ಅರುಣೋದಯ ಕಲಾನಿಕೇತನ: ಸುವರ್ಣ ಭಾರತ ರತ್ನ ಪ್ರಶಸ್ತಿ ಪ್ರದಾನ

Team Udayavani, Nov 28, 2018, 5:26 PM IST

2711mum02.jpg

ಮುಂಬಯಿ: ದೇವರ ಅನುಗ್ರಹದಿಂದ ಈ ನೃತ್ಯ ಕಲೆಯನ್ನು ಯಾವುದೇ ರೀತಿಯ ಫಲಾಪೇಕ್ಷೆಯಿಲ್ಲದೆ, ಅರುಣೋದಯ ಕಲಾನಿಕೇತನವು ಕಳೆದ 60 ವರ್ಷಗಳಿಂದ  ಅನ್ಯರಿಗೆ ಕಲಿಸಿಕೊಡುತ್ತಿರುವ ಈ ಕಾರ್ಯ ಅಭಿನಂದನೀಯ. ಎಂ. ಎನ್‌. ಸುವರ್ಣ ಅವರ ಪರಿಶ್ರಮ ಇಂದು ಅರುಣೋದಯದ ಮೂಲಕ ಬೆಳಗುತ್ತಿದೆ. ಅವರು ಕಂಡ ಕನಸು ಇಂದು ನನಸಾಗುತ್ತಿದೆ. ಇದರ ರೂವಾರಿಗಳಾದ ಡಾ| ಮೀನಾಕ್ಷೀ ರಾಜು ಶ್ರೀಯಾನ್‌ ಅವರ ಸೇವೆ ಕಲಾಮಾತೆಯ ನಿಜವಾದ ಆರಾಧನೆಯಾಗಿದೆ ಎಂದು ಬಳ್ಳಾರಿ ಬಂಟರ ಸಂಘದ ಅಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ ನುಡಿದರು.

ನ. 25ರಂದು ಚೆಂಬೂರಿನ ಚೆಂಬೂರು ಫೈನ್‌ ಆರ್ಟ್ಸ್ ಸೊಸೈಟಿಯ ಶಿವಸ್ವಾಮಿ ಅಡಿಟೋರಿಯಂನಲ್ಲಿ ನಡೆದ ನಗರದ ಕಲಾ ಸಂಸ್ಥೆ ಅರುಣೋದಯ ಕಲಾನಿಕೇತನ ಮುಂಬಯಿ ಇದರ ವಜ್ರ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಅನೇಕ ಪ್ರತಿಭಾವಂತರನ್ನು ಸಮಾಜಕ್ಕೆ ನೀಡಿದ ಕೀರ್ತಿ ಅರುಣೋದಯ ಕಲಾನಿಕೇತನ ಸಂಸ್ಥೆಗೆ ಸಲ್ಲುತ್ತದೆ. ಮಾತ್ರವಲ್ಲ ಕಲಾಕ್ಷೇತ್ರದ ದಿಗ್ಗಜರನ್ನು ಕರೆಸಿ, ಅವರನ್ನು ಗೌರವಿಸುವಂತಹ ಮಹಾನ್‌ ಕಾರ್ಯ ಅಸಾಧಾರಣೀಯವಾಗಿದೆ. ಕಲೆಯನ್ನು  ಕೇವಲ ಹೊಟ್ಟೆ ಪಾಡಿಗಾಗಿ ಬಳಸದೆ, ಅದನ್ನು ಶ್ರೀಮಂತಗೊಳಿಸಿದ ಶ್ರೇಯಸ್ಸು ಸಂಸ್ಥೆಯದ್ದಾಗಿದೆ ಎಂದರು.

ಕಾರ್ಯ ಅಭಿನಂದನೀಯ
ಸಮಾರಂಭದ ಅಧ್ಯಕ್ಷತೆ ವಹಿಸಿ  ಮಾತನಾಡಿದ ರಾಯನ್‌ ಇಂಟರ್‌ನ್ಯಾಷನಲ್‌ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಮೇಡಂ ಗ್ರೇಸ್‌ ಪಿಂಟೋ ಅವರು ಮಾತನಾಡಿ, ದೇವರು ಕೊಟ್ಟ ಕಲೆಯನ್ನು ಕಲಿತು ತಮ್ಮ ಪ್ರತಿಭೆಯನ್ನು ತೋರಿಸಲು ಮಕ್ಕಳಿಗೆ ಅವಕಾಶ ಮಾಡಿಕೊಟ್ಟ ಸಂಸ್ಥೆಯ ಕಾರ್ಯ ಅಭಿನಂದನೀಯ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನನಗೆ ಹೆಮ್ಮೆಯಾಗುತ್ತಿದೆ. ಸಂಗೀತ ಕಲಾಕ್ಷೇತ್ರದ ಗಣ್ಯರನ್ನು ಸಮ್ಮಾನಿಸಲು ಸಂತೋಷವಾಗುತ್ತಿದೆ. ಸಂಸ್ಥೆಯಿಂದ ಅರ್ಥಪೂರ್ಣ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ. ನಾಡಿನ ಸಂಸ್ಕೃತಿ, ಸಂಸ್ಕಾರಗಳು ಇಂತಹ ಕಲಾ ಸಂಸ್ಥೆಗಳಿಂದ ಮಾತ್ರ ಉಳಿಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಅರುಣೋದಯ ಕಲಾನಿಕೇತನ ಸಂಸ್ಥೆಯ ಕಾರ್ಯ ಅಭಿನಂದನೀಯವಾಗಿದೆ  ಎಂದರು.

