“ಸಿಬಿಐ ವಿಚಾರಣೆ ಕಾನೂನು ಬಾಹಿರ’
Team Udayavani, Jul 3, 2021, 1:17 PM IST
ಮುಂಬಯಿ,: ಭ್ರಷ್ಟಾಚಾರದ ಆರೋಪದ ಬಗ್ಗೆ ಸಿಬಿಐ ತನ್ನ ವಿರುದ್ಧ ನಡೆಸುತ್ತಿರುವ ವಿಚಾರಣೆ ಕಾನೂನುಬಾಹಿರ ಮತ್ತು ಕಾನೂನು ಪ್ರಕ್ರಿಯೆಗಳ ಉಲ್ಲಂಘನೆಯಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶು¾ಖ್ ಶುಕ್ರವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದಾರೆ.
ಎಪ್ರಿಲ್ನಲ್ಲಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆಯನ್ನು ಪ್ರಾರಂಭಿಸಲಾಗಿದ್ದರೂ ಅನಿಲ್ ದೇಶು¾ಖ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಸಂಸ್ಥೆ ಮಹಾರಾಷ್ಟ್ರ ಸರಕಾರದಿಂದ ಪೂರ್ವ ಅನುಮತಿ ಪಡೆಯಲಿಲ್ಲ. ಆದುದರಿಂದ ದೇಶು¾ಖ್ ವಿರುದ್ಧ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪದ ಮೇಲೆ ವಿಚಾರಣೆ ಕಾನೂನುಬಾಹಿರವಾಗಿದೆ ಎಂದು ದೇಶು¾ಖ್ ಅವರ ವಕೀಲ ಹಿರಿಯ ವಕೀಲ ಅಮಿತ್ ದೇಸಾಯಿ ಹೈಕೋರ್ಟ್ಗೆ ತಿಳಿಸಿದರು.
ಮುಂಬಯಿ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ವಿರುದ್ಧ ಭ್ರಷ್ಟಾಚಾರದ ಆರೋಪದ ಬಳಿಕ ಸಿಬಿಐ ತನ್ನ ವಿರುದ್ಧ ದಾಖಲಿಸಿದ ಎಫ್ಐಆರ್ ಅನ್ನು ಪ್ರಶ್ನಿಸಿ ದೇಶು¾ಖ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಎಸ್. ಎಸ್. ಶಿಂಧೆ ಮತ್ತು ಎನ್. ಎಂ. ಜಮದಾರ್ ಅವರ ನ್ಯಾಯಪೀಠದ ಮುಂದೆ ದೇಸಾಯಿ ವಾದಿಸಿದರು.
ಈ ವರ್ಷದ ಎಪ್ರಿಲ್ನಲ್ಲಿ ಹೈಕೋರ್ಟ್ ಮುಖ್ಯ ನ್ಯಾ| ದೀಪಂಕರ್ ದತ್ತ ನೇತೃತ್ವದ ನ್ಯಾಯಪೀಠದ ಆದೇಶದ ಬಳೀಕ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ದೇಶು¾ಖ್ ವಿರುದ್ಧ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು. ಪ್ರಾಥಮಿಕ ವಿಚಾರಣೆಯು ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿದ್ದರೂ ಸಿಬಿಐ ದೇಶು¾ಖ್ ವಿರುದ್ಧ ಎಫ್ಐಆರ್ ದಾಖಲಿಸುವಲ್ಲಿ ಕಾನೂನಿನ ಪ್ರಕ್ರಿಯೆಯನ್ನು ಉಲ್ಲಂಘಿಸಿದೆ ಎಂದು ವಕೀಲ ದೇಸಾಯಿ ಹೈಕೋರ್ಟ್ಗೆ ತಿಳಿಸಿದರು. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಎ ಯಲ್ಲಿ ಸಾರ್ವಜನಿಕ ಸೇವಕನ ವಿರುದ್ಧ ಕಾನೂನು ಕ್ರಮ ಜರಗಿಸಲು ಪೊಲೀಸರು ಅಥವಾ ಇನ್ನಾವುದೇ ತನಿಖಾ ಸಂಸ್ಥೆ ಪೂರ್ವ ಅನುಮತಿ ಪಡೆಯಬೇಕು ಎಂದು ದೇಸಾಯಿ ಹೇಳಿದ್ದಾರೆ.
ಆದಾಗ್ಯೂ ಸೆಕ್ಷನ್ 17 ಎ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವ ಅಧಿಕಾರಿಯ ನಡವಳಿಕೆಯನ್ನು ರಕ್ಷಿಸುತ್ತದೆ ಎಂದು ನ್ಯಾಯಪೀಠ ಗಮನಸೆಳೆದಿದೆ. ಸಿಬಿಐ ತನ್ನ ಪ್ರಕರಣದಲ್ಲಿ ಸಲ್ಲಿಸಿದ ಅಫಿದವಿತ್ನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ ಮತ್ತು ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ದೇಶು¾ಖ್ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ಜು. 5ರಂದು ಹೈಕೋರ್ಟ್ ಈ ಅರ್ಜಿಯನ್ನು ಆಲಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.