ಗುರುನಾರಾಯಣ “ಯಕ್ಷಗಾನ ಕಲಾ ಪ್ರಶಸ್ತಿ – 2021′ ಗೆ ಜಬ್ಟಾರ್‌ ಸಮೋ ಆಯ್ಕೆ

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ

Team Udayavani, Aug 31, 2021, 2:06 PM IST

ಗುರುನಾರಾಯಣ “ಯಕ್ಷಗಾನ ಕಲಾ ಪ್ರಶಸ್ತಿ – 2021′ ಗೆ ಜಬ್ಟಾರ್‌ ಸಮೋ ಆಯ್ಕೆ

ಮುಂಬಯಿ: ಬಿಲ್ಲವರ ಅಸೋಸಿ ಯೇಶನ್‌ ಇದರ ಮಾಜಿ ಅಧ್ಯಕ್ಷ, ಭಾರತ್‌ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷ ದಿ| ಜಯ ಸಿ. ಸುವರ್ಣ ಅವರ ಮಾತೋಶ್ರೀ ದಿ| ಅಚ್ಚು ಚಂದು ಸುವರ್ಣ ಅವರ ಸ್ಮರಣಾರ್ಥವಾಗಿ ಸ್ಥಾಪಿಸಿದ ಯಕ್ಷಗಾನ ಕಲಾ ಪ್ರಶಸ್ತಿಯ ಶಾಶ್ವತ ನಿಧಿಯಿಂದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿಯ ಆಶ್ರಯದಲ್ಲಿ ಕೊಡಮಾಡುವ ಯಕ್ಷಗಾನ ಕಲಾ ಪ್ರಶಸ್ತಿ -2021ಗೆ ಖ್ಯಾತ ಯಕ್ಷಗಾನ ಅರ್ಥಧಾರಿ, ಕಲಾವಿದ ಜಬ್ಟಾರ್‌ ಸಮೋ ಅವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು 25,000 ರೂ. ನಗದು, ಪ್ರಶಸ್ತಿ ಫಲಕ, ಸಮ್ಮಾನ ಪತ್ರಗಳನ್ನೊಳಗೊಂಡಿದೆ. ಇತ್ತೀಚೆಗೆ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರ ಅಧ್ಯಕ್ಷತೆಯಲ್ಲಿ ಬಿಲ್ಲವ ಭವನದಲ್ಲಿ ಜರಗಿದ ನಿರ್ಣಾಯಕ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು. ಕಲಾವಿದ ಜಬ್ಟಾರ್‌ ಸಮೋ ಅವರು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿರುವ ಮೂರು ದಶಕಗಳ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ:ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಠಿಯಾಗುತ್ತಾರೆ, ಅಫ್ಘಾನ್ ಸ್ಥಿತಿ ನಮಗೂ ಬರಬಹುದು: ಸಿ.ಟಿ.ರವಿ

ಎಸ್‌. ಎಂ. ಜಬ್ಟಾರ್‌
ಜಬ್ಟಾರ್‌ ಸಮೋ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಯವರು. ಬಾಲ್ಯದಿಂದಲೇ ಯಕ್ಷಗಾನ ದಲ್ಲಿ ಆಕರ್ಷಿತರಾದ ಅವರು ತಮ್ಮ 6ನೇ ಇಯತ್ತೆ ಯಲ್ಲಿರುವಾಗಲೇ “ಭಕ್ತ ಪ್ರಹ್ಲಾದ’ ಪ್ರಸಂಗದಲ್ಲಿ ದನುಜ ಗುರುವಿನ ವೇಷ ಮಾಡುವುದರ ಮೂಲಕ ಯಕ್ಷಗಾನಕ್ಕೆ ಕ್ಷೇತ್ರಕ್ಕೆ ಪಾದಾರ್ಪಣೆಗೈದರು. ಅನಂತರ 18 ವರ್ಷ ಪ್ರಾಯದಿಂದೀಚೆಗೆ ಸತತವಾಗಿ ಊರು ಪರವೂರುಗಳಲ್ಲಿ ಯಥೇತ್ಛ ವೇಷಗಳನ್ನು ನಿರ್ವಹಿಸಿದರು.

