ಮುಂದಿನ ಪೀಳಿಗೆಗೆ ಸಂಸ್ಕೃತಿ-ಸಾಹಿತ್ಯದ ಅಭಿರುಚಿ ಆವಶ್ಯಕ: ಪೇಟೆಮನೆ ಪ್ರಕಾಶ್
Team Udayavani, Jul 26, 2021, 1:08 PM IST
ಮುಂಬಯಿ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಶ್ರೀಗಳ ಇಚ್ಛೆಯಂತೆ ಅವರ ಷಷ್ಠ Âಬ್ದ ಕಾರ್ಯಕ್ರಮವನ್ನು ಸರಳವಾಗಿ ಸಾಹಿತ್ಯ, ಸಂಸ್ಕೃತಿ, ಕಲೆ, ಭಜನೆಗಳ ಮೂಲಕ ವರ್ಷಪೂರ್ತಿ ಆಚರಿಸುವುದು ನಮ್ಮ ಉದ್ದೇಶ. ಆದ್ದರಿಂದ ಅವಿಭಜಿತ ದಕ್ಷಿಣ ಕನ್ನಡ ಗ್ರಾಮಗಳಲ್ಲಿ ಈಗಾಗಲೇ ಅರ್ಥಪೂರ್ಣವಾಗಿ ಸಮಿತಿಯು ಅರವತ್ತರ ಸಂಭ್ರಮವನ್ನು ಆಚರಿಸುತ್ತಿದೆ.
ಅಗತ್ಯ ಕಂಡ ಅರವತ್ತು ಕುಟುಂಬಗಳಿಗೆ ಸಹಾಯ ಹಸ್ತ ನೀಡಿದೆ. ಷಷ್ಠ Âಬ್ದ ಆಚರಣೆಯ ಮುಂಬಯಿ ಸಮಿತಿಯು ಅದೇ ನಿಟ್ಟಿನಲ್ಲಿ ಮುಂದುವರಿದು ಸಂಸ್ಕೃತಿ ಮೇಳೈಸುವ ಕಲೆ-ಸಾಹಿತ್ಯ ಮುಂದಿನ ಪೀಳಿಗೆಗೆ ದಾಟಿಸುವ ಕಾಯಕವನ್ನು ಶ್ರದ್ಧೆಯಿಂದ ಮಾಡುತ್ತಾ, 42ನೇ ಕಾರ್ಯಕ್ರಮದ ಅಂಗವಾಗಿ ಅಧ್ಯಾತ್ಮದ ವಿಷಯವಾಗಿರುವ ಕವಿಗೋಷ್ಠಿಯನ್ನು ಆಯೋಜಿಸುತ್ತಿದ್ದೇವೆ ಎಂದು ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಪೇಟೆಮನೆ ಪ್ರಕಾಶ್ ಶೆಟ್ಟಿ ಅಭಿಪ್ರಾಯಪಟ್ಟರು.
ನವಿಮುಂಬಯಿ ಕನ್ನಡ ಸಂಘದ ಸಹಯೋಗದಲ್ಲಿ ಹಾಗೂ ಕನ್ನಡ ಕಲಾ ಕೇಂದ್ರದ ಪ್ರಾಯೋಜಕತ್ವದಲ್ಲಿ ಇತ್ತೀಚೆಗೆ ನವಿಮುಂಬಯಿ ಕನ್ನಡ ಸಂಘದ ದಿ| ಎಂ. ಬಿ. ಕುಕ್ಯಾನ್ ಸಭಾಗೃಹದಲ್ಲಿ ಜರಗಿದ ಶ್ರೀಗಳ ಷಷ್ಠ Âಬ್ದ ಸಂಭ್ರಮಾಚರಣೆಯ “ಜ್ಞಾನವಾಹಿನಿ-2021’ರ 42ನೇ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಶುಭ ಹಾರೈಸಿದರು.
ಅತಿಥಿಯಾಗಿದ್ದ ಜಗದೀಶ್ ಶೆಟ್ಟಿ ಪನ್ವೆಲ್ ಮಾತನಾಡಿ, ಈಗಾಗಲೇ ಭಜನೆ, ತಾಳ ಮದ್ದಲೆ, ಕವಿಗೋಷ್ಠಿ, ಸಹಸ್ರನಾಮ, ಹರಿಕಥೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಾಮೀಜಿಯವರ ಷಷ್ಠ Âಬ್ದ ಕಾರ್ಯಕ್ರಮಕ್ಕೆ ಶೋಭೆ ತರಲಾಗಿದೆ ಎಂದರು.
ಇನ್ನೋರ್ವ ಅತಿಥಿ ಕನ್ನಡ ಕಲಾ ಕೇಂದ್ರದ ಅಧ್ಯಕ್ಷ ಮಧುಸೂದನ್ ಟಿ. ಆರ್. ಮಾತನಾಡಿ, ಇಂತಹ ಕಾರ್ಯಕ್ರಮಗಳು ಆಶಾದಾಯಕ ಎಂದು ಶುಭ ಹಾರೈಸಿದರು.
ಸಾನ್ವಿ ಜೆ. ರೈ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಎಂ.ವಿ.ಎಂ. ಕಾಲೇಜ್‌ನ ಪ್ರಾಂಶುಪಾಲ ಡಾ| ಗೋಪಾಲ್ ಕಲ್ಕೋಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಗೋಪಾಲ ತ್ರಾಸಿ, ಬಿ.ಎಚ್. ಕಟ್ಟಿ, ಮುಂಬಯಿ ಸಮಿತಿ ಅಧ್ಯಕ್ಷ ವಾಮಯ್ಯ ಶೆಟ್ಟಿ, ಸಂಚಾಲಕ ದಾಮೋದರ್ ಶೆಟ್ಟಿ, ನವಿಮುಂಬಯಿ ಕನ್ನಡ ಸಂಘದ ಗೌರವ ಕಾರ್ಯದರ್ಶಿ ಜಗದೀಶ್ ಡಿ. ರೈ, ಜಯ ಶೆಟ್ಟಿ, ಸ್ವರ್ಣಲತಾ ಡಿ. ಶೆಟ್ಟಿ ಉಪಸ್ಥಿತರಿದ್ದರು.
ಒಡಿಯೂರು ಸಮಿತಿಯ ಮಹಾರಾಷ್ಟ್ರ ಘಟಕದ ಮಾಜಿ ಅಧ್ಯಕ್ಷ, ನ್ಯಾಯವಾದಿ ಪ್ರಕಾಶ್ ಎಲ್. ಶೆಟ್ಟಿ, ವಿ. ಕೆ. ಸುವರ್ಣ, ಅನಿಲ್ ಕುಮಾರ್ ಹೆಗ್ಡೆ, ಸಾಹಿತ್ಯಾಸಕ್ತರು ಮತ್ತು ಸ್ವಾಮಿಗಳ ಭಕ್ತರು ಉಪಸ್ಥಿತರಿದ್ದರು. ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.