ಭಂಡಾರಿ ಆ್ಯಂಡ್‌ ಭಂಡಾರಿ ಅಸೋಸಿಯೇಟ್ಸ್‌ನ ನ್ಯಾಯವಾದಿ ಸುಂದರ ಭಂಡಾರಿ ಅವರು ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಸಂಸ್ಥೆಯ ವಜ್ರಮಹೋತ್ಸವಕ್ಕೆ ಶುಭಹಾರೈಸಿದರು.

ಅತಿಥಿ ಪಲ್ಲವಿ ಪಬ್ಲಿಕೇಶನ್‌ ಬಂಗಾರಪೇಟೆ ಇದರ ಪಲ್ಲವಿ ಮಣಿ ಇವರು ಮಾತನಾಡಿ, ಗುರು ಡಾ| ಮೀನಾಕ್ಷೀ ರಾಜು ಶ್ರೀಯಾನ್‌ ಮತ್ತು ರಾಜು ಶ್ರೀಯಾನ್‌ ಅವರ ನಿರಂತರ ಪರಿಶ್ರಮದಿಂದ ಈ ಸಂಸ್ಥೆಯು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಮಕ್ಕಳಿಗೆ ವೇದಿಕೆಯನ್ನು ಒದಗಿಸಿಕೊಡುವುದರ ಮೂಲಕ ಪ್ರತಿಭಾನ್ವೇಷಣೆಗೆ ಮಹತ್ವವನ್ನು ನೀಡುತ್ತಿದೆ ಎಂದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಮಾಜ ಸೇವಕ ರಾಮಚಂದ್ರ ಬೈಕಂಪಾಡಿ, ಕೈಗಾರಿಕೋದ್ಯಮಿ, ಕುಂಭಾಶಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಪ್ರಮುಖ ದೇವರಾಯ ಮಂಜುನಾಥ ಶೇರಿಗಾರ್‌, ಸಮಾಜ ಸೇವಕಿ ಶಶಿಕಲಾ ವಿ. ಕವಾಲಿ, ಸಿಎ ಕಮಲೇಶ್‌ ದಾವೆ, ಸಮಾಜ ಸೇವಕಿ ಎನ್‌. ಕೆ. ಪ್ರತಾಪನ್‌ ಅವರನ್ನು ವಿಶೇಷ ಸಮ್ಮಾವನ್ನಿತ್ತು ಗೌರವಿಸಲಾಯಿತು.

ಅರುಣೋದಯ ಕಲಾನಿಕೇತನದ ಸುಶೀಲಾ ಎಂ. ಸುವರ್ಣ, ನೃತ್ಯಗುರುಗಳಾದ ಆಶಾ ನಂಬಿಯಾರ್‌, ಗುರು ಟೀನಾ ತಾಂಬೆ, ರಮ್ಯಾ ವರ್ಮ ಜಗದೀಶ್‌, ರಮೇಶ್‌ ಲಕ್ಷ್ಮಣ್‌ ಕೊಹ್ಲಿ, ಲಸ್ತಾನಾ ದೇವಿ ಅವರನ್ನು ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಟ್ರಸ್ಟಿಗಳಾದ ಸಂಜೀವ ಕೆ. ಸಾಲ್ಯಾನ್‌, ಗೋಪಾಲ್‌ ಪುತ್ರನ್‌, ಸುರೇಶ್‌ ಕಾಂಚನ್‌ ಉಪಸ್ಥಿತರಿದ್ದರು. 

ಡಾ| ಮೀನಾಕ್ಷೀ ರಾಜು ಶ್ರೀಯಾನ್‌ ಅವರು ಸಂಭ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಪತ್ರಕರ್ತ ದಯಾ ಸಾಗರ್‌ ಚೌಟ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.  

