ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಜಯಂತಿ
Team Udayavani, Sep 12, 2017, 2:23 PM IST
ಮುಂಬಯಿ: ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ 29ನೇ ವಾರ್ಷಿಕ ಮಹಾಸಭೆಯು ಸೆ. 10 ರಂದು ಬೆಳಗ್ಗೆ 10 ರಿಂದ ವಡಾಲ ಪಶ್ಚಿಮದ ಎನ್‌ಕೆಇಎಸ್ ಹೈಸ್ಕೂಲ್ ಸಭಾಗೃಹದಲ್ಲಿ ಜರಗಿತು.
ಸಂಘದ ಅಧ್ಯಕ್ಷರಾದ ಮಂಜುನಾಥ ಬಿಲ್ಲವ ಶಿರೂರು ಅವರ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಆಚರಣೆ ಪ್ರಯುಕ್ತ ಬೆಳಿಗ್ಗೆ 8 ರಿಂದ 10ರ ವರೆಗೆ ಸದಸ್ಯರಿಂದ ಭಜನೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.
ಸಂಘದ ಗೌರವಾಧ್ಯಕ್ಷ ಸುರೇಶ ಎಸ್. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜದ ಗಣ್ಯರ ಉಪಸ್ಥಿತಿಯಲ್ಲಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ, ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಮನೋರಂಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವರಿಗೆ ಪ್ರೋತ್ಸಾಹಕ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಸೂರ್ಯ ಎಸ್. ಪೂಜಾರಿ, ಗೌರವ ಕೋಶಾಧಿಕಾರಿ ಅಶೋಕ ಎನ್. ಪೂಜಾರಿ, ಉಪಾಧ್ಯಕ್ಷರುಗಳಾದ ಎನ್. ಜಿ. ಪೂಜಾರಿ, ನರಸಿಂಹ ಎಂ. ಬಿಲ್ಲವ, ಜತೆ ಕಾರ್ಯದರ್ಶಿ ಗಳಾದ ಶಂಕರ ಎಂ. ಪೂಜಾರಿ, ಸೀಮಾ ಎಲ್. ಪೂಜಾರಿ, ಜತೆ ಕೋಶಾಧಿಕಾರಿಗಳಾದ ಜಗನ್ನಾಥ ಆರ್. ಪೂಜಾರಿ, ಶ್ರೀಧರ ವಿ. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಆರ್. ಪೂಜಾರಿ, ಕಾರ್ಯದರ್ಶಿ ಯಶೋದಾ ಎಸ್. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ¾ಣ ಪೂಜಾರಿ ಕೊಡೇರಿ, ಕಾರ್ಯದರ್ಶಿ ಜಯಶ್ರೀ ಎ. ಕೋಡಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಎಸ್. ಕೆ. ಪೂಜಾರಿ, ಕಾರ್ಯದರ್ಶಿ ಅಶೋಕ ಎಂ. ಪೂಜಾರಿ, ಸಂಘದ ಭಜನಾ ಮಂಡಳಿಯ ಸಂಚಾಲಕರಾದ ಸುಶೀಲಾ ಎಸ್. ಪೂಜಾರಿ ಅವರು ಉಪಸ್ಥಿತರಿದ್ದರು. ಆಡಳಿತ ಮಂಡಳಿ, ಉಪ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.