ಬಿಲ್ಲವರ ಅಸೋಸಿಯೇಶನ್‌ ಭಿವಂಡಿ ಸ್ಥಳೀಯ ಕಚೇರಿ:ಗುರುಜಯಂತಿ

Team Udayavani, Sep 12, 2017, 4:00 PM IST

10-Mum03b.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಭಿವಂಡಿ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಉತ್ಸವವು ಸೆ. 6 ರಂದು ಸ್ಥಳೀಯ ಕಚೇರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 6 ರಿಂದ ಗಣಹೋಮ, ನವಕಲಶಾಭಿಷೇಕ, ವಿಶೇಷ ಪೂಜೆ, ಸಿಯಾಳ ಅಭಿಷೇಕ, ಆರತಿ ಇತ್ಯಾದಿ ವಿಧಿ ವಿಧಾನಗಳು ಪುರೋಹಿತ ಕೆ. ಸದಾಶಿವ ಶಾಂತಿ ಅವರ ದಿವ್ಯಹಸ್ತದಿಂದ ನಡೆಯಿತು.

ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಿವಂಡಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ದಾಸ್‌ ಎ. ಪೂಜಾರಿ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುಮಂಗಳಾ ಮೇಶಿನರಿಯ ಮಾಲಕ ನಾರಾಯಣ ಪೂಜಾರಿ ಮತ್ತು ಶ್ರೀ ನಿತ್ಯಾನಂದ ಭಕ್ತಸೇವಾ ಮಂಡಳಿಯ ಜಯರಾಮ್‌ ಎಂ. ಪೂಜಾರಿ, ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ದೇವು ಎಸ್‌. ಪೂಜಾರಿ, ಭಾರತ್‌ ಬ್ಯಾಂಕ್‌ ಭಿವಂಡಿ ಶಾಖೆಯ ಪ್ರಬಂಧಕ ರತ್ನಾಕರ ಪೂಜಾರಿ ಅವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ದಾನಿಗಳ ಸಹಕಾರದಿಂದ ನಾಲ್ಕು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನಿತ್ತು ಗಣ್ಯರು ಶುಭಹಾರೈಸಿದರು. ಧನ ಸಹಾಯ ನೀಡಿದ ದಾನಿಗಳಾದ ನಾರಾಯಣ ಪೂಜಾರಿ, ರತ್ನಾಕರ ಜಿ. ಪೂಜಾರಿ, ಜಯರಾಮ್‌ ಎಂ. ಪೂಜಾರಿ, ಮೋಹನ್‌ದಾಸ್‌ ಎ. ಪೂಜಾರಿ ಅವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಿ ಗೌರವಿಸಿ ಕೃತಜ್ಞತೆ ಸಲ್ಲಿಸಲಾಯಿತು.

ದೇವರ ಮಂಟಪದ ಪುಷ್ಪಾಲಂಕಾರದ ಪ್ರಾಯೋಜಕತ್ವವನ್ನು ಸಂತೋಷ್‌ ಕೆ. ಪೂಜಾರಿ, ಪ್ರಸಾದದ ಪ್ರಾಯೋಜಕತ್ವವನ್ನು ವಿನಯ್‌ ಎಸ್‌. ಪೂಜಾರಿ, ಫಲವಸ್ತುವಿನ ಪ್ರಾಯೋಜಕತ್ವವನ್ನು ಸೋನಾಲಿ ಪಾಟೀಲ್‌ ಅವರು ವಹಿಸಿ ಸಹಕರಿಸಿದರು. ವಿವಿಧ ಪ್ರಾಯೋಜಕರುಗಳನ್ನು ಸಮಿತಿಯ ವತಿಯಿಂದ ಪದಾಧಿಕಾರಿಗಳು ಗೌರವಿಸಿದರು.

ಗೌರವ ಕಾರ್ಯದರ್ಶಿ ವಂದಿಸಿದರು. ಭಿವಂಡಿ ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸಿದರು. ಸಮಾಜ ಬಾಂಧವರು, ತುಳು-ಕನ್ನಡಿಗರು, ಗುರುಭಕ್ತರು, ಸ್ಥಳೀಯ ದಾನಿಗಳು, ಉದ್ಯಮಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.