ಆಹಾರ್ ನಿಯೋಗದಿಂದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಭೇಟಿ
Team Udayavani, Jul 28, 2017, 4:17 PM IST
ಮುಂಬಯಿ: ಆಹಾರ್ ನಿಯೋಗವೊಂದು ಉತ್ತರ ಮುಂಬಯಿ ಲೋಕಸಭಾ ಸದಸ್ಯ ಗೋಪಾಲ್ ಶೆಟ್ಟಿ ನೇತೃತ್ವದಲ್ಲಿ ದಿಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿ ಹವಾನಿಯಂತ್ರಿತ ಮತ್ತು ಹವಾನಿಯಂತ್ರಿವಲ್ಲದ ರೆಸ್ಟೋರೆಂಟ್ಗಳು, ಲಿಕ್ಕರ್ ಸಹಿತ ಹೊಟೇಲ್ ಉದ್ಯಮದ ಮೇಲೆ ಹೇರಲಾದ ಶೇ. 18 ರಷ್ಟು ಜಿಎಸ್ಟಿ ತೆರಿಗೆಯನ್ನು ಶೇ. 12ಕ್ಕೆ ಇಳಿಸುವಂತೆ ಕೋರಿ ಮನವಿ ಸಲ್ಲಿಸಿತು.
ಶೇ. 18ರಷ್ಟು ಜಿಎಸ್ಟಿ ಹೇರಿಕೆ ತುಂಬಾ ಅಧಿಕವಾಗಿದ್ದು, ಇದರಿಂದ ಹೊಟೇಲ್ ಉದ್ಯಮದ ಮೇಲೆ ಭಾರೀ ಪರಿಣಾಮ ಬಿದ್ದಿದೆ ಎಂದು ನಿಯೋಗವು ಸಚಿವರಿಗೆ ಮನದಟ್ಟು ಮಾಡಿತು. ಈ ಕುರಿತು ಗೋಪಾಲ್ ಶೆಟ್ಟಿ ಅವರು ಕೂಡಾ, ಹಣಕಾಸು ಸಚಿವರಿಗೆ ಸವಿವರವಾಗಿ ತಿಳಿಸಿದರು.
ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅರುಣ್ ಜೇಟಿÉ ಅವರು ಆ. 5ರಂದು ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಲಿದ್ದು, ಅಲ್ಲಿ ಈ ವಿಷಯವನ್ನು ಪ್ರಸ್ತಾವಿಸುತ್ತೇವೆ. ಈ ಬಗ್ಗೆ ಮೊದಲೇ ತನ್ನ ಗಮನಕ್ಕೆ ಬಂದಿರುವುದಾಗಿ ತಿಳಿಸಿದರು. ಇದಕ್ಕೆ ಮೊದಲು ನಿಯೋಗವು ಹಣಕಾಸು ಖಾತೆಯ ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ಸಂಸದ ಗೋಪಾಲ್ ಶೆಟ್ಟಿ, ಆಹಾರ್ನ ಅಧ್ಯಕ್ಷ ಆದರ್ಶ್ ಶೆಟ್ಟಿ, ಮುಂಬಯಿ ಬಿಜೆಪಿ ಸಮಿತಿಯ ವಕ್ತಾರ ನಿರಂಜನ್ ಶೆಟ್ಟಿ, ಉದ್ಯಮಿ ಎಮಾಳ್ ಹರೀಶ್ ಶೆಟ್ಟಿ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.