ಯುವ ಪೀಳಿಗೆಗೆ ಭಜನೆಯ ಬಗ್ಗೆ ಅರಿವು ಮೂಡಿಸಿ:ಅಣ್ಣಿ ಸಿ. ಶೆಟ್ಟಿ


Team Udayavani, Sep 26, 2017, 4:35 PM IST

6554.jpg

ನವಿಮುಂಬಯಿ: ಭಜನೆ ಎಂಬ ಮೂರಕ್ಷರಕ್ಕೆ ಬಹಳ ಮಹತ್ವವಿದ್ದು, ಭಜನೆಯಿಂದ ವಿಭಜನೆಯಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ದಸರಾ ಮಹೋತ್ಸವದ ದಿನಗಳಲ್ಲಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಭಜನ ಸ್ಪರ್ಧೆಯ ಮೂಲಕ ಅರ್ಥಪೂರ್ಣ ಕಾರ್ಯಕ್ರಮ ನಡೆಸುತ್ತಿ ರುವುದು ಸಂತೋಷವಾಗುತ್ತಿದೆ. ನಮ್ಮಿಂದ ಮನಃಪೂರ್ವಕವಾಗಿ ದೇವರಿಗೆ ನೀಡುವಂತಹ ಒಂದು ಸಂಪತ್ತು ಇದ್ದರೆ ಅದು ಭಜನೆ. ಭಜನೆಯನ್ನು ಭಕ್ತಿಪೂರ್ವಕವಾಗಿ ಅರ್ಪಿಸಿದರೆ, ಭಗವಂತನಿಗೆ ಅತಕ್ಕಿಂತ ದೊಡ್ಡ ಹರಕೆಯಿಲ್ಲ. ಕನಕದಾಸರು, ಪುರಂದರದಾಸರು ಭಜನೆಯಿಂದ ಭಗವಂತನನ್ನು ಸಾಕ್ಷಾತ್ಕರಿಸಿಕೊಂಡವರು. ಮರಾಠಿ ಮಣ್ಣಿನಲ್ಲಿ ಭಜನೆಯಿಂದ ಪ್ರಾರಂಭಗೊಂಡ ಪ್ರಾರ್ಥನ ಸ್ಥಳಗಳು ಇಂದು ಪುಣ್ಯಕ್ಷೇತ್ರಗಳಾಗಿ ಕಂಗೊಳಿಸುತ್ತಿರುವುದು ಭಜನೆಯ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ನುಡಿದರು.

ಸೆ. 23ರಂದು ಪೂರ್ವಾಹ್ನ ಜೂಯಿನಗರದ ಬಂಟ್ಸ್‌ ಸೆಂಟರ್‌ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದ ಆರ್‌. ಎನ್‌. ಶೆಟ್ಟಿ ವೇದಿಕೆಯಲ್ಲಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಭಜನ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಮಕ್ಕಳು ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದು,   ಭಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಲ್ಲಿ ನಾವು ಮುಂದಾಗಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಕರೆತಂದು ಭಜನೆಯ ಬಗ್ಗೆ ಅವರಿಗೆ ಉತ್ತೇಜಿಸಬೇಕು ಎಂದು ನುಡಿದು ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ, ನವಿಮುಂಬಯಿ ಹೊಟೇಲ್‌ ಉದ್ಯಮಿ ಶ್ಯಾಮ್‌ ಎನ್‌. ಶೆಟ್ಟಿ ಅವರು ಮಾತನಾಡಿ, ಹಿಂದಿನ ಕಾಲದಲ್ಲಿ ಊರಿನಲ್ಲಿ ಪ್ರತಿ ದಿನ ಭಜನ ಕಾರ್ಯಕ್ರಮ ಜರಗುತ್ತಿತ್ತು. ಆದರೆ ಇಂದು ಈ ಪದ್ಧತಿ ಊರಿನಲ್ಲಿ ಮರೆಯಾಗುತ್ತಿದೆ. ವಿಶೇಷವೆಂದರೆ ಮುಂಬಯಿ, ನವಿಮುಂಬಯಿಯ ತುಳು-ಕನ್ನಡಿಗರ