ಸಮಾರಂಭದಲ್ಲಿ ಸಂಸ್ಥೆಯ ಗಣ್ಯರ ಸಮ್ಮುಖದಲ್ಲಿ ಸುವರ್ಣ ಭಾರತ ರತ್ನ ಪ್ರಶಸ್ತಿಯನ್ನಿತ್ತು ಅಭಿನಂದಿಸಲಾಯಿತು. ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತೆ, ಪ್ರಸಿದ್ಧ ಕೂಚುಪುಡಿ ನೃತ್ಯ ಕಲಾವಿದೆ ಗುರು ವೈಜಯಂತಿ ಕಾಶಿ ಅವರಿಗೆ ‘ಸುವರ್ಣ ಭರತರತ್ನ -ಭಾವ’ ಪ್ರಶಸ್ತಿಯನ್ನು, ಪ್ರಸಿದ್ಧ ಸಂಗೀತ ಕಲಾವಿದ ಸುರೇಶ್‌ ವಾಡ್ಕರ್‌ ಅವರಿಗೆ ಸಂಸ್ಥೆಯ ‘ಸುವರ್ಣ ಭರತರತ್ನ-ರಾಗ’ ಪ್ರಶಸ್ತಿಯನ್ನು ಹಾಗೂ ಪ್ರಸಿದ್ಧ ಡ್ರಮ್ಮಿಸ್ಟ್‌ ಶಿವಮಣಿ ಅವರಿಗೆ “ಸುವರ್ಣ ಭರತರತ್ನ-ತಾಳ’  ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು.  ಈ ಮೂರು ಪ್ರಶಸ್ತಿಗಳು ತಲಾ ಒಂದು ಲಕ್ಷ ರೂ. ನಗದು, ಶಾಲು, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರಗಳನ್ನು  ಒಳಗೊಂಡಿತ್ತು.

ಸಂಸ್ಥೆಯು ತುಳು-ಕನ್ನಡಿಗರ, ಕಲಾಭಿಮಾನಿಗಳ ಸಹಕಾರದಿಂದ ವಜ್ರಮಹೋತ್ಸವವನ್ನು ಇಷ್ಟೊಂದು ಸಂಭ್ರಮದಿಂದ ಆಚರಿಸಲು ಸಾಧ್ಯವಾಗುತ್ತಿದೆ. ಸಂಸ್ಥೆಯ ಎಲ್ಲ ಶಾಖೆಗಳ ವಿದ್ಯಾರ್ಥಿಗಳು, ಪಾಲಕ-ಪೋಷಕರು ಇಂದಿನ ಸಮಾರಂಭದ ಯಶಸ್ಸಿನ ರೂವಾರಿಗಳು ಎಂದರೆ ತಪ್ಪಾಗಲಾರದು. ನನ್ನ ಎಲ್ಲ  ಸಾಧನೆಗಳ ಹಿಂದೆ ಬೆನ್ನೆಲುಬಾಗಿ ನಿಂತಿರುವ ಪತಿ ರಾಜು ಶ್ರೀಯಾನ್‌ ಅವರು ಕಳೆದೆರಡು ತಿಂಗಳಿನಿಂದ ಸಂಭ್ರಮದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ್ದರು. ಸಹಕರಿಸಿದ ದಾನಿಗಳಿಗೆ, ಕಲಾಭಿಮಾನಿಗಳೆಲ್ಲರಿಗೂ  ಹೃದಯ ತುಂಬಿದ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ನೃತ್ಯಗುರುಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನನಗೆ ಈ ಸೇವೆಯಲ್ಲಿ ಆತ್ಮತೃಪ್ತಿಯಿದೆ. ಹಲವಾರು ಪ್ರತಿಭಾವಂತ ಕಲಾವಿದರನ್ನು ಸೃಷ್ಟಿಸಿದ ಹೆಗ್ಗಳಿಕೆ ಸಂಸ್ಥೆಗಿದೆ. ತಂದೆಯವರು ಸ್ಥಾಪಿಸಿದ ಈ ಸಂಸ್ಥೆಯನ್ನು ಅವರು ಹಾಕಿಕೊಟ್ಟ ಮಾರ್ಗದರ್ಶನದ ಮುಖಾಂತರ ಮುಂದುವರಿಸಿಕೊಂಡು ಹೋಗುತ್ತಿದ್ದೇನೆ. ಭವಿಷ್ಯದಲ್ಲೂ ಸಂಸ್ಥೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಸದಾಯಿರಲಿ.
ಡಾ| ಮೀನಾಕ್ಷೀ ರಾಜು ಶ್ರೀಯಾನ್‌ , ನಿರ್ದೇಶಕಿ,  ಅರುಣೋದಯ ಕಲಾನಿಕೇತನ ಸಂಸ್ಥೆ     

ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.