ಶಿಕ್ಷಣ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಕ್ಕೆ ಶೀಘ್ರ ನಿರ್ಧಾರ: ಸಚಿವ ಸಾಮಂತ್
Team Udayavani, Jun 10, 2021, 1:02 PM IST
ಸಾಂಗ್ಲಿ: ಕೊರೊನಾ ಹಿನ್ನೆಲೆಯಲ್ಲಿ ಸರಕಾರವು 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು, ಮುಂದಿನ ಕೆಲವು ದಿನಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಿದೆ. ಆ ನಿಟ್ಟಿನಲ್ಲಿ ವೃತ್ತಿಪರ ಮತ್ತು ವೃತ್ತಿಪರೇತರ ಶಿಕ್ಷಣ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ತತ್‌ಕ್ಷಣ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.
ಇಸ್ಲಾಂಪುರದ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಲಾದ ಪ್ರಥಮ ವರ್ಷದ ಪದವಿ ಪ್ರವೇಶದ ಸಭೆಯಲ್ಲಿ ಅವರು ಮಾತನಾಡಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ಮಾತನಾಡಿ, 12ನೇ ತರಗತಿ ಬಳಿಕ ವಿದ್ಯಾರ್ಥಿಗಳು ವಿವಿಧ ವೃತ್ತಿಪರ ಶಿಕ್ಷಣಕ್ಕೆ ಹೋಗುತ್ತಾರೆ. ಇದಕ್ಕಾಗಿ ಸಿಇಟಿ ಪರೀಕ್ಷೆ ಮುಖ್ಯವಾಗಿದೆ. ಈ ಸಿಇಟಿ ಪರೀಕ್ಷೆಯನ್ನು ನಡೆಸಲು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಸಿದ್ಧತೆಗಳು ನಡೆಯುತ್ತಿವೆ. 12ನೇ ತರಗತಿಯ ಫಲಿತಾಂಶದ ಬಳಿಕ ಮೊದಲ ವರ್ಷದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ವೇಳೆ ಸಮಾನ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವಲ್ಲಿ ಉಂಟಾಗುವ ಕೆಲವು ಅಡೆತಡೆಗಳನ್ನು ಪರಿಹರಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಸುಗಮವಾಗಿ ಪ್ರಾರಂಭವಾಗಲು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ತಾಂತ್ರಿಕ ಶಿಕ್ಷಣದ ಪ್ರವೇಶ ಪ್ರಕ್ರಿಯೆಯು ಸಾಮಾನ್ಯವಾಗಿ ಜುಲೈ-ಆಗÓr… ವರೆಗೆ ನಡೆಯುತ್ತದೆ. ಕೊರೊನಾ ಸಂಭವನೀಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನೂ ಪರಿಗಣಿಸಲಾ ಗುತ್ತದೆ. ರಾಜ್ಯ ಶಿಕ್ಷಣ ಮಂಡಳಿಯ 12ನೇ ತರಗತಿ ಪರೀಕ್ಷೆಯ ಫಲಿತಾಂಶದ ಬಳಿಕವೇ ಪದವಿ ಪ್ರವೇಶ್ಕಕಾಗಿ ಸಂಬಂಧಿಸಿದಂತೆ ಮೇರಿಟ್ ಲಿಸ್ಟ್ ಮತ್ತು ಪ್ರವೇಶ ಪ್ರಕ್ರಿಯೆ ಅನುಷ್ಠಾನಗೊಳಿಸುವ ನೀತಿ ರಾಜ್ಯ ಸರಕಾರದ ಮಾರ್ಗಸೂಚಿಗಳ ಪ್ರಕಾರ ಇರುತ್ತದೆ ಎಂದು ಸಚಿವ ಸಾಮಂತ್ ಹೇಳಿದ್ದಾರೆ.
ಸಭೆಯಲ್ಲಿ ವಾಲ್ವಾ ಉಪ ವಿಭಾಗೀಯ ಅಧಿಕಾರಿ ಡಾ| ವಿಜಯ್ ದೇಶು¾ಖ್, ತಹಶೀಲ್ದಾರ್ ರವೀಂದ್ರ ಸಬಿ°ಸ್, ಜಿಲ್ಲಾ ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಅಧಿಕಾರಿ ಯತಿನ್ ಪರಗಾಂವ್ಕರ್ ಮತ್ತು ವಿವಿಧ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.