1995ರಲ್ಲಿ ಕಿನ್ನಿಗೋಳಿಯ ಯಕ್ಷಲಹರಿ ಸಂಸ್ಥೆಯು ಏರ್ಪಡಿಸಿದ್ದ ತಾಳಮದ್ದಳೆ ಸ್ಪರ್ಧೆಯಲ್ಲಿ ಜಬ್ಟಾರ್‌ ಸಮೋ ಅವರ ತಂಡವು ಪ್ರಥಮ ಸ್ಥಾನ ಪಡೆಯಿತು. ಅಂದು “ಶೂರ್ಪನಖಾ ಮಾನಭಂಗ’ ಪ್ರಸಂಗದಲ್ಲಿ ಜಬ್ಟಾರ್‌ ಅವರು ಘೋರ ಶೂರ್ಪನಖೀಯ ಅರ್ಥ ಹೇಳಿ ಮಿಂಚಿದರು. ಅಂದಿನಿಂದ ಜಬ್ಟಾರ್‌ ಹಿಂದೆ ನೋಡಲಿಲ್ಲ. ನೂರಾರು ದೊಡ್ಡ ತಾಳಮದ್ದಳೆ ಕೂಟಗಳಲ್ಲಿ ಪಾತ್ರವಹಿಸಿ ಖ್ಯಾತಿಯನ್ನು ಗಳಿಸಿದರು. ಬಲಿ, ಶುಕ್ರಾಚಾರ್ಯ, ಕಾರ್ತವೀರ್ಯ, ವಾಲಿ, ಸುಗ್ರೀವ, ರಾವಣ, ಪ್ರಹಸ್ತ, ಅಂಗದ, ಇಂದ್ರಜಿತು, ವೀರಮಣಿ, ಅರ್ಜುನ, ಕರ್ಣ, ಶಲ್ಯ, ಭೀಮ, ಕೌರವ, ಶ್ರೀಕೃಷ್ಣ, ಭೀಷ್ಮ, ಸುಧನ್ವ, ತಾಮ್ರಧ್ವಜ ಮೊದಲಾದವು ಜಬ್ಟಾರ ಸಮೋ ಅವರ ಖ್ಯಾತಿವೆತ್ತ ಪಾತ್ರಗಳು. ಮಂಗಳೂರಿನ ಸಂದೇಶ ಪ್ರತಿಷ್ಠಾನ, ಆಳ್ವಾಸ್‌ ನುಡಿಸಿರಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಜಬ್ಟಾರ್‌ ಸಮೋ ಅನೇಕ ಸಮ್ಮಾನ, ಗೌರವಗಳನ್ನು ಪಡೆದಿದ್ದಾರೆ. ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿಯೂ ನೇಮಕಗೊಂಡಿದ್ದಾರೆ. ಕರ್ನಾಟಕ ಸರಕಾರದ ರೇಷ್ಮೆ ಇಲಾಖೆಯಲ್ಲಿ 28 ವರ್ಷಗಳ ಸೇವೆಯ ಬಳಿಕ ಜಬ್ಟಾರ್‌ ಸಮೋ ನಿವೃತ್ತಿ ಪಡೆದು ಯಕ್ಷಗಾನ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪತ್ನಿ ಹಾಗೂ ಮೂವರು ಮಕ್ಕಳನ್ನು ಹೊಂದಿರುವ ಜಬ್ಟಾರ್‌ ಪ್ರಸ್ತುತ ಪುತ್ತೂರಿನ ಪಡಿಲ್‌ನಲ್ಲಿ ವಾಸವಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆ. 5ರಂದು ಬಿಲ್ಲವ ಭವನದಲ್ಲಿ ಜರಗಲಿರುವ ಗುರುನಾರಾಯಣ ಯಕ್ಷಗಾನ ಮಂಡಳಿಯ ಅಮೃತ ಮಹೋತ್ಸವ ಸಮಾರಂಭದಲ್ಲಿ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ

Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.