ಬಿಲ್ಲವ ಸೇವಾ ಸಂಘ ಕುಂದಾಪುರ:29ನೇ ವಾರ್ಷಿಕ ಮಹಾಸಭೆ


Team Udayavani, Sep 13, 2017, 3:26 PM IST

11-Mum12a.jpg

ಮುಂಬಯಿ: ಸಮಾಜದ ಸಂಸ್ಥೆಯು ಅಭಿವೃದ್ಧಿ ಯಾದಾಗ ನಮ್ಮ ಸಮಾಜವು ಅಭಿವೃದ್ಧಿ ಯಾಗುತ್ತದೆ. ಸಂಸ್ಥೆಯು ಬೆಳೆದಂತೆ ಅದರ ಕಾರ್ಯ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯಲು ಸ್ವಂತ ಭವನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕುಂದಾಪುರ ಬಿಲ್ಲವ ಸಂಘ ಮುಂಬಯಿ ಸಂಸ್ಥೆಗೆ ಸುಸಜ್ಜಿತ ಭವನವೊಂದರ ಅಗತ್ಯವಿದೆ. ಸಮಾಜ ಬಾಂಧವರು ಈ ಬೃಹತ್‌ ಯೋಜನೆಗೆ ಕೈಜೋಡಿಸಬೇಕು ಎಂದು ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಅಧ್ಯಕ್ಷ ಮಂಜುನಾಥ ಎ. ಬಿಲ್ಲವ ಶಿರೂರು ಅವರು ನುಡಿದರು.

ಸೆ. 10ರಂದು ವಡಾಲ ಎನ್‌ಕೆಇಎಸ್‌ ಶಾಲಾ ಸಭಾಂಗಣದಲ್ಲಿ ನಡೆದ ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ 29ನೇ ವಾರ್ಷಿಕ ಮಹಾಸಭೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಂಸ್ಕೃತಿಕ ವೈವಿಧ್ಯ ಸಂದರ್ಭದಲ್ಲಿ  ಸಭಾ ಕಾರ್ಯಕ್ರಮದಲ್ಲಿ ಉಪ ಸ್ಥಿತರಿದ್ದು ಮಾತನಾಡಿದ ಅವರು, ಪ್ರಸ್ತುತ ಯುವ ಜನಾಂಗವು ಸಂಘದ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚಾಗಿ ಸಕ್ರಿಯವಾಗುತ್ತಿರುವುದು ಸಂತೋಷದ ಸಂಗತಿಯಾಗಿದೆ. ಅವರ ಸಮಾಜ ಸೇವೆಗೆ ನಾವು ಅವಕಾಶ ಹಾಗೂ ಪ್ರೋತ್ಸಾಹವನ್ನು ನೀಡಬೇಕು ಎಂದರು.

ಸಮಾರಂಭದಲ್ಲಿ ಪಾಲ್ಗೊಂಡ ಸಂಘದ ಗೌರವಾಧ್ಯಕ್ಷ ಸುರೇಶ್‌ ಎಸ್‌. ಪೂಜಾರಿ ಅವರು ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ತಾರೆಯರು. ಅವರಿಗೆ ಎಲ್ಲ ರೀತಿಯ ಸಹಾಯವನ್ನು ಮಾಡಬೇಕಾದುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಕಾರ್ಯನಿರ್ವಹಿಸಬೇಕು. ಸಂಸ್ಥೆಯ ನಿರ್ಮಿಸಲಿರುವ ಭವನಕ್ಕೆ ನನ್ನಿಂದಾಗುವ ಸಹಾಯವನ್ನು ಖಂಡಿತವಾಗಿಯೂ ಮಾಡಲಿದ್ದೇನೆ ಎಂದರು.

