“ಬಿಲ್ಲವರು ಸರಕಾರಿ ಸವಲತ್ತು ಪಡೆಯಲು ಮುಂದಾಗಬೇಕು’
ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬಿಲ್ಲವ ಭವನಕ್ಕೆ ಭೇಟಿ
Team Udayavani, Jun 8, 2019, 5:03 PM IST
"Billavas, needs,government, privilege,
ಮುಂಬಯಿ: ವಿವಿಧ ಸಂಘಟನೆಗಳನ್ನು ಸ್ಥಾಪಿಸಿಕೊಂಡು ಹಂಚಿ ಹೋಗಿರುವ ಬಿಲ್ಲವರು ಒಂದೇ ವೇದಿಕೆಯಡಿಯಲ್ಲಿ ಒಟ್ಟಾಗಿ ಸರಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆಯಲು ಹೋರಾಡಬೇಕು. ಸರಕಾರವು ಎಲ್ಲಾ ಹಿಂದುಳಿದ ವರ್ಗ, ಪಂಗಡಗಳ ಅಭಿವೃದ್ಧಿಗಾಗಿ ಸಾಕಷ್ಟು ಸವಲತ್ತುಗಳನ್ನು ಕಾಯ್ದಿರಿಸಿದೆ. ಆದರೆ ಅದನ್ನು ಪಡೆಯಲು ಸೂಕ್ತ ರೀತಿಯಲ್ಲಿ ಪ್ರಯತ್ನ ಆಗುತ್ತಿಲ್ಲ. ನಾನು ಈ ಸವಲತ್ತುಗಳನ್ನು ಸಮರ್ಪಕವಾಗಿ ಸಿಗುವಂತೆ ಅನೇಕ ಬಾರಿ ಪ್ರಯತ್ನಿಸಿದ್ದೇನೆ ಎಂದು ಕರ್ನಾಟಕ ಸರಕಾರದ ಮಾಜಿ ಸಚಿವ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಜೂ. 3ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನಕ್ಕೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಅವರು ಸಭೆಯಲ್ಲಿ ಉಪಸ್ಥಿತರಿದ್ದ ಬಿಲ್ಲವರ ಅಸೋಸಿಯೇಶನ್ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ನಾರಾಯಣ ಗುರುಗಳ ಸಂದೇಶದಂತೆ, ಒಗ್ಗಟ್ಟಿನಲ್ಲಿ ಬಲವಿದೆ ಎಂಬುವುದನ್ನು ನಾವು ತೋರಿಸಿಕೊಡಬೇಕಾಗಿದೆ. ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿಯವರು ಬಿಲ್ಲವ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಆ ಆದರ್ಶವನ್ನು ನಾವು ಮುಂದುವರಿಸಿಕೊಂಡು ಹೋಗಬೇಕು. ಕೋಟಿ-ಚೆನ್ನಯರ ಗರಡಿಗಳಿಗೆ ಸಂಬಂಧಿಸಿ ಎಷ್ಟೋ ಎಕರೆ ಜಾಗ ಪಾಳು ಬಿದ್ದಿದೆ. ಇದನ್ನು ಸೂಕ್ತ ರೀತಿಯಲ್ಲಿ ನೋಂದಣಿಗೊಳಿಸಿ ಅಭಿವೃದ್ಧಿ ಪಡಿಸಲು ನಾವು ಪ್ರಯತ್ನಶೀಲರಾಗಬೇಕು. ಮುಂಬಯಿಯ ಬಿಲ್ಲವರ ಅಸೋಸಿಯೇಶನ್ ಜಯ ಸಿ. ಸುವರ್ಣ ಅವರ ನೇತೃತ್ವದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿರುವುದು ಅಭಿಮಾ ನದ ಸಂಗತಿಯಾಗಿದೆ ಎಂದು ನುಡಿದು ಅಸೋಸಿಯೇಶನ್‌ನ ಸಮಾಜಪರ ಕಾರ್ಯಕ್ರ ಮಗಳನ್ನು ಅಭಿನಂದಿಸಿ ಶುಭಹಾರೈಸಿದರು.
ಪ್ರಾರಂಭದಲ್ಲಿ ನಾರಾಯಣ ಗುರುಗಳ ಮೂರ್ತಿಗೆ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾರ್ಥನೆಗೈದರು. ಬಿಲ್ಲವರ ಅಸೋಸಿಯೇಶನ್‌ನ ಉಪಾಧ್ಯಕ್ಷ ಶಂಕರ್ ಡಿ.ಪೂಜಾರಿ ಅವರು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹರೀಶ್ ಜಿ. ಅಮೀನ್, ಶ್ರೀನಿವಾಸ ಆರ್. ಕರ್ಕೇರ, ಜೊತೆ ಕಾರ್ಯದರ್ಶಿಗಳಾದ ಕೇಶವ ಕೆ. ಕೋಟ್ಯಾನ್, ರವೀಂದ್ರ ಎ. ಶಾಂತಿ, ಧರ್ಮೇಶ್ ಸಾಲ್ಯಾನ್, ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಆಡಳಿತ ಸಮಿತಿಯ ಸದಸ್ಯರಾದ ಶಕುಂತಳಾ ಕೆ. ಕೋಟ್ಯಾನ್, ಸುಮಿತ್ರಾ ಎಸ್. ಬಂಗೇರ, ದಿನೇಶ್ ಅಮೀನ್, ನವೀನ್ ಬಂಗೇರ, ವಿಶ್ವನಾಥ ತೋನ್ಸೆ, ಅಶೋಕ್ ಸಸಿಹಿತ್ಲು, ಭಾರತ್ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ ಜೆ. ಪೂಜಾರಿ, ಪ್ರೇಮನಾಥ ಪಿ. ಕೋಟ್ಯಾನ್ ಹಾಗೂ ಉನ್ನತಾಧಿಕಾರಿ ಡಾ| ಯು. ಧನಂಜಯ ಕುಮಾರ್, ಮೋಹನ್‌ದಾಸ್ ಹೆಜ್ಮಾಡಿ, ಗೀತಾಂಜಲಿ ಎಲ್. ಸಾಲ್ಯಾನ್, ಗೋಪಾಲ ಪಾಲನ್, ಸಂಜೀವ ಬಂಗೇರ, ಬಿಲ್ಲವರ ಭವನದ ಪ್ರಬಂಧಕ ಭಾಸ್ಕರ್ ಟಿ. ಪೂಜಾರಿ ಸೇರಿದಂತೆ ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.