ಬಿಲ್ಲವ ಸಮಾಜ ಸೇವಾ ಸಂಘ ಪುಣೆ: ಅರಸಿನ ಕುಂಕುಮ ಕಾರ್ಯಕ್ರಮ
Team Udayavani, Jan 31, 2018, 11:43 AM IST
ಪುಣೆ: ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಜ. 21 ರಂದು ಕೇತ್ಕರ್‌ರೋಡ್‌ನ ಶ್ಯಾಮ್ ರಾವ್ ಕನ್ನಡ ಹೈಸ್ಕೂಲ್ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಧಾರ್ಮಿಕ ಕಾರ್ಯಕ್ರಮವಾಗಿ ಮೊದಲಿಗೆ ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸರೋಜಿನಿ ಡಿ. ಬಂಗೇರ ಮತ್ತು ಹಿರಿಯರು ಹಾಗೂ ಪದಾಧಿಕಾರಿಗಳು ದೀಪ ಬೆಳಗಿಸಿ ಆರತಿಗೈದು ಪೂಜಾ ವಿಧಿ-ವಿಧಾನಗಳನ್ನು ಪೂರೈಸಿದರು.
ದೀಪಾ ಪೂಜಾರಿ ಹಾಗೂ ನವಿತಾ ಪೂಜಾರಿ ಪ್ರಾರ್ಥನೆಗೈದರು. ಪ್ರಿಯಾ ಯು. ಪಣಿಯಾಡಿ ಸ್ವಾಗತಿಸಿದರು. ಭಾರತಿ ಎಸ್. ಪೂಜಾರಿ ಅವರು ಕಾರ್ಯಕ್ರಮದ ತಯಾರಿ ಹಾಗೂ ಪ್ರಾಯೋಜಕರ ವಿವರವನ್ನು ಸಭೆಗೆ ತಿಳಿಸಿದರು. ಅನಂತರ ಸಂಘದ ಮಹಿಳಾ ಸದಸ್ಯರ ಮುಂದಾಳತ್ವದಲ್ಲಿ ಸೇರಿದ ಎಲ್ಲ ಮಹಿಳೆಯರು ಸಾಮೂಹಿಕವಾಗಿ ಶ್ರೀ ದೇವಿ ಸ್ತೋತ್ರ ಪಠಿಸಿದರು.
ಈ ಸಂದರ್ಭದಲ್ಲಿ ಮಹಿಳೆಯರಲ್ಲಿ ದೈಹಿಕ, ಮಾನಸಿಕ ಸಮತೋಲನೆಯನ್ನು ಕಾಪಾಡಲು ವ್ಯಾಯಾಮದ ಆವಶ್ಯಕತೆಯ ಬಗ್ಗೆ ಕಾಳಜಿ ಮೂಡಿಸುವ ವಿಷಯದ ಬಗ್ಗೆ ಮಾರ್ಗದರ್ಶಕ ಸೂಚನೆಗಳು ಹಾಗು ಮಹಿಳೆಯರು ದೈನಂದಿನ ದಿನಚರಿಯ ಬಗ್ಗೆ ಕೈಕೊಳ್ಳಬೇಕಾದ ನಿಯಮಗಳ ಬಗ್ಗೆ ಮಾರ್ಗದರ್ಶನವನ್ನು ಅಮಿತಾ ಪಿ. ಪೂಜಾರಿ ಹಾಗೂ ಇತರರು ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಒಳಾಂಗಣ ಪ್ರತಿಭಾ ಸ್ಪರ್ಧೆಗಳನ್ನು ಮಹಿಳೆಯರಿಗಾಗಿ ಅಯೋಗಿಸಲಾಗಿತ್ತು. ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭ ಹಾರೈಸಿಕೊಂಡರು. ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದ ಪ್ರಮುಖರಾದ ರೇವತಿ ಪೂಜಾರಿ, ನೂತನ್ ಸುವರ್ಣ, ಉಮಾ ಪೂಜಾರಿ, ಸುನಿತಾ ಪೂಜಾರಿ, ವನಿತಾ ಕರ್ಕೇರ, ಲಲಿತಾ ಪೂಜಾರಿ, ಪ್ರಮಿಳಾ ಪೂಜಾರಿ, ವನಿತಾ ಜೆ. ಪೂಜಾರಿ, ಸುಮಿತ್ರಾ ಪೂಜಾರಿ ಮೊದಲಾದವರು ಸಹಕರಿಸಿದರು. ಮಹಿಳಾ ವಿಭಾಗದ ಸರೋಜಿನಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಈ ಎಲ್ಲ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಆಗಮಿಸಿ ಸಹಕರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋ ಜಿಸಲಾಗಿತ್ತು.
ಚಿತ್ರ-ವರದಿ: ಹರೀಶ್ ಮೂಡಬಿದ್ರೆ ಪುಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.