ಅಂಧೇರಿ ಜಗದಂಬಾ ದೇವಸ್ಥಾನ: 63ನೇ ಶರನ್ನವರಾತ್ರಿ 

Team Udayavani, Sep 26, 2017, 4:58 PM IST

655445458789.jpg

ಮುಂಬಯಿ: ಅಂಧೇರಿ ಪೂರ್ವದ ಬ್ಯಾಪ್ಟಿಸ್ಟ್‌ವಾಡಿಯ ಶ್ರೀ ಕ್ಷೇತ್ರ ದತ್ತ ಜಗದಂಬಾ ದೇವಸ್ಥಾನದಲ್ಲಿ 63 ನೇ ವಾರ್ಷಿಕ ಶರನ್ನವರಾತ್ರಿ ಉತ್ಸವವು ಸೆ. 21 ರಂದು ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಮಂದಿರದ ಪ್ರಾಂಗಣದಲ್ಲಿ ಚಾಲನೆಗೊಂಡಿತು.

ಮಹೇಶ್‌ ಶಾಂತಿ ಅವರ ಪೌರೋಹಿತ್ಯದಲ್ಲಿ ಕಲಶ ಸ್ಥಾಪನೆ, ಪುಷ್ಪ ಸೇವೆ, ಹಿಂಗಾರ ಸೇವೆ, ಕುಂಕುಮ ಸೇವೆ, ಅಗ್ನಿ ಸೇವು, ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಚಂಡಿಕಾ ಹೋಮ, ಲಲಿತ ಸಹಸ್ರನಾಮಾರ್ಚನೆ, ಇತ್ಯಾದಿ ಪೂಜೆಗಳನ್ನು ಆಯೋಜಿಸಲಾಗಿದೆ.

ಶ್ರೀ ಕ್ಷೇತ್ರದ ದತ್ತ ಜಗದಂಬಾ ದೇವಸ್ಥಾನದ ಅಧ್ಯಕ್ಷ ದಯಾನಂದ ಸಿ. ಅಂಚನ್‌ ಅವರು ಕ್ಷೇತ್ರದ ಬಗ್ಗೆ ತಿಳಿಸಿ, ಗುಡ್ಡಕಾಡು ಪ್ರದೇಶದ ಬ್ಯಾಪ್ಟಿಸ್ಟ್‌ವಾಡಿಯ ಶ್ರೀ ದತ್ತಜಗದಂಬಾ ದೇವಸ್ಥಾನಕ್ಕೆ 63 ವರ್ಷಗಳ ಇತಿಹಾಸವಿದೆ. ಮೂಲಭೂತ ಸೌಕರ್ಯಗಳು ಇಲ್ಲದ ಅಂದಿನ ಕಷ್ಟ, ಕಾರ್ಪಣ್ಯಗಳ ದಿನಗಳಲ್ಲೂ ನಮ್ಮ ಪೂರ್ವಜರು ನಾಡು-ನುಡಿಯ ಸೇವೆಗಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಅವರ ತ್ಯಾಗಮಯ ಜೀವನದ ಪ್ರತಿಬಿಂಬವಾಗಿ ಇಲ್ಲಿನ ಪ್ರತಿಯೊಂದು ಕಾರ್ಯಕ್ರಮ ಸಾಂಪ್ರದಾಯಿಕ ಶೈಲಿಯಲ್ಲಿ ಬೆಳಗುತ್ತಿದೆ. ಶ್ರಾವಣ ಮಾಸದಲ್ಲಿ ಪ್ರತೀ ದಿನ ಭಜನೆ, ಪ್ರತಿ ವರ್ಷ ಆಮಂತ್ರಿತ ಭಜನ ಮಂಡಳಿಗಳಿಂದ ಏಕಾಹ ಭಜನೆ, ದತ್ತಜಯಂತಿ ಇತ್ಯಾದಿಗಳನ್ನು ಶಾಸ್ತೊÅàಕ್ತವಾಗಿ ಆಚರಿಸಲಾಗುತ್ತದೆ. ಸೆ. 31 ರಂದು ಶೋಭಾಯಾತ್ರೆಯೊಂದಿಗೆ ಅಂಧೇರಿ ವಸೋìವಾದಲ್ಲಿ ದೇವಿಯ ವಿಸರ್ಜನ ಕಾರ್ಯಕ್ರಮ ನಡೆಯಲಿದೆ ಎಂದರು.

ಗೌರವ ಪ್ರಧಾನ ಕಾರ್ಯದರ್ಶಿ ಯಶವಂತ್‌ ಅಮೀನ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾರಾಷ್ಟ್ರ ಕನ್ನಡಿಗ ಕಲಾವಿದರ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ ಅವರ ಮಾರ್ಗದರ್ಶನದೊಂದಿಗೆ ಸ್ಥಳೀಯ ತುಳು-ಕನ್ನಡಿಗರ ಸಂಪೂರ್ಣ ಸಹಕಾರದೊಂದಿಗೆ ತವರೂರಿನ ಜಾತ್ರೆಯನ್ನು ಹೋಲುವ ಕೆಲವೊಂದು ಕಾರ್ಯಕ್ರಮಗಳು 60 ರ ಸಂಭ್ರಮದಲ್ಲಿ ನಡೆದಿತ್ತು. ಈ ಷಷ್ಠಬ್ಧÂ ಆಚರಣೆಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಆಶೀರ್ವಚನದಲ್ಲಿ ಇದೊಂದು ಮಹಾನಗರದ ಧಾರ್ಮಿಕ ಕ್ಷೇತ್ರ ಎಂದು ವ್ಯಾಖ್ಯಾನಿಸಿದ್ದರು. ಮಹಿಳಾ ಸದಸ್ಯೆಯರು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ಜನಾಂಗದ ಸಂಪೂರ್ಣ ಸಹಕಾರ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆಯಾಗಿದೆ. ಪ್ರತೀ ದಿನ ಶ್ರೀ ಕ್ಷೇತ್ರದಲ್ಲಿ ಸಂಜೆ ದೇವಿ ಗ್ರಂಥ ಪಾರಾಯಣ, ಭಜನೆ, ಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಸ್ಥಳೀಯ ತುಳು-ಕನ್ನಡಿಗರು, ಕನ್ನಡೇತರರು, ನಗರ ಸೇವಕರು, ವಿವಿಧ ಸಂಘಟನಗಳ ಸದಸ್ಯರು, ಸ್ಥಳೀಯ ಉದ್ಯಮಿಗಳು, ಸಮಾಜ ಸೇವಕರು, ಭಕ್ತಾದಿಗಳು  ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.