ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್‌ ಪುಣೆ ಯೋಗ ಶಿಬಿರ, ಸಮ್ಮಾನ

Team Udayavani, Jun 24, 2018, 5:10 PM IST

2206mum02.jpg

ಪುಣೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪುಣೆಯ  ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ  ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ  ಆಯೋಜಕತ್ವದಲ್ಲಿ   ಜೂ.  21 ರಂದು ಬೆಳಗ್ಗೆ 8 ರಿಂದ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ 2017-2018 ನೇ ಶೈಕ್ಷಣಿಕ ಎಚ್‌ಎಸ್‌ಸಿ ಮತ್ತು ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಅಧಿಕ ಅಂಕಗಳನ್ನು ಪಡೆದ  ಪುಣೆಯ ತುಳು ಕನ್ನಡಿಗ ವಿದ್ಯಾರ್ಥಿಗಳನ್ನು ದೇವಸ್ಥಾನದ  ವತಿಯಿಂದ ಸಮ್ಮಾನಿಸಲಾಯಿತು.    ಕಾತ್ರಜ್‌  ಶ್ರೀ ಅಯ್ಯಪ್ಪ ಸ್ವಾಮಿ  ಸೇವಾ ಸಂಘದ   ವಿಶ್ವಸ್ತ ಮಂಡಳಿಯ   ಅಧ್ಯಕ್ಷ  ಸುಭಾಷ್‌ ಶೆಟ್ಟಿ, ಸ್ಥಾಪಕಾಧ್ಯಕ್ಷ, ಕಾರ್ಯದರ್ಶಿ ರಘುರಾಮ್‌ ರೈ, ಕೋಶಾಧಿಕಾರಿ ಜಗದೀಶ್‌ ಶೆಟ್ಟಿ, ಉಪಾಧ್ಯಕ್ಷ  ಸುಧಾಕರ್‌ ಶೆಟ್ಟಿ, ಮಾಜಿ ಅಧ್ಯಕ್ಷ  ಶೇಖರ್‌  ಟಿ. ಪೂಜಾರಿ,  ಜೊತೆ ಕಾರ್ಯದರ್ಶಿ ಸಚ್ಚಿದಾನಂದ ಶೆಟ್ಟಿ, ಜೊತೆ ಕೋಶಾಧಿಕಾರಿ ಬಾಲಕೃಷ್ಣ ಗೌಡ, ವಿಶ್ವಸ್ತ ಭಾಸ್ಕರ್‌ ಶೆಟ್ಟಿ,  ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ  ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್‌ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು    ಅರ್ಹ ವಿದ್ಯಾರ್ಥಿಗಳಿಗೆ ಶಾಲು, ಪುಷ್ಪಗುತ್ಛ, ಸ್ಮರಣಿಕೆ ಹಾಗೂ ಆಶೀರ್ವಾದ ಹೊಟೇಲ್‌ನ ಮಾಲಕ ಮಾಧವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ   ಪ್ರೋತ್ಸಾಹ ಧನವನ್ನು ನೀಡಿ ಸಮ್ಮಾನಿಸಿ ಗೌರವಿಸಿದರು.

ಪುಣೆಯ ವಿವಿಧ  ಹೈಸ್ಕೂಲ್‌ ಮತ್ತು ಕಾಲೇಜು ಗಳ  ವಿದ್ಯಾರ್ಥಿಗಳಾದ ನಿಧಿ ಜೆ. ಶೆಟ್ಟಿ, ಪ್ರಥ್ವಿ ಬಿ. ಕೊಟ್ಟಾರಿ, ವಿಂಧ್ಯಾ ಪಿ. ಗೌಡ ,     ಸಂವೇದ್‌ ಎಸ್‌. ಶೆಟ್ಟಿ, ತ್ರಿಜûಾ ಗೌಡ, ಹರ್ಷ್‌ ಎಸ್‌. ಕೋಟ್ಯಾನ್‌, ಕೌಶಿಕ್‌ ಎಸ್‌. ಪೂಜಾರಿ, ಸ್ನೇಹಾ ಎಸ್‌. ಸಫಲಿಗ, ಅಸ್ಮಿತಾ ಎಸ್‌. ಸಾಲ್ಯಾನ್‌, ದೀಪಕ್‌ ಆರ್‌. ಮೂಲ್ಯ, ಸೌಜನ್ಯಾ ಜೆ. ಪೂಜಾರಿ, ಪಾರ್ಥ್ ಎಸ್‌. ಶೆಟ್ಟಿ, ಹೃದಯ್‌ ಅರ್‌. ಶೆಟ್ಟಿ, ಶ್ವೇತಾ ಮೂಲ್ಯ, ಅಕಾಂಕ್ಷ ದೇವಾಡಿಗ, ವೈಷ್ಣವಿ ಎಸ್‌. ಹೆಗ್ಡೆ, ದೇವಿಕಾ ಡಿ. ರಾವ್‌ ಮೊದಲಾದವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಸಮ್ಮಾನಿಸಲಾಯಿತು.

ಪ್ರಾರಂಭದಲ್ಲಿ  ಯೋಗ ದಿನ ಆಚರಣೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ  ಸೇವಾ ಸಂಘ ಮಹಿಳಾ ವಿಭಾಗದ ಸದಸ್ಯೆ, ಯೋಗ ಶಿಕ್ಷಕಿ ಪ್ರಮೀಳಾ ಜಗದೀಶ್‌ ಶೆಟ್ಟಿ ಇವರ ಮುಂದಾಳತ್ವ ದಲ್ಲಿ  ಹಾಗೂ ಜಗದೀಶ್‌ ಶೆಟ್ಟಿಯವರ ಸಹಕಾರ ದೊಂದಿಗೆ  ಯೋಗ ಶಿಬಿರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ  ಸಮಿತಿಯ ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯ ಭಕ್ತರು, ಯೋಗಾಸಕ್ತರು, ವಿದ್ಯಾರ್ಥಿಗಳು, ಮಕ್ಕಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಅಧ್ಯಕ್ಷ ಸುಭಾಷ್‌ ಶೆಟ್ಟಿ ಇವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಈ ಸುಸಂದರ್ಭದಲ್ಲಿ ಅಯ್ಯಪ್ಪ ದೇವಸ್ಥಾನದ  ಸೇವಾ ಸಂಘದ    ವತಿಯಿಂದ ಪ್ರತಿ ವರ್ಷವೂ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಸಮ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುತ್ತಿದೆ. ಉತ್ತಮ ಅಂಕ ಪಡೆದ  ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿದರು. ಅಲ್ಲದೆ  ಯೋಗ ಶಿಬಿರದ ಉಸ್ತುವಾರಿ ವಹಿಸಿಕೊಂಡು ಉತ್ತಮ ಯೋಗಾಭ್ಯಾಸವನ್ನು   ನಡೆಸಿಕೊಟ್ಟ  ಪ್ರಮೀಳಾ ಜಗದೀಶ್‌ ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಕೊನೆಯಲ್ಲಿ ಅಂಬಿಕಾ ವಿಶ್ವನಾಥ್‌ ಶೆಟ್ಟಿ ಮತ್ತು ಶೇಖರ್‌ ಟಿ. ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸ ಲಾಗಿತ್ತು.  ವಿಶ್ವಸ್ತ  ಮಂಡಳಿಯ ಕಾರ್ಯದರ್ಶಿ ರಘುರಾಮ್‌ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

ಚಿತ್ರ-ವರದಿ : ಹರೀಶ್‌ ಪಡುಬಿದ್ರೆ ಪುಣೆ

ಟಾಪ್ ನ್ಯೂಸ್

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.