ಆ. 5: ಪನ್ವೇಲ್ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ
Team Udayavani, Aug 3, 2019, 5:14 PM IST
ನವಿಮುಂಬಯಿ, ಆ. 2: ತುಳುನಾಡಿನ ಶೈಲಿಯಲ್ಲಿ ನಿರ್ಮಾಣ ಗೊಂಡ ಪನ್ವೇಲ್ ಸಮೀಪದ ದೇರಾವಳಿ ಎಂಬಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದ ಆ. 5ರಂದು ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ವಿಜೃಂಭಣೆಯಿಂದ ನಡೆಯಲಿದೆ.
ಪೂರ್ವಾಹ್ನ 9 ರಿಂದ ಸಾಮೂಹಿಕ ಪ್ರಾರ್ಥನೆಯೊಂದಿಗೆ ನಾಗಾರಾಧನೆಗೆ ಚಾಲನೆಗೊಳ್ಳಲಿದೆ. ಅನಂತರ ಭಕ್ತರು ಕ್ಷೀರಾಭಿಷೇಕ, ಸೀಯಾಳಾಭಿಷೇಕ, ತಂಬಿಲ ಸೇವೆ, ಅರಸಿನ ಅರ್ಚನೆ, ಪಂಚಕಜ್ಜಾಯ ಸೇವೆ ಇತ್ಯಾದಿ ಸಲ್ಲಿಸಬಹುದು. ಮಧ್ಯಾಹ್ನ 12 ರಿಂದ ಮಹಾಪೂಜೆ ನಡೆಯಲಿದೆ. ಅನಂತರ ಸಾಮೂಹಿಕ ಅನ್ನ ಸಂತರ್ಪಣೆ ನೆರವೇರಲಿದೆ. ಈ ಧಾರ್ಮಿಕ ಸಮಾರಂಭದಲ್ಲಿ ಭಕ್ತರು ಜಾತಿ ಬೇಧವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಂದಿರದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.