ಬಿಲ್ಲವರ ಅಸೋಸಿಯೇಶನ್ ಮಲಾಡ್ : ಗುರುಪೂರ್ಣಿಮೆ
Team Udayavani, Aug 2, 2018, 3:07 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮಲಾಡ್ ಸ್ಥಳೀಯ ಸಮಿತಿಯ ವತಿಯಿಂದ ಗುರುಪೂರ್ಣಿಮೆ ಆಚರಣೆಯು ಜು. 29 ರಂದು ಮಲಾಡ್ ದಪ್ತರಿರೋಡ್‌ನ ಬ್ರಿಜ್ವಾಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಸ್ಥಳೀಯ ಕಚೇರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಅಪರಾಹ್ನ 4 ರಿಂದ ಸಮಿತಿಯ ಸದಸ್ಯರಿಂದ ಭಜನ ಕಾರ್ಯಕ್ರಮ ನೆರವೇರಿತು. ರಾತ್ರಿ 9 ರಿಂದ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿತು. ಆನಂತರ ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಿಲ್ಲವರ ಅಸೋಸಿಯೇಶನ್ ನೂತನ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಸಮಿತಿಯ ವತಿಯಿಂದ ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ ಅವರು ಅತಿಥಿಗಳನ್ನು ಗೌರವಿಸಿದರು.
ಸಮಿತಿಯ ಕಾರ್ಯಕಲಾಪಗಳನ್ನು ಉದ್ದೇಶಿಸಿ ಮಾತನಾಡಿದ ನೂತನ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರು, ಗುರುವಿನ ಭಕ್ತಿಯನ್ನು ನಾವು ತಿಳಿಯಲು ಬಹಳಷ್ಟಿದೆ. ಪ್ರತೀ ಗುರುವಾರ ಇಲ್ಲಿ ಸೇರುವ ಭಕ್ತರೆಲ್ಲರೂ ಗುರುಭಕ್ತರು. ಅವರ ಧ್ಯೇಯ, ಚಿಂತನೆಗಳಿಂದ ಪ್ರೇರಿತರಾಗಿ ಸಮಾಜ ಸೇವೆಯಲ್ಲಿ ತೊಡಗಬೇಕು. ಗುರುಪೂರ್ಣಿಮೆಯ ಮಹತ್ವವನ್ನು ಇಂದಿನ ಯುವಪೀಳಿಗೆಗೆ ತಿಳಿಯಪಡಿಸುವ ಅಗತ್ಯವಿದೆ. ಸಾಧ್ಯವಾದಷ್ಟು ಪರೋಪಕಾರವನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದು ಶುಭಹಾರೈಸಿದರು.
ಕೊನೆಯಲ್ಲಿ ಪ್ರಸಾದ ವಿತರಣೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷ ಕೆ. ಗೋಪಾಲ ಪಾಲನ್, ಉಪಾಧ್ಯಕ್ಷರಾದ ಕೃಷ್ಣ ಎ. ಪೂಜಾರಿ, ಸುರೇಶ್ ಡಿ. ಕರ್ಕೇರ, ಜತೆ ಕಾರ್ಯದರ್ಶಿ ಶಂಕರ ಎಚ್. ಪೂಜಾರಿ, ಗೌರವ ಕೋಶಾಧಿಕಾರಿ ರಕ್ಷಿತ್ ಕೋಟ್ಯಾನ್, ಜತೆ ಕೋಶಾಧಿಕಾರಿ ದೀಕ್ಷಿತ್ ಎಂ. ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಗೌರವ ಕಾರ್ಯದರ್ಶಿ ದಿನೇಶ್ ಸಿ. ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಕೇಂದ್ರ ಕಚೇರಿಯ ಉಪಾಧ್ಯಕ್ಷರುಗಳಾದ ಶಂಕರ ಡಿ. ಪೂಜಾರಿ, ಶ್ರೀನಿವಾಸ ಕರ್ಕೇರ, ಗೌರವ ಕೋಶಾಧಿಕಾರಿ ರಾಜೇಶ್ ಬಂಗೇರ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದು. ಸಮಾಜ ಬಾಂಧವರು, ಸದಸ್ಯ ಬಾಂಧವರು, ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ : ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.