ಹಿಂದುಳಿದ ಸಮಾಜವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು: ಕೆ. ಡಿ. ಶೆಟ್ಟಿ

Team Udayavani, Dec 23, 2020, 7:55 PM IST

ಹಿಂದುಳಿದ ಸಮಾಜವನ್ನು  ಆರ್ಥಿಕವಾಗಿ ಸದೃಢಗೊಳಿಸಬೇಕು: ಕೆ. ಡಿ. ಶೆಟ್ಟಿ

ಮುಂಬಯಿ, ಡಿ. 22: ಆರ್ಥಿಕವಾಗಿ ಹಿಂದುಳಿದ ಸಮಾಜದವರನ್ನು ಗುರುತಿಸಿ ಅವರನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು. ಸಮಾಜದಲ್ಲಿಂದು ಆರ್ಥಿಕವಾಗಿ ಹಿಂದುಳಿದವರು ಸಾಕಷ್ಟು ಮಂದಿ ಇದ್ದಾರೆ. ಅಂತವರನ್ನು ಗುರುತಿಸಿ ಅವರಿಗೆ ಸಹಕಾರ ನೀಡುವತ್ತ ಗಮನ ಹರಿಸಬೇಕು. ವಿಶೇಷ ಚೇತನರಿಗೆ ನಮ್ಮ ಸಂಘ-ಸಂಸ್ಥೆಗಳು ಸದಾ ಬೆನ್ನೆಲುಬಾಗಿ ಇರಬೇಕು ಎಂದು ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಪ್ರೈ. ಇದರ ಕಾರ್ಯಾಧ್ಯಕ್ಷ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಡಿ. ಶೆಟ್ಟಿ ಚೆಲ್ಲಡ್ಕ ಅವರು ತಿಳಿಸಿದರು.

ಡಿ. 20ರಂದು ಸುರತ್ಕಲ್‌ ಬಂಟರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಸಮಾವೇಶ, ಅಭಿನಂದನೆ, ಸಹಾಯಹಸ್ತ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನಗೆ ಸಿಕ್ಕಿದ ಪುರಸ್ಕಾರವು ಸಮಸ್ತ ಹೊರನಾಡ ಕನ್ನಡಿಗರಿಗೆ ದೊರೆತ ಗೌರವವಾಗಿದೆ. ನಿಮ್ಮೆಲ್ಲರ ಪ್ರೀತಿ, ಗೌರವಗಳಿಗೆ ಋಣಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಮೂಲ್ಕಿ-ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್‌ ಎ. ಕೋಟ್ಯಾನ್‌ ಅವರು ಕಾರ್ಯಕ್ರಮವನ್ನು ಉದಾ^ಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್‌ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪುರಸ್ಕೃತ ಕುಸುಮೋದರ ದೇರಣ್ಣ ಶೆಟ್ಟಿ ಚೆಲ್ಲಡ್ಕ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾರತ್ನ ಪುರಸ್ಕೃತ ಖಂಡಿಗೆ ಗೋಪಾಲಕೃಷ್ಣ ಸರ್ವೋತ್ತಮ ಪ್ರಭು ಮಾಧವನಗರ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ ಕೆ ಸುರತ್ಕಲ್‌, ಯೋಗೀಶ್‌ ಕಾಂಚನ್‌ ಬೈಕಂಪಾಡಿ ಹಾಗೂ ಲಾಕ್‌ಡೌನ್‌ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿದ ಡಾ| ಸುರೇಶ್‌ ಸುರತ್ಕಲ್‌, ಕಾನ ಮಿಸ್ಕಿತ್‌ ಆಸ್ಪತ್ರೆಯ ನಿರ್ದೇಶಕ ಡಾ| ಜಿ. ಕ್ಲಿಪರ್ಡ್‌ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ| ಪಿ. ವಿ ಶೆಟ್ಟಿ ಮುಂಬಯಿ ಇವರಿಂದ ವರ್ಷಂಪ್ರತಿ ನೀಡಲ್ಪಡುವ ವಿದ್ಯಾರ್ಥಿವೇತನವನ್ನು ಹಾಗೂ ವಿಶೇಷಚೇತನರಿಗೆ ಸಹಾಯಹಸ್ತ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ| ವೈ. ಭರತ್‌ ಶೆಟ್ಟಿ, ಮಂಗಳೂರು ಸಣ್ಣ ನೀರಾವರಿ ವಿಭಾಗದ ಕಾರ್ಯಪಾಲಕ ಅಭಿಯಂತ ಗೋಕುಲ್‌ದಾಸ್‌, ಮುಂಬಯಿ ಬಂಟರ ಸಂಘ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಕರ್ನೂರ್‌ ಮೋಹನ್‌ ರೈ, ಮಂಗಳೂರು ಸಂಸ್ಕಾರ ಭಾರತಿ ಅಧ್ಯಕ್ಷ ಪುರುಷೋತ್ತಮ ಕೆ. ಭಂಡಾರಿ, ಬಂಟರ ಮಹಿಳಾ ಸಂಘದ ಅಧ್ಯಕ್ಷೆ ಬೇಬಿ ಶೆಟ್ಟಿ, ಸಂಘದ ಉಪಾಧ್ಯಕ್ಷ ನವೀನ್‌ ಶೆಟ್ಟಿ ಪಡ್ರೆ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನ ಕಾರ್ಯದರ್ಶಿ ಪುಷ್ಪರಾಜ್‌ ಶೆಟ್ಟಿ ಕುಡುಂಬೂರು, ಜತೆ ಕಾರ್ಯ ದರ್ಶಿ ಪ್ರವೀಣ್‌ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್‌ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸುಧಾಕರ್‌ ಎಸ್‌. ಪೂಂಜ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಪ್ರಸ್ತಾವಿಸಿದರು. ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.