ಆ. 4: ವಾರ್ಷಿಕ ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Team Udayavani, Aug 2, 2019, 10:50 AM IST

mumbai-tdy-1

ಮುಂಬಯಿ, ಆ. 1: ಮುಲುಂಡ್‌ ಬಂಟ್ಸ್‌ ಇದರ ವಾರ್ಷಿಕ ಶೈಕ್ಷಣಿಕ ನಿಧಿ ವಿತರಣೆ ಸಮಾರಂಭವು ಆ. 4 ರಂದು ಬೆಳಗ್ಗೆ 9.30ರಿಂದ ಮುಲುಂಡ್‌ ಪೂರ್ವದ, ಮಹಾತ್ಮ ಫುಲೆ ರೋಡ್‌, ಬಾನ್ಸೂರಿ ಹೊಟೇಲ್ನ ಗೀತಾವಾಲಾ ಬಿಲ್ಡಿಂಗ್‌, ಸಿಂಪೋನಿಯಾ ಪ್ರೈಡ್‌ ಸಭಾಗೃಹದಲ್ಲಿ ನಡೆಯಲಿದೆ.

ಮುಲುಂಡ್‌ ಬಂಟ್ಸ್‌ನ ಅಧ್ಯಕ್ಷ ಪಲಿಮಾರು ವಸಂತ್‌ ಎನ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬಂಟರ ಸಂಘ ಮುಂಬಯಿ ಎಸ್‌. ಎಂ.ಶೆಟ್ಟಿ ಶಿಕ್ಷಣ ಸಂಕುಲದ ಕಾರ್ಯಾಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ, ವಾಶಿಯ ಸುಪ್ರೀ ಹೆರಿಟೇಜ್‌ ಹೊಟೇಲ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಶಿವರಾಮ ಜಿ. ಶೆಟ್ಟಿ, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್‌ದಾಸ್‌ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ.

ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿರುವ ಮುಲುಂಡ್‌ ಬಂಟ್ಸ್‌ ಸ್ಥಳೀಯ ಸಮಾಜ ಬಾಂಧವರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸ್ಥಾಪನೆಗೊಂಡಿತು. ಸಂಘವು ಸ್ಥಾಪನೆಯ ದಿನದಿಂದ ಹಿಡಿದು ಇಲ್ಲಿಯವರೆಗೆ ಸಮಾಜಪರ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ವೈದ್ಯಕೀಯ ಇನ್ನಿತರ ಕ್ಷೇತ್ರಗಳಲ್ಲಿ ಮಹತ್ತರವಾದ ಸಾಧನೆ ಮಾಡುತ್ತಿದೆ. ಸಂಸ್ಥೆಯ ಮಾಜಿ ಅಧ್ಯಕ್ಷರು ಮತ್ತು ಟ್ರಸ್ಟಿಗಳಾದ ಎನ್‌. ವಿವೇಕ್‌ ಶೆಟ್ಟಿ, ರಮೇಶ್‌ ಎಸ್‌. ಶೆಟ್ಟಿ ಡಾ| ಸತ್ಯಪ್ರಕಾಶ್‌ ಶೆಟ್ಟಿ, ಸುರೇಶ್‌ ಬಿ. ಶೆಟ್ಟಿ, ಎಚ್. ಪ್ರಕಾಶ್ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ಸಮಾಜ ಬಾಂಧವರ ಕಣ್ಣೀರೊರೆಸುವ ಕಾರ್ಯದಲ್ಲಿ ತೊಡಗಿ ಯಶಸ್ವಿಯಾಗಿದ್ದು, ಪ್ರಸ್ತುತ ಅಧ್ಯಕ್ಷ ವಸಂತ್‌ ಎನ್‌. ಶೆಟ್ಟಿ ಪಲಿಮಾರು ಅವರ ಅಧ್ಯಕ್ಷತೆಯಲ್ಲಿ ಸಂಸ್ಥೆಯು ಅಭಿವೃದ್ಧಿಯ ಪಥದತ್ತ ಮುನ್ನುಗುತ್ತಿದೆ.

ಸಂಸ್ಥೆಯು ಸಮಾಜಪರ ಕಾರ್ಯಗಳೊಂದಿಗೆ ಶೈಕ್ಷಣಿ ನೆರವು ವಿತರಣೆ, ಶೈಕ್ಷಣಿಕ ದತ್ತು ಸ್ವೀಕಾರ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಆರೋಗ್ಯ ಮಾಹಿತಿ ಶಿಬಿರ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ, ನಾಟಕ, ಯಕ್ಷಗಾನ ಪ್ರದರ್ಶನ ಅಲ್ಲದೆ ನಾಡಿನ ಕಲೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ-ಬೆಳೆಸುವ ದೃಷ್ಟಿಯಿಂದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳೊಂದಿಗೆ ಪರಿಸರದ ಸಮಾಜ ಬಾಂಧವರು ಮನೆ-ಮನಗಳನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯು ಮಹಿಳಾ ವಿಭಾಗ, ಯುವ ವಿಭಾಗ ಇನ್ನಿತರ ಉಪಸಮಿತಿಗಳನ್ನು ಸ್ಥಾಪಿಸಿಕೊಂಡು ವಿವಿಧ ಯೋಜನೆಗಳ ಯಶಸ್ಸಿಗೆ ಶ್ರಮಿಸುತ್ತಿವೆ.

ಸಂಸ್ಥೆಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್‌ ಎಂ. ಅಡ್ಯಂತಾಯ, ಮುಲುಂಡ್‌ ಬಂಟ್ಸ್‌ನ ಉಪಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಬಿ. ಶ್ರೀನಿವಾಸ ಶೆಟ್ಟಿ, ಗೌರವ ಕೋಶಾಧಿಕಾರಿ ರತ್ನಾಕರ ವೈ. ಶೆಟ್ಟಿ, ಜತೆ ಕಾರ್ಯದರ್ಶಿ ಕೃಷ್ಣ ಪ್ರಸಾದ್‌ ಶೆಟ್ಟಿ, ಜತೆ ಕಾರ್ಯದರ್ಶಿ ವೇಣುಗೋಪಾಲ್ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್‌ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಆರ್‌. ಚೌಟ, ಯುವ ವಿಭಾಗದ ಕಾರ್ಯಾಧ್ಯಕ್ಷೆ ಶ್ರುತಿಕಾ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ ಸಮಾರಂಭವು ಜರಗಲಿದ್ದು, ಸದಸ್ಯ ಬಾಂಧವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮುಲುಂಡ್‌ ಬಂಟ್ಸ್‌ನ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.