ಭವಾನಿ ಫೌಂಡೇಶನ್ ಟ್ರಸ್ಟ್‌ಗೆ ‘ಅತ್ಯುತ್ತಮ ಸೇವಾ ಪ್ರಶಸ್ತಿ’
Team Udayavani, Sep 2, 2019, 1:15 PM IST
ಮುಂಬಯಿ, ಸೆ. 1: ನಗರದ ಪ್ರಸಿದ್ಧ ಸಮಾಜ ಸೇವಾ ಸಂಸ್ಥೆ ಭವಾನಿ ಫೌಂಡೇಶನ್‌ಗೆ 2019ನೇ ಸಾಲಿನ ‘ಅತ್ಯುತ್ತಮ ಸೇವಾ ಪ್ರಶಸ್ತಿ’ ಲಭಿಸಿದೆ. ಶಿಕ್ಷಣ, ಆರೋಗ್ಯ, ವಿವಾಹ, ರಕ್ತಸಂಗ್ರಹ, ಆದಿವಾಸಿಗಳ ಕಲ್ಯಾಣ, ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ಮೊದಲಾದ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಸಮಾಜಮುಖೀ ಕಾರ್ಯದಲ್ಲಿ ಮಾನವೀಯ ಅನುಕಂಪದಿಂದ ಸ್ಪಂದಿಸುತ್ತಿರುವ ‘ಭವಾನಿ ಫೌಂಡೇಶನ್’ಗೆ ಆ. 30ರಂದು ದಕ್ಷಿಣ ಗೋವಾದ ಹೋಲಿಡೇ ಇನ್ ಹೊಟೇಲ್ನಲ್ಲಿ ನಡೆದ ಐಬೀಚ್ ಫಿಲ್ಮ್ ಫೆಸ್ಟಿವಲ್ನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
ಭವಾನಿ ಫೌಂಡೇಷನ್ ಟ್ರಸ್ಟ್ ಇದರ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ (ಕೆ. ಡಿ. ಶೆಟ್ಟಿ) ಅವರಿಗೆ ಗೋವಾದ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್, ಕೇಂದ್ರ ಆಯುಷ್ ಹಾಗೂ ಉಪ ರಕ್ಷಣ ಸಚಿವ ಶ್ರೀಪಾದ್ ನಾಯ್ಕ, ಉಡುಪಿ ಶಾಸಕ ರಘುಪತಿ ಭಟ್ ಅವರು ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿ ಶುಭಹಾರೈಸಿದರು. ಅಖೀಲ ಭಾರತ ನೇತ್ರ ಚಿಕಿತ್ಸಾ ಸೊಸೈಟಿ, ಕರ್ನಾಟಕ ನೇತ್ರ ಚಿಕಿತ್ರಾ ಸೊಸೈಟಿ ಹಾಗೂ ಪ್ರಸಾದ್ ನೇತ್ರಾಲಯದ ಜಂಟಿ ಆಯೋಜನೆಯಲ್ಲಿ ಜರಗಿದ ಈ ಸಮಾರಂಭದಲ್ಲಿ ನೇತ್ರದಾನ ಕಾರ್ಯಕ್ಕೆ ವಿಶಿಷ್ಟ ಕೊಡುಗೆ ಸಲ್ಲಿಸಿರುವ ಭವಾನಿ ಫೌಂಡೇಷನ್ ಟ್ರಸ್ಟ್ ಸಂಸ್ಥೆಯನ್ನು ಅಭಿನಂದಿಸಲಾಯಿತು. ಅಖೀಲ ಭಾರತ ನೇತ್ರ ಚಿಕಿತ್ಸಾ ವೈಜ್ಞಾನಿಕ ಸಮಿತಿಯ ಡಾ| ಕೃಷ್ಣ ಪ್ರಸಾದ್ ಕುಡ್ಲು, ಡಾ| ಚಿನ್ನಪ್ಪ ಎ. ಜಿ., ಮುಂಬಯಿ ಸಕಾಲ್ ಪತ್ರಿಕೆಯ ಮಹಾಪ್ರಬಂಧಕ ಹಾಗೂ ಭವಾನಿ ಫೌಂಡೇಶನ್‌ನ ವಿಶ್ವಸ್ತ ದಿನೇಶ್ ಶೆಟ್ಟಿ, ಇನ್‌ಸ್ಪೆಕ್ಟರ್ ಗೊಪಾಲ್ ಕುಂದರ್, ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.
