ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ: ವಾರ್ಷಿಕ  ಕ್ರೀಡೋತ್ಸವ

Team Udayavani, Jan 9, 2018, 4:15 PM IST

07-Mum01a.jpg

ಮುಂಬಯಿ: ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ವತಿಯಿಂದ  ಸದಸ್ಯರು ಮತ್ತು ಸದಸ್ಯರ ಮಕ್ಕಳಿಗಾಗಿ ವಾರ್ಷಿಕ  ಕ್ರೀಡೋ ತ್ಸವವನ್ನು ಜ. 7ರಂದು ಸಯಾನ್‌ ಪೂರ್ವದ ಜಿಟಿಬಿ ನಗರದಲ್ಲಿರುವ  ಗುರು ನಾನಾಕ್‌ ಕಾಲೇಜು ಮೈದಾನದಲ್ಲಿ  ಹಮ್ಮಿಕೊಳ್ಳಲಾಯಿತು.

ರಾಷ್ಟ್ರೀಯ ಮಟ್ಟದ ವಾಲಿಬಾಲ್‌ ಆಟಗಾರ, ಶಿಕ್ಷಕ ನಾರಾಯಣ ಜಿ. ಪೂಜಾರಿ ಅವರು  ಕೋಟಿ- ಚೆನ್ನಯ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು.  ಸಂಘದ ಗೌರವಾಧ್ಯಕ್ಷ  ಸುರೇಶ ಎಸ್‌. ಪೂಜಾರಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ  ಮಂಜುನಾಥ  ಬಿಲ್ಲವ ಶಿರೂರು ಉಪಸ್ಥಿತರಿದ್ದರು.

ನ್ಯಾಯವಾದಿಗಳಾದ ಆನಂದ ಎಂ. ಪೂಜಾರಿ ಮತ್ತು ಶಕುಂತಳಾ ಆನಂದ ಪೂಜಾರಿ ದಂಪತಿ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅàಸ್‌ ಇದರ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಯುವ ಉದ್ಯಮಿಗಳಾದ ಸುರೇಶ್‌ ಸಿ. ಪೂಜಾರಿ ಬಡಾಕೆರೆ ನಾವುಂದ, ಕೃಷ್ಣ ಪೂಜಾರಿ ಹೇರಂಜಾಲು, ಪರಮೇಶ್ವರ ಪೂಜಾರಿ ಬಿಜೂರು ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಮುಂಜಾನೆ ಸದಸ್ಯ ಬಾಂಧವರಿಂದ ಆಕರ್ಷಕ ಪಥ ಸಂಚಲಕನ ನಡೆಯಿತು. ಕುಂದಾಪುರ ಬಿಲ್ಲವರಿಗಾಗಿ ಆಯೋಜಿಸಲಾಗಿರುವ ಈ ಕ್ರೀಡಾಕೂಟದಲ್ಲಿ 5 ವರ್ಷದ ಪುಟಾಣಿಗಳಿಂದ ಪ್ರಾರಂಭಗೊಂಡು 60 ವರ್ಷ ಮೇಲ್ಪಟ್ಟ ಹಿರಿಯರು ಕೂಡ ಭಾಗವಹಿಸಿದ್ದರು. ವಯೋಮಿತಿಗೆ ಅನುಗುಣವಾಗಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳಾದ  ಕಪ್ಪೆ ಜಿಗಿತ, ಬುಕ್‌ ಬ್ಯಾಲೆನ್ಸ್‌, 50 ಮೀ., 100 ಮೀ.,  200 ಮೀ. ಓಟ ಸೇರಿದಂತೆ ಶಾಟ್‌ಫುಟ್‌, ಲೆಮನ್‌ ಸ್ಪೂನ್‌, ಉದ್ದ ಜಿಗಿತ, ವೇಗ ನಡಿಗೆ, ರಿಲೇ ಹಾಗೂ ಹಗ್ಗ ಜಗ್ಗಾಟ ನಡೆಯಿತು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸೂರ್ಯ ಎಸ್‌. ಪೂಜಾರಿ, ಗೌರವ ಕೋಶಾಧಿಕಾರಿ ಅಶೋಕ ಎನ್‌. ಪೂಜಾರಿ, ಉಪಾಧ್ಯಕ್ಷರುಗಳಾದ  ಎನ್‌. ಜಿ. ಪೂಜಾರಿ, ನರಸಿಂಹ  ಎಂ.  ಬಿಲ್ಲವ, ಜತೆ ಕಾರ್ಯದರ್ಶಿಗಳಾದ ಶಂಕರ್‌ ಎಂ. ಪೂಜಾರಿ, ಸೀಮಾ ಲೋಕೇಶ್‌ ಪೂಜಾರಿ, ಜತೆ ಕೋಶಾಧಿಕಾರಿಗಳಾದ  ಜಗನ್ನಾಥ ಆರ್‌. ಪೂಜಾರಿ, ಶ್ರೀಧರ ವಿ. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ರಂಗ ಪೂಜಾರಿ, ಕಾರ್ಯದರ್ಶಿ ಯಶೋದಾ ಸತೀಶ್‌ ಪೂಜಾರಿ, ಸಾಮಾಜಿಕ ಮತ್ತು ಧಾರ್ಮಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಎಸ್‌. ಕೆ. ಪೂಜಾರಿ, ಕಾರ್ಯದರ್ಶಿ ಅಶೋಕ ಎಂ. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷರಾದ  ಲಕ್ಷ್ಮಣ ಪೂಜಾರಿ ಕೊಡೇರಿ, ಉಪ ಕಾರ್ಯಾಧ್ಯಕ್ಷರುಗಳಾದ ಸೀಮಾ  ಅನಿಲ್‌ ಪೂಜಾರಿ, ಉಮೇಶ್‌ ಎನ್‌. ಪೂಜಾರಿ, ಕಾರ್ಯದರ್ಶಿ ಜಯಶ್ರೀ  ಎ. ಕೋಡಿ, ಜತೆ ಕಾರ್ಯದರ್ಶಿಗಳಾದ ದೀಪಾ ಎಸ್‌. ಪೂಜಾರಿ, ಸಂತೋಷ್‌ ಬಿ. ಪೂಜಾರಿ ಅವರು ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿಯ ಸಮಿತಿಯ ಸದಸ್ಯರು, ಉಪಸಮಿತಿಗಳ  ಪದಾಧಿಕಾರಿಗಳು ಮತ್ತು ಸದಸ್ಯರ ನೇತೃತ್ವದಲ್ಲಿ ಕ್ರೀಡೋತ್ಸವವು ಜರಗಿತು. 

ಚಿತ್ರ-ವರದಿ : ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.