ಕೋವಿಡ್ ಹಾಟ್‌ಸ್ಪಾಟ್ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್
Team Udayavani, Sep 19, 2020, 8:52 PM IST
ಮುಂಬಯಿ, ಸೆ. 18: ಉಪನಗರಗಳಲ್ಲಿನ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮುಂಬಯಿಯಲ್ಲಿ ಇತ್ತೀಚಿಗೆ ಕೋವಿಡ್ ಹಾಟ್‌ಸ್ಪಾಟ್ ಆಗಿ ಹೊರಹೊಮ್ಮಿದ್ದು, ಇಲ್ಲಿನ ಕೆಲವು ಕಚೇರಿಗಳ ಸಿಬಂದಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಬಿಎಂಸಿ ಅಧಿಕಾರಿಗಳ ಪ್ರಕಾರ, ಬಿಕೆಸಿಯಲ್ಲಿ ಕೆಲಸ ಮಾಡುವ 60 ಜನರು ಕಳೆದ ಒಂದು ತಿಂಗಳಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪಾಸಿಟಿವ್ ಪರೀಕ್ಷೆಗೊಳಗಾದವರಲ್ಲಿ ಹೆಚ್ಚಿನವರು ದಕ್ಷಿಣ ಮುಂಬಯಿಯ ಡಿ ವಾರ್ಡ್‌ನಲ್ಲಿ ವಾಸಿಸುತ್ತಿದ್ದಾರೆ. ಇದರಲ್ಲಿ ಮಲಬಾರ್ ಹಿಲ್, ನೇಪಿಯನ್ ಸೀ ರೋಡ್ ಮತ್ತು ತಾರ್ದೇವ್ ಇನ್ನಿತರ ಪ್ರದೇಶಗಳು ಸೇರಿದ್ದು, ಈ ಸ್ಥಳಗಳಲ್ಲಿ ಕಳೆದ ಮೂರು ದಿನಗಳಿಂದ ದಿನಕ್ಕೆ 100ಕ್ಕೂ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಡಿ ವಾರ್ಡ್ ನಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕಾರಣದಿಂದಾಗಿ, ಕಳೆದ ವಾರ ಬಿಎಂಸಿ ನೇಪಿಯನ್ ಸೀ ರಸ್ತೆಯಲ್ಲಿರುವ ಉನ್ನತ ಮಟ್ಟದ ವಸತಿ ಕಟ್ಟಡದ ಎರಡು ವಿಂಗ್ ಗಳನ್ನು ಮೊಹರು ಮಾಡಿತು. ಇದುವರೆಗೂ ಬಿಎಂಸಿ ವಸತಿ ಪ್ರದೇಶಗಳಲ್ಲಿ ಜನರನ್ನು ಮಾತ್ರ ಪರೀಕ್ಷಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಮಿಷನ್ ಬಿಗಿನ್ ಎಗೇನ್ ಉಪಕ್ರಮದ ಅಡಿಯಲ್ಲಿ ನಗರವು ತೆರೆದುಕೊಳ್ಳುತ್ತಿರುವುದರಿಂದ, ಹೆಚ್ಚಿನ ಜನರು ಕೆಲಸದ ಸ್ಥಳಗಳಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಬಿಎಂಸಿಯು ಬಿಕೆಸಿಯಲ್ಲಿ ಕೆಲಸ ಮಾಡುವ 600ಕ್ಕೂ ಅಧಿಕ ಮಂದಿಯನ್ನು ಪರೀಕ್ಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Jimmy Carter Life Journey: ಜಿಮ್ಮಿ ಕಾರ್ಟರ್- ಮಾನವೀಯತೆ, ಶಾಂತಿಯ ಶಿಲ್ಪಿ
ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ
MUST WATCH
ಹೊಸ ಸೇರ್ಪಡೆ
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.