ಜಲಸಂಪನ್ಮೂಲ ಇಲಾಖೆಯ ಯೋಜನೆಗಳನ್ನು ಚುರುಕುಗೊಳಿಸಿ: ಸಿಎಂ

Team Udayavani, Jul 12, 2021, 12:33 PM IST

anivasi kannadiga

 ಮುಂಬಯಿ: ಪಶ್ಚಿಮದ ನದಿಗಳ ನೀರನ್ನು ಕಾಲುವೆಗಳ ಮೂಲಕ ಪೂರ್ವಕ್ಕೆ ತಿರುಗಿಸುವಂತಹ ಜಲಸಂಪನ್ಮೂಲ ಇಲಾಖೆ ಕೈಗೊಂಡ ಪ್ರಮುಖ ಯೋಜನೆಗಳನ್ನು ಅವಧಿಯಲ್ಲಿ ಪೂರ್ಣಗೊಳಿಸಲು ಕಾಮಗಾರಿಯನ್ನು ಚುರುಕುಗೊಳಿಸಲು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ವಿವಿಧ ಯೋಜನೆಗಳಿಗೆ ಸಂಬಂಧಿ ಸಿದಂತೆ ಸಿಎಂ ನಿವಾಸ ವರ್ಷಾದಲ್ಲಿ ಸಭೆ ಶನಿವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಮುಖ್ಯ ಮಂತ್ರಿ ಉದ್ಧವ್‌ ಠಾಕ್ರೆ ಅವರು, ಯೋಜನೆಯನ್ನು ಪೂರ್ಣಗೊಳಿಸಲು ಅಂತರ ರಾಜ್ಯ ಮಟ್ಟದಲ್ಲಿ ಯಾವುದೇ ಅಡೆತಡೆಗಳು ಎದುರಾದರೆ, ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಹೇಳಿದರು. ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸರಿಯಾದ ಸಮೀಕ್ಷೆ ನಡೆಸಬೇಕು. ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣ ಗೊಳಿಸಲು ಮತ್ತು ಅದರಿಂದ ಲಾಭ ಪಡೆಯಲು ಯೋಜನೆಗಳನ್ನು ವೇಗಗೊಳಿಸಲು ಇಲಾಖೆ ಗಮನ ಹರಿಸಬೇಕು ಎಂದರು.

ಇಲಾಖೆ ಕೈಗೊಳ್ಳುತ್ತಿರುವ ಯೋಜನೆಗಳ ಬಗ್ಗೆ ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ವಿವರವಾದ ಮಾಹಿತಿ ನೀಡಿ, ಮುಂದಿನ ಎರಡು ವರ್ಷಗಳಲ್ಲಿ ಇಂತಹ 104 ಯೋಜನೆಗಳನ್ನು ಪೂರ್ಣಗೊಳಿಸಲು ಇಲಾಖೆ ಯೋಜಿಸಿದೆ ಎಂದರು. ಕಾಲುವೆಗಳನ್ನು ಪೂರ್ವಕ್ಕೆ ತಿರುಗಿಸುವ ಯೋಜನೆಯ ಅನುಷ್ಠಾನ, ಹೆಚ್ಚುವರಿ ನೀರು ಲಭ್ಯವಿರುವ ಪ್ರದೇಶ ಮತ್ತು ನೀರಿನ ಕೊರತೆಯಿರುವ ಪ್ರದೇಶದ ಬಗ್ಗೆ ಮಾಹಿತಿ ನೀಡಿದರು.

ಪೂರ್ವ ವಿದರ್ಭ ವೈನ್‌ಗಂಗಾ ಕಣಿವೆ, ನಾರ್‌ಪಾರ್‌-ದಮನ್‌ಗಂಗಾ, ವೈತಾರ್ಣ, ಉಲ್ಲಾಸ್‌ ನದಿ ಕಾಲುವೆ, ಪಿಂಜಲ…, ಉಲ್ಲಾಸ್‌ ಕಾಲುವೆಯ ನೀರನ್ನು ಪೂರ್ವದ ಕಡೆಗೆ ತಿರುಗುವುದರ ಜತೆಗೆ ನೀರಿನ ಕೊರತೆಯ ಪ್ರದೇಶಕ್ಕೆ ಸರಬರಾಜು ಮಾಡುವ ಬಗ್ಗೆ ಈ ಯೋಜನೆಗಳನ್ನು ಮಿಷನ್‌ ಮೋಡ್‌ ಎಂದು ಕೈಗೊಳ್ಳಲಾಗುತ್ತಿದೆ ಎಂದು ಪಾಟೀಲ್‌ ಹೇಳಿದ್ದಾರೆ.

ಈ ವೇಳೆ ಲೋಕೋಪಯೋಗಿ ಸಚಿವ ಅಶೋಕ್‌ ಚವಾಣ್‌, ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ…, ನಗರಾಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ, ಮುಖ್ಯ ಕಾರ್ಯದರ್ಶಿ ಸೀತಾರಾಮ್‌ ಕುಂಟೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಮನೋಜ್‌ ಸೌನಿಕ್‌, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಶಿಶ್‌ ಕುಮಾರ್‌ ಸಿಂಗ್‌, ಪ್ರಧಾನ ಕಾರ್ಯದರ್ಶಿ ವಿಕಾಸ್‌ ಖರ್ಗೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.