‘ಭವಾನಿ ಫೌಂಡೇಶನ್ ಟ್ರಸ್ಟ್’ ಮುಂಬಯಿ: ನಗರದ ಪ್ರಸಿದ್ಧ ಸಮಾಜ ಸೇವಕ, ಉದ್ಯಮಿ ಕೆ. ಡಿ. ಶೆಟ್ಟಿ ಅವರು ತನ್ನ ತಾಯಿಯ ಹೆಸರಿನಲ್ಲಿ ಸ್ಥಾಪಿಸಿದ ಭವಾನಿ ಫೌಂಡೇಶನ್ ಟ್ರಸ್ಟ್ ಪ್ರಸ್ತುತ ಮಹಾರಾಷ್ಟ್ರ ಸೇರಿದಂತೆ ಊರಿನಲ್ಲೂ ಸಮಾಜಪರ ಕಾರ್ಯಗಳೊಂದಿಗೆ ಚಿರ ಪರಿಚಿತವಾಗಿದೆ. ಸಂಸ್ಥೆಯು ಜಾತಿ, ಮತ, ಧರ್ಮವನ್ನು ಮರೆತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಣ, ವೈದ್ಯಕೀಯ ಸಹಾಯ, ಬಡ ಹೆಣ್ಮಕ್ಕಳ ಮದುವೆಗೆ ನೆರವು, ಬಡವರಿಗೆ ಮನೆ ನಿರ್ಮಾಣ, ಆದಿವಾಸಿ ಶಾಲೆಗಳ ಜೀರ್ಣೋದ್ಧಾರ ಇನ್ನಿತರ ಸಮಾಜಪರ ಕಾರ್ಯಕ್ರಮಗಳನ್ನು ಸದ್ದಿಲ್ಲದೆ ಮಾಡುತ್ತಿದೆ. ಕೆ. ಡಿ. ಶೆಟ್ಟಿ ಅವರ ನೇತೃತ್ವದಲ್ಲಿ ಸಂಸ್ಥೆಯು ನೊಂದವರ ಪಾಲಿಗೆ ಅಪತ್ಬ್ಪಾಂಧವ ರೀತಿಯಲ್ಲಿ, ದೀನದಲಿತರ ಕಣ್ಣೀರೊರೆಸುವ ಕಾರ್ಯದಲ್ಲೂ ತೊಡಗಿದೆ.
ಪ್ರತೀ ವರ್ಷ ಲಕ್ಷಾಂತರ ರೂ. ಗಳನ್ನು ಶಿಕ್ಷಣ, ಆರೋಗ್ಯ ಇನ್ನಿತರ ಸಮಾಜಪರ ಕಾರ್ಯಗಳಿಗೆ ವ್ಯಯಿಸುತ್ತಿದೆ. ಊರಿನ ಹೆಚ್ಚಿನ ದೈವ-ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಲ್ಲಿ ದೈವ-ದೇವರ ಬಗ್ಗೆ ಅಪಾರ ನಂಬಿಕೆಯನ್ನು ಹೊಂದಿರುವ ಕೆ. ಡಿ. ಶೆಟ್ಟಿ ಅವರ ಪಾಲು ಮಹತ್ತರವಾಗಿದೆ. ಫೌಂಡೇಶನ್‌ನ ಸಾಧನೆಗಳಿಗೆ ಹಲವಾರು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. ಎಲೆಮರೆಯ ಕಾಯಿಯಂತೆ ಸಮಾಜ ಸೇವೆಯಲ್ಲಿ ತೊಡಗಿರುವ ಕೆ. ಡಿ. ಶೆಟ್ಟಿ ಅವರು ತಮ್ಮ ‘ಭವಾನಿ ಸಮೂಹ’ ಸಂಸ್ಥೆಯಲ್ಲಿ ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಮಂದಿಗೆ ಉದ್ಯೋಗವನ್ನು ನೀಡಿದ್ದಾರೆ. ದೇಶದ ಪ್ರಮುಖ ಕಂಪೆನಿಗಳಲ್ಲಿ ‘ಭವಾನಿ ಸಮೂಹ ಸಂಸ್ಥೆ’ಯು ಗುರುತಿಸಿಕೊಂಡಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.