ಮಹಿಳಾ ವಿಭಾಗದ ಗೌರವಾಧ್ಯಕ್ಷ ಸಂತೋಷಿ ಎಸ್‌. ಪೂಜಾರಿ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ಸಮಾಜದ ಮಕ್ಕಳಿಗೆ ಒಂದು ರೀತಿಯ ವೇದಿಕೆ ಕಲ್ಪಿಸಿಕೊಟ್ಟಂತಾಗುತ್ತದೆ. ಇದರಿಂದ ಅವರು ಎಲ್ಲಿ ಹೋದರೂ ಅಂಜಿಕೆಯಿಲ್ಲದೆ ಪ್ರತಿಭೆಯನ್ನು ಪ್ರದರ್ಶಿಸಲು ಸಹಕಾರಿಯಾಗುತ್ತದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸೂರ್ಯ ಎಸ್‌. ಪೂಜಾರಿ ಅವರು ಮಾತನಾಡಿ, ಬಿಲ್ಲವ ಸೇವಾ ಸಂಘ ಕುಂದಾಪುರವು ಇಂದು ಬೆಳೆಯುತ್ತಿರುವ ಒಂದು ಸಂಸ್ಥೆಯಾಗಿದೆ. ಥಾಣೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ  ಸಂಘದ ಕಾರ್ಯಚಟುವಟಿಕೆಗಳಿಗೆ ಸ್ಥಳಾವಕಾಶ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭವನ ನಿರ್ಮಾಣದತ್ತ ಎಲ್ಲರೂ ಮುಂದಾಗಬೇಕು. ಸಮಾಜ ಬಾಂಧವರು ಅದಕ್ಕಾಗಿ ತಮ್ಮಿಂದಾದ ಸಹಾಯವನ್ನು ಮಾಡಬೇಕು ಎಂದರು.
ಸಭಾ ಕಾರ್ಯಕ್ರಮವನ್ನು ಗೌರವಾಧ್ಯಕ್ಷ  ಹಾಗೂ ಪದಾಧಿಕಾರಿಗಳು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಮಹಿಳಾ ವಿಭಾಗದವರು ಪ್ರಾರ್ಥನೆಗೈದರು. ಸೀಮಾ ಲೋಕೇಶ್‌ ಅವರು ಸ್ವಾಗತಿಸಿದರು. ವೇದಿಕೆಯಲ್ಲಿ ಗೌರವ ಕೋಶಾಧಿಕಾರಿ ಅಶೋಕ ಎನ್‌. ಪೂಜಾರಿ, ಉಪಾಧ್ಯಕ್ಷರಾದ  ಎನ್‌. ಜಿ. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಆರ್‌. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ ಪೂಜಾರಿ ಕೊಡೇರಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಎಸ್‌. ಕೆ. ಪೂಜಾರಿ, ಸಂಘದ ಭಜನ ಮಂಡಳಿಯ ಸಂಚಾಲಕರಾದ ಸುಶೀಲಾ ಎಸ್‌. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಆಡಳಿತ ಮಂಡಳಿ, ಉಪ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಂಘದ ಗೌರವಾಧ್ಯಕ್ಷ ಸುರೇಶ ಎಸ್‌. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ, ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ  ಮನೋರಂಜನ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರೋತ್ಸಾಹಕ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ದೇವರ ಮಂಟಪವನ್ನು ಸದಾನಂದ ಪೂಜಾರಿ ಅವರು ಅಲಂಕರಿಸಿದ್ದರು. ಕಾರ್ಯಕ್ರಮವನ್ನು ಯಶೋದಾ ಸತೀಶ್‌ ಪೂಜಾರಿ, ಸೀಮಾ ಅನಿಲ್‌ ಪೂಜಾರಿ ಮೊದಲಾದವರು ನಿರ್ವಹಿಸಿದರು. ನರಸಿಂಹ ಎಂ. ಬಿಲ್ಲವ, ಜತೆ ಕಾರ್ಯದರ್ಶಿಗಳಾದ  ಶಂಕರ ಎಂ. ಪೂಜಾರಿ, ಸೀಮಾ ಎಲ್‌. ಪೂಜಾರಿ, ಜತೆ ಕೋಶಾಧಿಕಾರಿಗಳಾದ ಜಗನ್ನಾಥ  ಆರ್‌. ಪೂಜಾರಿ, ಶ್ರೀಧರ ವಿ. ಪೂಜಾರಿ, ಕಾರ್ಯದರ್ಶಿ ಯಶೋದಾ ಎಸ್‌. ಪೂಜಾರಿ, ಕಾರ್ಯದರ್ಶಿ ಜಯಶ್ರೀ ಎ. ಕೋಡಿ, ಕಾರ್ಯದರ್ಶಿ ಅಶೋಕ ಎಂ. ಪೂಜಾರಿ, ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾಜದ ಮಕ್ಕಳಿಂದ, ಮಹಿಳೆಯರಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ನೆರವೇರಿದವು. 
ಚಿತ್ರ-ವರದಿ : ಸುಭಾಷ್‌   ಶಿರಿಯಾ

ಟಾಪ್ ನ್ಯೂಸ್

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.