ಬಿಲ್ಲವರ ಅಸೋಸಿಯೇಶನ್ ಮೀರಾರೋಡ್ : ನೂತನ ಪದಾಧಿಕಾರಿಗಳ ಪದಗ್ರಹಣ
Team Udayavani, Aug 15, 2018, 1:13 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಮೀರಾರೋಡ್ ಸ್ಥಳೀಯ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಆಟಿಡೊಂಜಿ ದಿನ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಆ. 11 ರಂದು ಮೀರಾರೋಡ್ ಪೂರ್ವದ ಜಹಾಂಗೀರ್ ಟವರ್‌ನ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ನೂತನ ಅದ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಲವಾರು ಮಹತ್ವಾಕಾಂಕ್ಷೆ ಯೋಜನೆಯೊಂದಿಗೆ ಕಾರ್ಯವೆಸಗುವ ಮುಂಬಯಿ ಬಿಲ್ಲವರ ಅಸೋಸಿಯೇಶನ್ ತವರೂರು ಪಡುಬೆಳ್ಳೆಯಲ್ಲಿ ಸುಮಾರು 17 ಎಕರೆ ವಿಸ್ತೀರ್ಣದಲ್ಲಿ ವಿದ್ಯಾ ಸಂಕುಲವನ್ನು ಸ್ಥಾಪಿಸಲು ಮುಂದಾಗಿದೆ. ಪ್ರಾರಂಭವಾಗಿರುವ ಕಾಮಗಾರಿ ಪೂರ್ಣಗೊಳ್ಳಲು ಪ್ರತಿಯೊಬ್ಬರು ಸ್ವಜಾತಿ ಬಾಂಧವರ ಅಭಯ ಹಸ್ತ ಅನಿವಾರ್ಯವಾಗಿದೆ. ಮನುಕುಲದ ಚಿಂತನೆಗೆ ಓಗೊಡುವ ಸಂಘಟನೆ ನಮ್ಮದಾಗಬೇಕು. ಇದನ್ನು ಇಂದು ಆಯ್ಕೆಯಾದ ಪದಾಧಿಕಾರಿಗಳು ಈಡೇರಿಸುವ ಭರವಸೆಯಿದೆ ಎಂದು ನುಡಿದು ಶುಭಹಾರೈಸಿದರು.
ದ್ವಿತೀಯ ಬಾರಿ ಪುನರಾಯ್ಕೆಗೊಂಡ ಮೀರಾರೋಡ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಎಂ. ಸಾಲ್ಯಾನ್ ಅವರು ಮಾತನಾಡಿ, ನಿರೀಕ್ಷೆಗೂ ಮೀರಿ ಅಸೋಸಿಯೇಶನ್‌ನ ಎಲ್ಲಾ ಸದಸ್ಯರು, ಮೀರಾರೋಡ್ ಪರಿಸರದ ವಿವಿಧ ಸಮುದಾಯದ ಜನತೆ ತುಳು-ಕನ್ನಡಪರ ಸಂಘ-ಸಂಸ್ಥೆಗಳು, ಕನ್ನಡ ಪತ್ರಿಕೆಗಳು, ಹಿತೈಷಿಗಳು ಸಹಕರಿಸಿ ಹರಸಲಿದ್ದಾರೆ. ನಿಮ್ಮೆಲ್ಲರ ತ್ಯಾಗಮಯ ಸಹಕಾರ ಕಾರ್ಯಕ್ರಮದ ಯಶಸ್ಸಿಗೆ ಸಹಕಾರಿಯಾಯಿತು. ತಮಗೆಲ್ಲಾ ಅಂತರಾಳದ ಕೃತಜ್ಞತೆಗಳು ಎಂದರು. ಸ್ಥಳೀಯ ಸಮಿತಿಯ ಗೌರವ ಕಾರ್ಯದರ್ಶಿ ಎನ್. ಪಿ. ಕೋಟ್ಯಾನ್ ಅವರು ವರದಿ ವಾಚಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಮುಂದಿನ ಮೂರು ವರ್ಷಗಳ ಅವಧಿಯ ಕಾರ್ಯಕರ್ತರ ಹೆಸರನ್ನು ಘೋಷಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ವೇದಿಕೆಯಲ್ಲಿ ಕೇಂದ್ರ ಕಾರ್ಯಾಲಯದ ಉಪಾಧ್ಯಕ್ಷರುಗಳಾದ ಶಂಕರ ಡಿ. ಪೂಜಾರಿ, ಹರೀಶ್ ಜಿ. ಅಮೀನ್, ದಯಾನಂದ ಆರ್. ಪೂಜಾರಿ ಕಲ್ವಾ, ಶ್ರೀನಿವಾಸ ಆರ್. ಕರ್ಕೇರ, ಭಾರತ್ ಬ್ಯಾಂಕಿನ ನಿರ್ದೇಶಕ ಗಂಗಾಧರ ಪೂಜಾರಿ, ಸ್ಥಳೀಯ ಸಮಿತಿಯ ಪದಾಧಿಕಾರಿಗಳಾದ ಉದಯ ಕೋಟ್ಯಾನ್, ಭೋಜ ಸಾಲ್ಯಾನ್, ಸುಂದರ ಪೂಜಾರಿ ಉಪಸ್ಥಿತರಿದ್ದರು.
ಚಲನಚಿತ್ರ ಹಾಗೂ ರಂಗನಟ ಜಿ. ಕೆ. ಕೆಂಚನಕೆರೆ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ಆಟಿ ತಿಂಗಳ ವಿಶೇಷತೆಯನ್ನು ಸಾರುವ ಸುಮಾರು ಮೂವತ್ತಕ್ಕೂ ಅಧಿಕ ತಿಂಡಿ-ತಿನಸುಗಳನ್ನು ಮಹಿಳಾ ವಿಭಾಗದವರು ಪ್ರದರ್ಶಿಸಿದರು. ಅಲ್ಲದೆ, ಸದಸ್ಯೆಯರು, ಮಕ್ಕಳು, ಯುವ ವಿಭಾಗದಿಂದ ನೃತ್ಯ ವೈವಿಧ್ಯ ನಡೆಯಿತು.
ಚಿತ್ರ-ವರದಿ : ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.