್ಷ್ಮೀ ಕೇಶವ ಅಂಚನ್ ಅವರು ಆಗಮಿಸಲಿದ್ದಾರೆ.
ಕೇಂದ್ರ ಕಚೇರಿಯ ಮತ್ತು ಸ್ಥಳೀಯ ಕಚೇರಿಗಳ ಮಹಿಳಾ ವಿಭಾಗದವರಿಂದ ತುಳುನಾಡಿನ ವಿವಿಧ ಖಾದ್ಯ-ಪದಾರ್ಥಗಳ ಪ್ರದರ್ಶ, ಆಟಿ ಕಳಂಜ ನೃತ್ಯ, ಜಾನಪದ ಹಾಡು, ನೃತ್ಯ, ರಸಪ್ರಶ್ನೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್ ಎಸ್. ಕೋಟ್ಯಾನ್, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಗೌರವ ಕಾರ್ಯದರ್ಶಿ ಸುಮಿತ್ರಾ ಎಸ್. ಬಂಗೇರ ಮತ್ತು ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ಗಿಫ್ಟ್ ಡೀಡ್: ಸುಪ್ರೀಂಕೋರ್ಟ್ನಿಂದ ಕಣ್ತೆರೆಸುವ ತೀರ್ಪು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ
ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್ಗಳ ದರವೂ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.