ಪುಣೆ ಬಿಲ್ಲವ ಸಮಾಜ ಸೇವಾ ಸಂಘದಿಂದ ವಾರ್ಷಿಕ ಪುಸ್ತಕ ವಿತರಣೆ
ಮಕ್ಕಳು ವಿದ್ಯಾವಂತರಾದಾಗ ಸಮಾಜದ ಬೆಳವಣಿಗೆ: ವಿಶ್ವನಾಥ್ ಪೂಜಾರಿ
Team Udayavani, Jun 18, 2019, 4:11 PM IST
ಪುಣೆ: ಜೀವನದಲ್ಲಿ ಶಿಕ್ಷಣವು ಪ್ರಮುಖ ಸ್ಥಾನವನ್ನು ಪಡೆಯುತ್ತದೆ. ಇದೇ ಉದ್ದೇಶವನ್ನಿಟ್ಟು ಅಂದು ನಮ್ಮ ಸಮಾಜಕ್ಕೆ ಜ್ಞಾನದ ಬೆಳಕಿನ ದಾರಿಯನ್ನು ತೋರಿಸಿದ ವಿಶ್ವ ಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಟರಾಗಿ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಅದರಂತೆ ನಾವು ಮೊದಲಿಗೆ ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತಹ ಗುರುತರವಾದ ಕಾರ್ಯ ಮಾಡಬೇಕು. ಈ ನಿಟ್ಟಿನಲ್ಲಿ ನಮ್ಮ ಬಿಲ್ಲವ ಸಮಾಜದ ಎÇÉಾ ಸಂಘಟನೆಗಳು ಊರಿನಲ್ಲಿ, ಮುಂಬಯಿ, ಪುಣೆ ಸೇರಿದಂತೆ ಎÇÉಾ ಪ್ರದೇಶಗಳಲ್ಲಿ ಅಗತ್ಯ ಇರುವರಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯವನ್ನು ಮಾಡುತ್ತಿವೆ. ನಮ್ಮ ಪುಣೆ ಬಿಲ್ಲವ ಸಂಘವು ಕೂಡಾ ಸುಮಾರು 28 ಕ್ಕಿಂತಲೂ ಹೆಚ್ಚು ವರ್ಷಗಳಿಂದ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಕಾರಿಯಾಗಲು ಉಚಿತ ಪುಸ್ತಕ ವಿತರಣೆ, ಶಿಕ್ಷಣಕ್ಕೆ ಧನ ಸಹಾಯ ನೀಡುವಂತಹ ಕಾರ್ಯಗಳನ್ನು ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ಇಂದಿನ ದಿನಗಳ ಆಗುಹೋಗುಗಳ ಅರಿವು ಮೂಡಿಸಿ ಆಯ್ದ ವಿಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಆವಶ್ಯಕತೆಯಿದೆ. ವಿದ್ಯಾರ್ಥಿಗಳು ಕೂಡಾ ತಮಗೆ ಸಿಕ್ಕಿದ ಅವಕಾಶವನ್ನು, ಪ್ರೋತ್ಸಾಹವನ್ನು ಸರಿಯಾಗಿ ಬಳಸಿಕೊಂಡು ಉನ್ನತ ಮಟ್ಟದಲ್ಲಿ ವಿದ್ಯಾವಂತರಾಗಿ ದೇಶದ ಮೌಲ್ಯಗಳನ್ನು ಎತ್ತಿ ಹಿಡಿದು, ದೇಶದ ಸತøಜೆಗಳಾಗಬೇಕು. ಇದರ ಜತೆಯಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿಯನ್ನು ಅರಿತು ಸಮಾಜದ ಅಭಿವೃದ್ದಿಗೆ ಸಹಕಾರಿಯಾಗಿ ಬಾಳಬೇಕು ಎಂದು ಪುಣೆ ಬಿಲ್ಲವ ಸಂಘದ ಅಧ್ಯಕ್ಷರಾದ ವಿಶ್ವನಾಥ್ ಪೂಜಾರಿ ಅವರು ನುಡಿದರು.
