ಸಂಘದಿಂದ ವಿದ್ಯಾಕ್ಷೇತ್ರದ ಯೋಜನೆಗೆ ತಯಾರಿ: ವಿಶ್ವನಾಥ್ ಪೂಜಾರಿ ಕಡ್ತಲ
Team Udayavani, Jul 16, 2021, 1:05 PM IST
ಪುಣೆ: ಪುಣೆ ಬಿಲ್ಲವ ಸಂಘವು ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಸಂಘವು ಇತ್ತೀಚೆಗಿನ ವರ್ಷಗಳಲ್ಲಿ ಹಲವಾರು ಉತ್ತಮ ಯೋಜನೆಗಳನ್ನು ಕೈಗೊಂಡಿದೆ. ಸಂಘಕ್ಕೆ ಅಗತ್ಯವಾಗಿ ಬೇಕಾಗಿದ್ದ ಜಾಗದ ಖರೀದಿ, ಜಾಗದಲ್ಲಿ ಸ್ಥಾಪಿಸಲಿರುವ ಗುರು ಮಂದಿರ, ಸಭಾಭವನಕ್ಕೆ ಬೇಕಾದ ಕಾರ್ಯಗಳು ನಡೆಯಲಿವೆ. ಅದರ ಜತೆಯಲ್ಲಿ ವಿದ್ಯಾಕ್ಷೇತ್ರದಲ್ಲೂ ಮುನ್ನಡೆಯಬೇಕು ಎಂಬ ಸಂಕಲ್ಪ ನಮ್ಮದಾಗಿದೆ ಎಂದು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕಡ್ತಲ ತಿಳಿಸಿದರು.
ಇತ್ತೀಚೆಗೆ ಪುಣೆ ಬಿಲ್ಲವ ಸಂಘದ ಕಚೇರಿಯಲ್ಲಿ ಜರಗಿದ ಬಿಲ್ಲವ ಸಮಾಜ ಸೇವಾ ಸಂಘದ ಆಡಳಿತ ಮಂಡಳಿಯ ಕಾರ್ಯಕಾರಿ ಸಮಿತಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಲದೇವರಾದ ಕೋಟಿ-ಚೆನ್ನಯರ ಆಶೀರ್ವಾದ ಪಡೆದು, ನಮ್ಮ ಆರಾಧ್ಯ ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ತÌ-ಆದರ್ಶ ತತ್ವಗಳ ಪ್ರೇರಣೆಯಂತೆ ಮತ್ತು ವಿದ್ಯೆಯಿಂದ ಸ್ವತಂತ್ರರಾಗಿ ಎಂಬ ಅವರ ತತ್ತÌಗಳನ್ನು ಸಾಕಾರಗೊಳಿಸಲು ಸಂಘವು ಪುಣೆಯಲ್ಲಿ ಶೈಕ್ಷಣಿಕ ರಂಗದಲ್ಲಿ ಅಭಿವೃದ್ಧಿ ಹೊಂದಲೂ ಯೋಜನೆ ರೂಪಿಸಿದೆ. ಇದಕ್ಕೆ ಬೇಕಾದ ಜಾಗವನ್ನೂ ಖರೀದಿಸುವ ಬಗ್ಗೆ ಕಾರ್ಯಕಾರಿ ಸಮಿತಿಯಲ್ಲಿ ನಿರ್ಣಯ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಪ್ಲೇ ಗ್ರೂಪ್‌ನಿಂದ ಹನ್ನೆರಡನೇ ತರಗತಿವರೆಗೆ ಶಾಲೆಯೊಂದನ್ನು ಪ್ರಾರಂಭಿಸುವ ಬಗ್ಗೆ ಕಾರ್ಯಪ್ರರ್ವತ್ತರಾಗಿದ್ದೇವೆ. ಈ ಬಗ್ಗೆ ಸಮಾಲೋಚಿಸಿ ಪೂರ್ಣ ಯೋಜನೆಯನ್ನು ಕೈಗೊಳ್ಳಲಿದ್ದೇವೆ ಎಂದರು
ಬ್ರಹ್ಮಶ್ರೀ ನಾರಾಯಣಗುರುಗಳ ಆಶೀರ್ವಾದ ದಿಂದ ಕಟ್ಟಡ ಸಮಿತಿಯ ಅಧ್ಯಕ್ಷ ಸಂದೇಶ್ ಪೂಜಾರಿ ಅವರ ಮುಂದಾಳತ್ವದಲ್ಲಿ ಸಂಘವು ಈಗಾಗಲೇ ಖರೀದಿಸಿದ ಜಾಗದಲ್ಲಿ ಗುರು ಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ತಯಾರಿಸಿ ಕೆಲಸ ಕಾರ್ಯಗಳನ್ನು ಕೈಗೊಳ್ಳಲಿದೆ. ಬಿಲ್ಲವ ಸಮಾಜದ ಉತ್ಸಾಹಿ ಯುವ ತಂಡದವರು, ಆಡಳಿತ ಸಮಿತಿಯವರು, ಮಹಿಳಾ ವಿಭಾಗದವರು, ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಈ ಮಹತ್ಕಾರ್ಯಗಳನ್ನು ನಾವೆಲ್ಲರೂ ಕೂಡಿ ಮಾಡಬಹುದು. ಬಿಲ್ಲವ ಸಮಾಜದ ಎಲ್ಲ ಮಕ್ಕಳು ಸಹಿತ ಎಲ್ಲ ಸಮಾಜಗಳ ಮಕ್ಕಳು ವಿದ್ಯಾವಂತರಾಗಬೇಕು ಎಂಬ ಉದ್ದೇಶದಿಂದ ಈ ವಿದ್ಯಾಸಂಸ್ಥೆಯ ನಿರ್ಮಾಣಕ್ಕೆ ಯೋಚಿಸಿದ್ದೇವೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ಸಂದೇಶ್ ಪೂಜಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಿತಿಯ ಪ್ರಮುಖರಾದ ಭಾಸ್ಕರ್ ಪೂಜಾರಿ, ರಾಜೇಶ್ ಪೂಜಾರಿ, ಸುದೀಪ್ ಪೂಜಾರಿ, ಪ್ರಕಾಶ್ ಪೂಜಾರಿ, ಧನಂಜಯ್ ಪೂಜಾರಿ, ಉಮಾ ಪೂಜಾರಿ, ಗೀತಾ ಪೂಜಾರಿ, ನಮಿತಾ ಪೂಜಾರಿ ಭಾಗವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನೀರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.