ಭಾರತ್‌ ಬ್ಯಾಂಕ್‌: 40ನೇ ಸಂಸ್ಥಾಪನಾ ದಿನ

Team Udayavani, Aug 23, 2018, 4:19 PM IST

2108mum14.jpg

ಮುಂಬಯಿ: ಭಾರತ್‌ ಕೋ. ಆಪ ರೇಟಿವ್‌ ಬ್ಯಾಂಕ್‌ ಮುಂಬಯಿ ಲಿ.ಇದರ 40 ನೇ ಸಂಸ್ಥಾಪನಾ ದಿನಾಚರಣೆಯು ಗೋರೆಗಾಂವ್‌ ಪೂರ್ವದ ಭಾರತ್‌ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಆ. 21ರಂದು ನೆರವೇರಿತು.

ಭಾರತ್‌ ಬ್ಯಾಂಕಿನ ಮುಖ್ಯ ನಿರ್ವಹಣ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಸಿ. ಆರ್‌. ಮೂಲ್ಕಿ ಇವರು ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಕೇಕ್‌ ಕತ್ತರಿಸುವ ಮೂಲಕ 40ನೇ ವಾರ್ಷಿಕ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಇವರು ಪ್ರತಿ ತಿಂಗಳಿಗೆ ಹದಿನಾಲ್ಕು ಸಾವಿರ ರೂ.ಗಳನ್ನು ಖಾತೆಗೆ ಜಮೆ ಮಾಡುವುದರ ಮೂಲಕ ಐದು  ಕಾಲಾ ವಧಿಯಲ್ಲಿ ದಶಲಕ್ಷಾಧಿಪತಿ ಆಗುವ ನೂತನ ಯೋಜನೆಯನ್ನು ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ಮಹಾಪ್ರಬಂಧಕ ವಿದ್ಯಾನಂದ ಎಸ್‌. ಕರ್ಕೇರ, ದಿನೇಶ್‌ ಬಿ. ಸಾಲ್ಯಾನ್‌, ಸುರೇಶ್‌ ಎಸ್‌. ಸಾಲ್ಯಾನ್‌, ತಂತ್ರಜ್ಞಾನ ಮತ್ತು ಮಾಹಿತಿ ವಿಭಾಗದ ಮುಖ್ಯ ಅಧಿಕಾರಿ ನಿತ್ಯಾನಂದ ಎಸ್‌. ಕಿರೋಡಿಯನ್‌, ಉಪ ಮಹಾಪ್ರಬಂಧಕ ಪ್ರಭಾಕರ ಜಿ. ಸುವರ್ಣ, ವಿಶ್ವನಾಥ ಜಿ. ಸುವರ್ಣ, ಮಹೇಶ್‌ ಬಿ. ಕೋಟ್ಯಾನ್‌, ಜನಾರ್ದನ ಪೂಜಾರಿ, ಸತೀಶ್‌ ಬಂಗೇರ, ಹಿರಿಯ ಅಧಿಕಾರಿಗಳು, ಬ್ಯಾಂಕ್‌ ಸಿಬಂದಿಗಳು, ಭಾರತ್‌ ಬ್ಯಾಂಕ್‌ ಎಂಪ್ಲಾಯೀಸ್‌ ಯೂನಿಯನ್‌, ಭಾರತ್‌ ಬ್ಯಾಂಕ್‌ ಆಫೀಸರ್ ಅಸೋಸಿಯೇಶನ್‌, ಭಾರತ್‌ ಬ್ಯಾಂಕ್‌ ಸ್ಟಾಫ್‌ ವೆಲ್ಫೆàರ್‌ನ ಪದಾಧಿಕಾರಿಗಳು, ಮಾಜಿ ಮಹಾಪ್ರಬಂಧಕಿ ಶೋಭಾ ದಯಾನಂದ, ಮಾಜಿ ಪ್ರಬಂಧಕ ನವೀನ್‌ಚಂದ್ರ ಎಸ್‌. ಬಂಗೇರ, ಎನ್‌. ಜಿ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಪ್ರಾಯೋಜಿತ ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ ಮುಂಬಯಿ ಲಿಮಿಟೆಡ್‌ ನಾಲ್ಕು ದಶಕಗಳ ಅವಿಶ್ರಾಂತ ಶ್ರಮದಿಂದ ಗ್ರಾಹಕರ ಮಿತೃತ್ವದ ಬ್ಯಾಂಕ್‌ ಎಂಬ ಹೆಗ್ಗಳಿಕೆಗೆ ಪಾತ್ರ ವಾಗಿದೆ. ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರ ದೂರಗಾಮಿ ಯೋಜನೆ, ಪಾರದರ್ಶಕ ಆಡಳಿತ ವೈಖರಿಯಿಂದ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್‌ ರಾಜ್ಯದಾದ್ಯಂತ 102 ಶಾಖೆ ಗಳನ್ನು  ಹೊಂದಿದೆ. ಎಲ್ಲಾ    ಶಾಖೆಗಳಲ್ಲಿ  ದಿನಾಪೂರ್ತಿ ಗ್ರಾಹಕರೊಂದಿಗೆ ಸಂಸ್ಥಾಪನಾ ದಿನಾಚರಣೆಯನ್ನು ಆಯೋ ಜಿಸಲಾಗಿದೆ. ಹದಿನೆಂಟು ಸಾವಿರ ಕೋ. ರೂ. ಮಿಕ್ಕಿ ವ್ಯವಹಾರ ವನ್ನು ಹೊಂದಿದ್ದು, ದೇಶದ ಮೇಲ್ದರ್ಜೆಯ 5 ಸಹಕಾರಿ ಬ್ಯಾಂಕ್‌ಗಳಲ್ಲಿ ಭಾರತ್‌ ಬ್ಯಾಂಕ್‌ ಒಂದಾಗಿದೆ. ಕೋರ್‌ ಬ್ಯಾಂಕ್‌, ವಿನೂತನ ಆವಿಷ್ಕಾರ, ಯೋಜನಾಬದ್ಧ ಸೇವೆಗಳಿಗೆ ಲೀಡ್‌ ಬ್ಯಾಂಕ್‌ ಎಂಬ ಖ್ಯಾತಿ ಹೊಂದಿದೆ. ಹಾಗೂ ಹಲವಾರು ಪ್ರಶಸ್ತಿಗಳಿಗೆ ಭಾಜನವಾಗಿದೆ. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.