ಜೂ. 15 ರಂದು ಸೋಮವಾರ ಪೇಟೆಯ ಸಿದ್ಧಿವಿನಾಯಕ ಕೇಸರ್‌ನ ಸಂಘದ ಕಚೇರಿಯಲ್ಲಿ ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿ ಗಳಿಗೆ ಉಚಿತ ನೋಟ್‌ಬುಕ್ ವಿತರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಮಾಜದ ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆಯಲು ಸಮಾಜದ ಎÇÉಾ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಅವರಿಗೆ ಪ್ರೋತ್ಸಾಹಕರಾಗಿ ಪಾಲಕರು, ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಮಕ್ಕಳು ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೆ ಸಂಘದ ಪ್ರತಿಯೊಂದು ಚಟುವಟಿಕೆಗಳು ತಿಳಿದಂತಾಗುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಹೆಚ್ಚಿನ ಮಕ್ಕಳು ಪಾಲ್ಗೊಂಡಿ¨ªಾರೆ. ಸಮಾಜ ಬಾಂಧವರು ಕೂಡ ಇ¨ªಾರೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸಮಾಜದ ಮಹನೀಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದೆಯೂ ತಮ್ಮೆಲ್ಲರ ಸಹಕಾರ ಇದೆ ರೀತಿ ಇರಲಿ ಎಂದರು.
ವಿಶ್ವನಾಥ್ ಪೂಜಾರಿ ಕಡ್ತಲ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಘದ ಪದಾಧಿಕಾರಿಗಳು ಶ್ರೀ ನಾರಾಯಣಗುರುಗಳ ಫೋಟೋಗೆ ಆರತಿ ಬೆಳಗಿಸಿ, ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಸಂದೇಶ್ ಪೂಜಾರಿ, ಗೌರವ ಕಾರ್ಯದರ್ಶಿ ಸದಾನಂದ ಬಂಗೇರ, ಕೋಶಾಧಿಕಾರಿ ಹರೀಶ್ ಪೂಜಾರಿ, ಜಯರಾಮ ಪೂಜಾರಿ, ಬಾಲಕೃಷ್ಣ ವಿ. ಸುವರ್ಣ, ಸುದೀಪ್ ಪೂಜಾರಿ, ಭಾಸ್ಕರ್ ಪೂಜಾರಿ, ಧನಂಜಯ್ ಪೂಜಾರಿ, ಪ್ರಕಾಶ್ ಪೂಜಾರಿ ಬೈಲೂರು, ರಾಘು ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಕೆ. ಪೂಜಾರಿ, ವನಿತಾ ಪೂಜಾರಿ, ರೇವತಿ ಪೂಜಾರಿ, ಗೀತಾ ಪೂಜಾರಿ, ನವಿತಾ ಪೂಜಾರಿ, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದು ಮಕ್ಕಳಿಗೆ ಪುಸ್ತಕ ವಿತರಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು, ವಿದ್ಯಾರ್ಥಿಗಳು ಪಾಲ್ಗೊಂಡು ಯಶಸ್ಸಿಗೆ ಸಹಕರಿಸಿದರು. ಪುಸ್ತಕ ವಿತರಣೆ ಜೂ.15 ರಿಂದ ಜೂನ್ 22 ರ ತನಕ ಸಂಘದ ಕಚೇರಿಯಲ್ಲಿ ಪ್ರತಿದಿನ ಅಪರಾಹ್ನ 4ರಿಂದ 6ರ ವರೆಗೆ ನಡೆಯಲಿದ್ದು, ಇದರ ಪ್ರಯೋಜನವನ್ನು ಮಕ್ಕಳು ಪಡೆಯಬಹುದು.
ಚಿತ್ರ-ವರದಿ : ಹರೀಶ್ ಮೂಡಬಿದ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.