ರಷ್ಯಾದ ಟಶ್ಖೆಂಟ್‌ನಲ್ಲಿ “ಏಯಾ ಪೆಸಿಫಿಕ್‌ ಅಚೀವರ್ ಪ್ರಶಸ್ತಿ’ ಪ್ರದಾನ


Team Udayavani, Jul 11, 2018, 3:15 PM IST

0907mum09.jpg

ಮುಂಬಯಿ:  ಗ್ಲೋಬಲ್‌ ಫೌಂಡೇಶನ್‌ ಅಚೀವರ್‌ (ಜಿಎಫ್‌ಎ) ಸಂಸ್ಥೆಯ ವತಿಯಿಂದ ರಷ್ಯಾ ಟಶ್ಖೆಂಟ್‌ನ ಕುಶ್‌ಬೆಗಿ ಸ್ಟ್ರೀಟ್‌ನ ಅಮರ್‌ ಸಭಾಂಗಣದಲ್ಲಿ ಜಾಗತಿಕ ಅರ್ಥಶಾಸ್ತ್ರದ ಬೆಳವಣಿಗೆ ಮತ್ತು ಸಾಮಾಜಿಕ ಅಭಿವೃದ್ಧಿ  ವಿಚಾರಿತ ಮಹಾ ಸಮ್ಮೇಳನವು ನಡೆಯಿತು.

ಜು. 9 ರಂದು ಕೊನೆಯ ದಿನ ಅಂತಾರಾಷ್ಟ್ರೀಯ ಸಾಂಸ್ಕೃತಿಕ  ಸಮಿತಿ ಮತ್ತು ಜಿಎಫ್‌ಎ ಸಂಸ್ಥೆಗಳ ಆಶ್ರಯ ದಲ್ಲಿ  ನಡೆದ  ಹದಿನೇಳನೆ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳ ನದಲ್ಲಿ ಆರ್ಥಿಕ ರಾಜಧಾನಿ ಮುಂಬಯಿ ಮಹಾನಗರದ ಪ್ರಸಿದ್ಧ ಸಮಾಜ ಸೇವಕರಾದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಾಜಿ ಅಧ್ಯಕ್ಷ, ಕನ್ನಡ ಸಂಘ ಸಾಂತಾಕ್ರೂಜ್‌ನ ಅಧ್ಯಕ್ಷ ಎಲ್‌. ವಿ. ಅಮೀನ್‌, ತೀಯಾ ಸಮಾಜ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಆರ್‌. ಬೆಳ್ಚಡ, ವಾಸ್ತುತಜ್ಞ ಪಂಡಿತ್‌ ನವೀನ್‌ಚಂದ್ರ ಆರ್‌. ಸನಿಲ್‌, ಎನ್‌. ಪಿ. ಸುವರ್ಣ, ಪಲ್ಲವಿ ಮಣಿ ಮತ್ತಿತರರ ಸಾಧನೀಯ ಸೇವೆಯನ್ನು  ಪರಿಗಣಿಸಿ “ಏಯಾ ಪೆಸಿಫಿಕ್‌ ಅಚೀವರ್ ಅವಾರ್ಡ್‌’ನ್ನು ಸ್ವರ್ಣ ಪದಕದೊಂದಿಗೆ ಪ್ರದಾನಿಸಿ ಗೌರವಿಸಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಝೆºಕೀಸ್ತಾನ್‌ ಟಶೆVಂಟ್‌ನ ಭಾರತೀಯ ರಾಯಭಾರಿ ಸಿಫÅ ಘೋಶ್‌, ಗೌರವ ಅತಿಥಿಗಳಾಗಿ ವಿಲ್ಟನ್ಸ್‌ ಸ್ಕೂಲ್ಸ್‌ ಡೆಹ್ರಾಡೋನ್‌ ಮುಖ್ಯಸ್ಥ ಡೇವಿಡ್‌ ಜೋಸೆಫ್‌ ವಿಲ್ಟನ್‌, ಐಎನ್‌ಎಚ್‌ಎ ವಿಶ್ವವಿದ್ಯಾಲಯ ಉಝೆºಕೀಸ್ತಾನ್‌ ಇದರ ರೆಕ್ಟರ್‌ ವೂಸ್ಕಿ ಚೊ, ಟಶೆVಂಟ್‌ನ ಉದ್ಯಮಿ ಕು| ಆಡೊಲೆಟ್‌ ನಸಿರೊನಾ, ಜಿಎಎಫ್‌ ಮುಖ್ಯಸ್ಥ ಡಾ| ವಿ. ಬಿ. ಸೋನಿ, ಐಸಿಎಫ್‌ ಭಾರತೀಯ ಸಮಿತಿಯ ಕಾರ್ಯಾಧ್ಯಕ್ಷ ಇಂ| ಮಂಜುನಾಥ್‌ ಸಾಗರ್‌, ಗೌರವ ಕಾರ್ಯಾಧ್ಯಕ್ಷ ಪಲ್ಲೇಮಣಿ ಎಂ. ಸುಬ್ರಹ್ಮಣಿ ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು.
ನಗರದ   ಪ್ರಭಾ ಎನ್‌. ಸುವರ್ಣ, ಸುಧಾ ಎಲ್‌. ವಿ. ಅಮೀನ್‌, ದಿವಿಜಾ ಚಂದ್ರಶೇಖರ್‌ ಸೇರಿದಂತೆ  ವಿವಿಧ ರಾಷ್ಟ್ರಗಳ ಗಣ್ಯರು ಉಪಸ್ಥಿತರಿದ್ದರು. ಜಿಎಎಫ್‌ನ ಸಂಜೀವ ಸೂರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಎಫ್‌ಎ ಕಾರ್ಯದರ್ಶಿ ಎ. ಕೆ. ಶರ್ಮ ವಂದಿಸಿದರು. ಉತ್ಸವದಲ್ಲಿ ಭಾರತೀಯ ಹಾಗೂ ಇತರ ರಾಷ್ಟ್ರಗಳ ತಂಡಗಳು ಭಾರತೀಯ ಸಂಸ್ಕೃತಿ ಸಾರುವ ವೈವಿಧ್ಯಮಯ ನೃತ್ಯಾವಳಿ, ನೃತ್ಯರೂಪಕ, ಜಾನಪದ ಮತ್ತು ಸಾಹಿತ್ಯಕ ಕಾರ್ಯಕ್ರಮಗಳ “ಸಾಂಸ್ಕೃತಿಕ ಸೌರಭ’ ಪ್ರಸುತಪಡಿಸಿದರು. ಐಸಿಎಫ್‌ ಪ್ರಧಾನ ಕಾರ್ಯದರ್ಶಿ ಗೋ. ನಾ. ಸ್ವಾಮಿ  ಬೆಂಗಳೂರು  ಸಾಂಸ್ಕೃತಿಕ  ಕಾರ್ಯಕ್ರಮ ನಿರ್ವಹಿಸಿದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.