ಮನೆಮನೆಯಲ್ಲಿ ಇಂದು ಭಜನ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಈ ನಗರದಲ್ಲಿ ಭಜನೆಯನ್ನು  ಭಜಿಸುವುದ
ರೊಂದಿಗೆ ಅಪಾರ ಸಂಖ್ಯೆಯಲ್ಲಿ ಮಂದಿರ ನಿರ್ಮಾಣ ಗೊಂಡಿದೆ. ಆದ್ದರಿಂದ ಜರನು ಆಧ್ಯಾತ್ಮಿಕ ಚಿಂತನೆ ಬೆಳೆಸಿಕೊಂಡು ಮುನ್ನಡೆಯುತ್ತಿದ್ದಾರೆ ಎಂದು ಹೇಳಬಹುದು. ಇದು ನಮ್ಮ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದರು.
ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷ ನ್ಯಾಯವಾದಿ  ಸುಭಾಷ್‌ ಶೆಟ್ಟಿ ಅವರು ಮಾತನಾಡಿ, ಭಜನೆಯಿಂದ ಒಗ್ಗಟ್ಟು ಮತ್ತು ಧಾರ್ಮಿಕ ಚಿಂತನೆ ಬೆಳೆಯುತ್ತದೆ. ದೇವರನ್ನು ಸಾಕ್ಷಾತ್ಕರಿಸಿಕೊಳ್ಳಲು ಉತ್ತಮ ಸಾಧನ ಎಂದರೆ ಅದು ಭಜನೆ ಮಾತ್ರ. ಇಂತಹ ಅರ್ಥಪೂರ್ಣ ಕಾರ್ಯಕ್ರಮ   ಆಯೋಜಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಕೃತಿ, ಸಂಸ್ಕಾರ ಉಳಿಸಿ ಬೆಳೆಸುವ ಉದ್ದೇಶದಿಂದ  ನವರಾತ್ರಿಯ ಶುಭ ಸಂದರ್ಭದಲ್ಲಿ ಭಜನ ಸ್ಪರ್ಧೆ ಯೋಜಿಸಿರುವುದು ಅಭಿನಂದನಾರ್ಹ ಎಂದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಜೆ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ವಿಭಾಗದ ಸಾಧನೆಗಳನ್ನು ವಿವರಿಸಿದರು. ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಛತ್ರಪತಿ ಶಿವಾಜಿ ಪ್ರಶಸ್ತಿ ವಿಜೇತೆ ಸರಳಾ ಬಿ. ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಚಂದ್ರಾವತಿ ತಿಲಕ ಚೌಟ ಅವರು ಪ್ರಾರ್ಥನೆಗೈದರು. ಪತ್ರಕರ್ತ ದಯಾಸಾಗರ್‌ ಚೌಟ ಅವರು ಕಾರ್ಯಕ್ರಮ ನಿರ್ವಹಿಸಿದರು. ಲತಾ ಗೋಪಾಲ್‌ ಶೆಟ್ಟಿ ವಂದಿಸಿದರು. ಆನಂತರ ನಡೆದ ಸ್ಪರ್ಧೆಯಲ್ಲಿ ನಗರ, ಉಪನಗರಗಳ ಸುಮಾರು 30 ತಂಡಗಳು ಭಾಗವಹಿಸಿದ್ದವು.

ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷರುಗಳಾದ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ನ್ಯಾಯವಾದಿ ರತ್ನಾಕರ ಶೆಟ್ಟಿ. ಬಾಬು ಎನ್‌. ಶೆಟ್ಟಿ, ಮುರಳಿ ಕೆ. ಶೆಟ್ಟಿ, ಜಯ ಸಿ. ಶೆಟ್ಟಿ, ಗೋಪಾಲ್‌ ವೈ. ಶೆಟ್ಟಿ, ನ್ಯಾಯವಾದಿ ಸರ್ವೋತ್ತಮ ಶೆಟ್ಟಿ, ರಮೇಶ್‌ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಹೀರಾ ಆರ್‌. ಶೆಟ್ಟಿ, ಶೈಲಜಾ ಎ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಅಸೋಸಿಯೇಶನ್‌ನ ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಶಾರದಾ ಎಲ್‌. ಶೆಟ್ಟಿ, ಕಾರ್ಯದರ್ಶಿ ಲತಾ ಜಿ. ಶೆಟ್ಟಿ, ಕೋಶಾಧಿಕಾರಿ ಪ್ರಭಾ ಜೆ. ಶೆಟ್ಟಿ, ಜತೆ ಕಾರ್ಯದರ್ಶಿ ಶಾಂತಾ ಎನ್‌. ಶೆಟ್ಟಿ, ಜತೆ ಕೋಶಾಧಿಕಾರಿ ಕೃಷ್ಣ ಕುಮಾರಿ ಜೆ. ಶೆಟ್ಟಿ ಉಪಸ್ಥಿತರಿದ್ದರು. 

ಈ ನಗರದಲ್ಲಿ  ಅದರಲ್ಲೂ ಬಂಟರು ಮನೆ, ಮನೆಯಲ್ಲೂ ಭಜನೆ ಮಾಡುವ ಪರಿಪಾಠವನ್ನು ಬೆಳೆಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆಯಿಂದ ಮನೆಯ ಎಲ್ಲಾ ಸದಸ್ಯರಲ್ಲೂ ಆಧ್ಯಾತ್ಮಿಕ ಭಾವನೆ ಬೆಳೆಯುತ್ತದೆ. ಭಜನೆ ಹೇಳುತ್ತಾ ಚಪ್ಪಾಳೆ ತಟ್ಟುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ. ನಮ್ಮೆಲ್ಲರ ಬದುಕು ಸನ್ಮಾರ್ಗದಲ್ಲಿ ನಡೆಯಲು ಭಜನೆ ಅತ್ಯಾವಶ್ಯಕವಾಗಿದೆ. ಮಹಿಳಾ ವಿಭಾಗವು ಭಜನೆಗೆ ವಿಶೇಷವಾದ ಪ್ರಾಧಾನ್ಯತೆಯನ್ನು ನೀಡುತ್ತಿದ್ದು, ಪ್ರತೀ ವರ್ಷ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಅಭಿನಂದನಾರ್ಹ. ಸಂಸ್ಥೆಯ ಎಲ್ಲಾ ಸಮಾಜಪರ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಸಹಕಾರ, ಪ್ರೋತ್ಸಾಹ ಸದಾಯಿರಲಿ 

– ನ್ಯಾಯವಾದಿ ಉಪ್ಪೂರು ಶೇಖರ್‌ ಶೆಟ್ಟಿ 
ಅಧ್ಯಕ್ಷರು : ಬೋಂಬೆ ಬಂಟ್ಸ್‌ ಅಸೋಸಿಯೇಶನ್‌.

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.